ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್‌?

Team Udayavani, Nov 30, 2021, 11:09 AM IST

covid

ಬೆಂಗಳೂರು: ಒಮಿಕ್ರಾನ್‌ ಆತಂಕದ ಬೆನ್ನಲ್ಲೇ ಹೊಸ ವರ್ಷಾಚರಣೆ ಮೇಲೆ ಕರಿನೆರಳು ಆವರಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಹೊಸ ವರ್ಷ ಆಚರಣೆಗೆ ಬ್ರೇಕ್‌ ಬೀಳುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ಪರಿಸ್ಥಿತಿ ಅವಲೋಕಿಸುತ್ತಿದ್ದು ಕೊರೊನಾ ಪ್ರಕರಣ ಗಳು ಕೆಲವೆಡೆ ಮತ್ತೆ ಹೆಚ್ಚಾಗುತ್ತಿರುವುದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸವರ್ಷಾಚರಣೆಗೆ ಅವಕಾಶ ನೀಡಬೇಕೇ ಬೇಡವೇ ಎಂಬ ಚಿಂತನೆಯಲ್ಲಿದೆ.

ನೂತನ ವರ್ಷಾಚರಣೆಗೆ ಅವಕಾಶ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಪಾಲಿಕೆ ಆಯುಕ್ತ ಗೌರವ್‌ಗುಪ್ತಾ, ಮುಂದಿನ ನಾಲ್ಕೈದು ದಿನಗಳಲ್ಲಿ ಈ ಬಗ್ಗೆ ಒಂದು ಚಿತ್ರಣ ದೊರೆಯಲಿದೆ. ಹೀಗಾಗಿ ಹೊಸ ವರ್ಷ ಸಂಭ್ರಮಾಚರಣೆ ಅನುವು ನೀಡಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಆಲೋ ಚನೆ ಮಾಡಿಲ್ಲ.

ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಹೊಸ ರೂಪಾಂತರದ ತಳಿಯ ಬಗ್ಗೆ ಎಚ್ಚರಿಕೆ ವಹಿಸ ಲಾಗಿದೆ. ದಕ್ಷಿಣ ಆಫ್ರಿಕಾ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಕಂಡು ಬಂದಿರುವ ಒಮಿಕ್ರಾನ್‌ ಹೊಸ ರೂಪಾಂತರ ತಿಳಿಯ ಪರಿಣಾಮ ಯಾವ ರೀತಿಯಾಗಿರಲಿದೆ ಎಂಬ ಬಗ್ಗೆ ಸ್ಪಷ್ಟವಾದ ಚಿತ್ರಣವಿಲ್ಲ ಎಂದರು.

“ಒಮಿಕ್ರಾನ್‌’ ಹೊಸರೂಪಾಂತರ ತಳಿಯ ಬಗ್ಗೆ ಹದ್ದಿನ ಕಣ್ಣಿರಿಸಿರುವ ಬಿಬಿಎಂಪಿ ಅಧಿಕಾರಿಗಳು ಆಯಾಕಟ್ಟಿನ ಸ್ಥಳಗಳಲ್ಲಿ ಕೋವಿಡ್‌ ಪರೀಕ್ಷೆಯನ್ನು ಮತ್ತೆ ಪ್ರಾರಂಭಿಸಿದ್ದು ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರವಾಸಿಗರ ಮೇಲೆ ನಿಗಾವಹಿಸಲಾಗಿದೆ.

ಬಸ್‌ ಮತ್ತು ರೈಲ್ವೆ ನಿಲ್ದಾಣ ಸೇರಿದಂತೆ ಇನ್ನಿತರ ಸಾರ್ವಜನಿಕ ಕ್ಷೇತ್ರಗಳಲ್ಲಿ ಬಿಬಿಎಂಪಿಯ ಆರೋಗ್ಯ ಸಿಬ್ಬಂದಿ ಕೋವಿಡ್‌ ಪರೀಕ್ಷೆಯನ್ನು ಆರಂಭಿಸಿದ್ದಾರೆ. ಜತೆಗೆ ಜನಸಂದಣಿ ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಮಾರ್ಷಲ್‌ಗ‌ಳ ಮೂಲಕ ಮಾಸ್ಕ್ ಧರಿಸುವಂತೆ ಮತ್ತು ಗುಂಪು ಸೇರಿದಂತೆ ತಿಳಿವಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಒಮಿಕ್ರಾನ್‌ ವೈರಸ್‌ ದೃಢಪಟ್ಟಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಈಗಾಗಲೇ ಪಾಸಿಟಿವ್‌ ವರದಿ ಬಂದವರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕೆಲಸವಾಗುತ್ತಿದೆ. ಸರ್ಕಾರದ ಮಾರ್ಗ ಸೂಚಿಯಂ ತೆಯೇ ಕಾರ್ಯ ನಡೆಯುತ್ತಿದೆ ಎಂದರು.

