ಪುಟ್ಟರಂಗ ಶೆಟ್ಟಿ ರಾಜೀನಾಮೆಗೆ ಆಗ್ರಹ


Team Udayavani, Jan 6, 2019, 12:30 AM IST

ravikumar.jpg

ಬೆಂಗಳೂರು: ಸಚಿವ ಪುಟ್ಟರಂಗ ಶೆಟ್ಟಿ ಅವರ ಸಿಬ್ಬಂದಿ ಬಳಿ 25.76 ಲಕ್ಷ ರೂ.ಹಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಭಾನುವಾರ ರಾಜ್ಯಾದ್ಯಂತ ಹೋರಾಟ ನಡೆಸಲಿದೆ.

ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಪ ಸದಸ್ಯ ಎನ್‌.ರವಿಕುಮಾರ್‌, ಪುಟ್ಟರಂಗ ಶೆಟ್ಟಿ ಸಿಬ್ಬಂದಿ ಬಳಿ 25.76 ಲಕ್ಷ ರೂ.ಪತ್ತೆಯಾಗಿದ್ದು, ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಸವರಾಜ ಹೊರಟ್ಟಿ ಸಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಬಿಜೆಪಿಯ ಆಗ್ರಹವೂ ಇದೇ ಆಗಿದ್ದು, ರಾಜೀನಾಮೆ ನೀಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಯವರು ಖಾಸಗಿ ಹೋಟೆಲ್‌ನಲ್ಲಿ ಯಾಕೆ ವಾಸ್ತವ್ಯ ಹೂಡುತ್ತಾರೆ ಎಂಬುದಕ್ಕೆ ಕಾರಣ ಗೊತ್ತಿರಲಿಲ್ಲ. ಸಚಿವರ ಕಚೇರಿಯ ಸಿಬ್ಬಂದಿ ಬಳಿಕ ನಗದು ಪತ್ತೆಯಾದ ಬಳಿಕ ಮುಖ್ಯಮಂತ್ರಿಗಳ ವಾಸ್ತವ್ಯದ ಉದ್ದೇಶ ಸ್ಪಷ್ಟವಾಯಿತು. ಸಚಿವರು ವಿಧಾನಸೌಧ ಇಲ್ಲವೇ ನಿವಾಸಗಳಲ್ಲಿ ಇದ್ದರೆ ಮಾಧ್ಯಮಗಳ ಕಣ್ಣಿಗೆ ಬೀಳಬಹುದು, ಭ್ರಷ್ಟಾಚಾರ ಜಗಜ್ಜಾಹೀರಾಗಬಹುದೆಂಬ ಕಾರಣಕ್ಕೆ ಹೋಟೆಲ್‌ನಲ್ಲೇ ವಾಸ್ತವ್ಯ ಹೂಡುವುದು ಸೂಕ್ತ ಎಂಬುದನ್ನು ಮುಖ್ಯಮಂತ್ರಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡುವ ಮೂಲಕ ಮೇಲ್ಪಂಕಿ ಹಾಕಿ ಕೊಟ್ಟಿರುವುದು ಸ್ಪಷ್ಟವಾಗಿದೆ. ಹಾಗಾಗಿ, ಮುಖ್ಯ ಮಂತ್ರಿಗಳೇ, ಹೋಟೆಲ್‌ಗ‌ಳಲ್ಲೇ ವಾಸ್ತವ್ಯ ಹೂಡಿ ಎಂದು ಸಚಿವರಿಗೆ ಹೇಳುತ್ತೀರಾ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಯವರ ಕಲೆಕ್ಷನ್‌ ಎಷ್ಟು?: ಪುಟ್ಟರಂಗಶೆಟ್ಟಿ ಸಿಬ್ಬಂದಿ ಬಳಿ 25.76 ಲಕ್ಷ ರೂ.ನಗದು ಪತ್ತೆಯಾಗಿದ್ದು, ಅದು ಒಂದು ದಿನದ ಕಲೆಕ್ಷನ್‌ ಇರಬೇಕೆಂದು ಹಲವರು ಹೇಳಿದ್ದಾರೆ. ಒಬ್ಬ ಸಚಿವರೇ ನಿತ್ಯ ಇಷ್ಟು ಹಣ ಕಲೆಕ್ಷನ್‌ ಮಾಡಿದರೆ ಮುಖ್ಯಮಂತ್ರಿಗಳ
ದಿನದ ಕಲೆಕ್ಷನ್‌ ಎಷ್ಟು ಎಂಬುದು ಬಹಿರಂಗವಾಗಬೇಕು. ಈ ಬಗ್ಗೆ ತನಿಖೆ ನಡೆಯಬೇಕು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಮಾತೆತ್ತಿದರೆ ಕೇಂದ್ರದ ವಿರುದ್ಧ ಮಾತನಾಡುತ್ತಾರೆ. ಹಿಂದಿನ ಸರ್ಕಾರ 10 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಎರಡನೇ ಸರ್ಕಾರವೂ 10 ಪರ್ಸೆಂಟ್‌ ಸರ್ಕಾರ ಎಂಬುದು ಸಾಬೀತಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಸಾಮಾನ್ಯವಾಗಿ ಸಚಿವರ ಆಪ್ತ ಕಾರ್ಯದರ್ಶಿಗಳು, ಟೈಪಿಸ್ಟ್‌ಗಳ ಬಳಿ ಹಣ ನೀಡಿ ಹೋಗುತ್ತಾರೆ ಎನ್ನಲಾಗುತ್ತದೆ. ಗುತ್ತಿಗೆದಾರರೊಬ್ಬರು ಹಣ ನೀಡಿದ್ದಾರೆ ಎಂಬುದಾಗಿಯೂ ಮಾಧ್ಯಮಗಳಲ್ಲಿ ಬಂದಿದೆ. ನೈತಿಕತೆ ಇದ್ದರೆ ಪುಟ್ಟರಂಗಶೆಟ್ಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡುವವರೆಗೆ ಬಿಜೆಪಿ ಹೋರಾಟ ನಡೆಸಲಿದೆ ಎಂದರು.

ಸಚಿವ ಪುಟ್ಟರಂಗಶೆಟ್ಟಿ ಅವರ ಸಿಬ್ಬಂದಿ ಬಳಿ ಹಣ ದೊರೆತಿದೆ ಎನ್ನುವ ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡ ನಂತರ ವರದಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು.ಪ್ರಕರಣದ ತನಿಖೆಯ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ ಮಾಡುವುದಿಲ್ಲ.ಪ್ರಾಮಾಣಿಕ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸುವೆ.
–  ಎಚ್‌.ಡಿ.ಕುಮಾರಸ್ವಾಮಿ, ಸಿಎಂ.

ಕುಮಾರಸ್ವಾಮಿ ಅತಿ ಸೂಕ್ಷ್ಮ ಸಂವೇದನೆಯ ಸಿಎಂ. ಅವರ ತಂದೆ ಕೂಡ ಸೂಕ್ಷ್ಮ ಸಂವೇದಿ. ಸಣ್ಣ ಅನ್ಯಾಯವಾದರೂ ಅವರಿಗೆ ಬಹಳ ಬೇಗ ಅಳು ಬರುತ್ತದೆ. ರಾಜ್ಯದಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ. ಈಗ ಇಬ್ಬರೂ ಅಳುತ್ತಿದ್ದಾರೆ. ಅವರ ಅಳುವಿನ ಹಿನ್ನೆಲೆ ಬಗ್ಗೆಯೇ ತನಿಖೆ ನಡೆಯಬೇಕಿದೆ.
– ಎನ್‌.ರವಿಕುಮಾರ್‌ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.