ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

Team Udayavani, Jul 19, 2018, 7:00 AM IST

ಬೆಂಗಳೂರು: ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ನೀಡುವಂತೆ ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ನೇತೃತ್ವದಲ್ಲಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನಲ್ಲಿ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ನೀಡುವುದಾಗಿ ಈ ಹಿಂದೆ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಆದರೆ, ಶಾಲೆ-ಕಾಲೇಜುಗಳು ಆರಂಭಗೊಂಡು ಎರಡು ತಿಂಗಳಾದರೂ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕೂಡಲೇ ಉಚಿತ ಪಾಸ್‌ ಘೋಷಿಸುವ ಮೂಲಕ ಸರ್ಕಾರವು ನುಡಿದಂತೆ ನಡೆಯಬೇಕು. ಈಗಾಗಲೇ ಘೋಷಿಸಿದ ಉಚಿತ ಬಸ್‌ ಪಾಸ್‌ ಎದುರು ನೋಡುತ್ತಿದ್ದೇವೆ. ಒಂದೂವರೆ ತಿಂಗಳಿಂದ ಈ ಸಂಬಂಧ ನಿರಂತರ ಹೋರಾಟ ಮಾಡಲಾಗುತ್ತಿದೆ. ಆದರೆ, ಸರ್ಕಾರದಿಂದ ಪೂರಕ ಸ್ಪಂದನೆ ಸಿಗುತ್ತಿಲ್ಲ. ಇದೇ ಧೋರಣೆ ಮುಂದುವರಿದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಹರ್ಷ ನಾರಾಯಣ ಮಾತನಾಡಿ, ಶಾಸಕರಿಗೆ ದುಬಾರಿ ಮೊತ್ತದ ಕಾರುಗಳನ್ನು ಖರೀದಿಸಲು, ಮೋಜು-ಮಸ್ತಿಗೆ ಸರ್ಕಾರದ ಬಳಿ ಹಣ ಇದೆ.ಆದರೆ, ಬಡ ವಿದ್ಯಾರ್ಥಿಗಳಿಗೆ ಪಾಸ್‌ ನೀಡಲು ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಮಂಡ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಸರ್ಕಾರದ ವಿರುದಟಛಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಚಿಕ್ಕಬಳ್ಳಾಪುರದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ನೂರಾರು ವಿದ್ಯಾರ್ಥಿಗಳು ಬೃಹತ್‌ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಮೂಲಕ ವಾಹನಕ್ಕೆ ಸಂಚಾರಕ್ಕೆ ಅಡ್ಡಿಪಡಿಸಿದರು. ಬಳಿಕ ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿಯ ಶಿರಸ್ತೇದಾರರಿಗೆ ಮನವಿ ಸಲ್ಲಿಸಿ, ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿದರು. ಇದೇ ವೇಳೆ, ಉಡುಪಿ,ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಕಲಬುರಗಿ,ಬೀದರ್‌, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

  • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

  • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

  • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

  • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

  • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...