ವಿದೇಶಿಗರ ಮೇಲೆ ನಿಗಾ: ಒಮಿಕ್ರಾನ್‌ ಹೊಸರೂಪಾಂತರ ತಳಿಯ ಹಿನ್ನೆಲೆಯಲ್ಲಿ ವಿದೇಶದಿಂದ ಬರುವವರ ಮೇಲೆ ತೀವ್ರ ನಿಗಾವಹಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪರಿಸ್ಥಿಯ ಮೇಲೆ ಗಮನಹರಿಸಿದ್ದಾರೆ. ಜತೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾರು ಯಾರು ಬರುತ್ತಾರೋ ಅವರನ್ನು ಪರೀಕ್ಷಿಸುವ ಕಾರ್ಯ ಕೂಡ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ;- ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

ವಿದೇಶದಿಂದ ಬರುವಂತಹ ಪ್ರಯಾಣಿಕರ ವರದಿ ನೆಗೆಟಿವ್‌ ಬಂದರೆ ಗಂಟಲು ದ್ರಾವಣ ಪರೀಕ್ಷೆ ಕೂಡ ಮಾಡಲಾಗುತ್ತದೆ. ಈಗಾಗಲೇ ದಕ್ಷಿಣ ಆಫ್ರಿಕಾದಿಂದ ಬಂದವರ ಗಂಟಲು ದ್ರಾವಣ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ತಂಡದೊಂದಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದರು.

ಅಖಾಡಕ್ಕೆ ಇಳಿದ ಮಾರ್ಷಲ್‌ಗ‌ಳು

ಒಮಿಕ್ರಾನ್‌ ಹಿನ್ನೆಲೆಯಲ್ಲಿ ಸರ್ಕಾರ ಕೆಲವೊಂದು ಮಾರ್ಗ ಸೂಚನೆ ನೀಡಿದ್ದು ಅದೇ ರೀತಿಯಲ್ಲೆ ಬಿಬಿಎಂಪಿ ಕೂಡ ಕಾರ್ಯ ನಿರ್ವಹಿಸುತ್ತಿದೆ. ಭಾನುವಾರ ಕೆ.ಆರ್‌. ಮಾರುಕಟ್ಟೆ ಸೇರಿದಂತೆ ಇನ್ನಿತರ ಜನನಿಬಿಡ ಪ್ರದೇಶದಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಮಾಸ್ಕ್ ಧರಿಸುವ ಬಗ್ಗೆ ಮತ್ತು ಅಂತರ ಕಾಯ್ದು ಕೊಳ್ಳುವ ಮೂಲಕ ತಿಳಿವಳಿಕೆ ನೀಡಿದ್ದ ಮಾರ್ಷಲ್‌ಗ‌ಳು ಸೋಮವಾರ ಅಖಾಡಕ್ಕಿಳಿದರು. ಕೆಂಪೇಗೌಡ ಬಸ್‌ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ ಮತ್ತು ಕೆ.ಆರ್‌.ಮಾರುಕಟ್ಟೆ ಪ್ರದೇಶದಲ್ಲಿ ಮಾಸ್ಕ್ ಧರಿಸದ ಜನರಿಗೆ ದಂಡ ಹಾಕಿದರು.

ರೈಲ್ವೆ ನಿಲ್ದಾಣದಲ್ಲಿ ಕೋವಿಡ್‌ ಟೆಸ್ಟ್‌

ಐರೋಪ್ಯಾ ರಾಷ್ಟ್ರಗಳಲ್ಲಿ ಕಂಡುಬಂದಿರು ಒಮಿಕ್ರಾನ್‌ ಹೊಸ ರೂಪಾಂತರ ತಳಿಯ ಬಗ್ಗೆ ಎಚ್ಚೆತ್ತುಕೊಂಡಿ ರುವ ಬಿಬಿಎಂಪಿ ರೈಲ್ವೆ ನಿಲ್ದಾಣ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಕೋವಿಡ್‌ ಟೆಸ್ಟ್‌ ಅನ್ನು ಆರಂಭಿಸಿದೆ.

ಸೋಮವಾರ ನಗರದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸಿಟಿ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಲವು ಪ್ರಯಾಣಿಕರಿಗೆ ಕೋವಿಡ್‌ ಟೆಸ್ಟ್‌ ಮಾಡಿದರು. ಒಕ್ರಾಮಿನ್‌ ರೂಪಾಂತರ ತಳಿಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುತ್ತಿರುವ ಜನರ ಮೇಲೆ ಹೆಚ್ಚಿನ ನಿಗಾಯಿರಿಸಲಾಗಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.