ಜಾಹೀರಾತು ಪ್ರದರ್ಶನಕ್ಕೆ ಶೀಘ್ರ ಅನುಮತಿ?

Team Udayavani, Feb 8, 2023, 3:03 PM IST

tdy-15

ಬೆಂಗಳೂರು: ನಗರದಲ್ಲಿ ಅನಧಿಕೃತ ಜಾಹೀರಾತಿಗೆ ಕಡಿವಾಣ ಹಾಕಲು ಜಾಹೀರಾತು ಬೈಲಾಕ್ಕೆ ತಿದ್ದುಪಡಿ ತರಲು ಬಿಬಿಎಂಪಿ ಚಿಂತನೆ ನಡೆಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಬಳಿಯೂ ಚರ್ಚಿಸಲಾಗಿದ್ದು, ಶೀಘ್ರದಲ್ಲಿ ಈ ಕುರಿತು ಅನುಮತಿ ದೊರೆಯುವ ಸಾಧ್ಯತೆಗಳಿವೆ. ನಗರದ ಸೌಂದರ್ಯ ಮತ್ತು ಪರಿಸರ ಹಾಳು ಮಾಡುತ್ತಿರುವ ಜಾಹೀರಾತು ಪ್ರದರ್ಶನವನ್ನು ನಿಷೇಧಿಸಲಾಗಿದೆ.

ಹೈಕೋರ್ಟ್‌ ಆದೇಶ ಹಾಗೂ ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಕೆಲ ಸಂದರ್ಭಗಳನ್ನು ಹೊರತು ಪಡಿಸಿ ಜಾಹೀರಾತು ಪ್ರದರ್ಶನ ಸಂಪೂರ್ಣ ನಿಷೇಧಿಸಲಾಗಿದೆ. ಆದರೂ, ರಾಜಕೀಯ ಪಕ್ಷಗಳು ಸೇರಿ ಖಾಸಗಿಯವರು ಎಲ್ಲೆಂದರಲ್ಲಿ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಅಳವಡಿಸಿ ಬಿಬಿಎಂಪಿ ನಿಯಮ ಹಾಗೂ ಹೈಕೋರ್ಟ್‌ ಆದೇಶ ಉಲ್ಲಂಘಿಸುತ್ತಿದ್ದಾರೆ. ಹೀಗೆ ಅಳವಡಿಸಲಾಗುತ್ತಿರುವ ಅನಧಿಕೃತ ಫ್ಲೆಕ್ಸ್‌ ತೆರವಿನಿಂದಾಗಿ ಬಿಬಿಎಂಪಿಗೆ ಹೆಚ್ಚುವರಿ ಕೆಲಸದ ಜತೆಗೆ ಖರ್ಚು ಹೆಚ್ಚುವಂತಾಗಿದೆ. ಈ ಸಮಸ್ಯೆ ನಿವಾರಿಸುವ ಸಲುವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯ್ದ ಭಾಗಗಳಲ್ಲಿ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ನಿಯಮಕ್ಕೆ ಅನುಮತಿಸಲು ಜನಪ್ರತಿನಿಧಿಗಳ ಒತ್ತಡ: ನಗರದಲ್ಲಿ ಜಾಹೀರಾತು ಅಳವಡಿಕೆ, ಯಾವ ಪ್ರದೇಶದಲ್ಲಿ ಅದಕ್ಕೆ ಅವಕಾಶ ನೀಡಬೇಕು, ದರ ಎಷ್ಟು ನಿಗದಿ ಮಾಡಬೇಕು ಎಂಬುದು ಸೇರಿ ಇನ್ನಿತರ ವಿಷಯಗಳನ್ನಾಧರಿಸಿ 2019ರಲ್ಲಿಯೇ ಜಾಹೀರಾತು ನಿಯಮ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಈ ನಿಯಮಕ್ಕೆ ಸಂಬಂಧಿಸಿದ ಕಡತವನ್ನು ಪರಿಶೀಲಿಸಿರುವ ನಗರಾಭಿವೃದ್ಧಿ ಇಲಾಖೆ 2021ರ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸಲಾಗಿದೆ. ಆದರೆ, ಈವರೆಗೆ ಮುಖ್ಯಮಂತ್ರಿಗಳಿಂದ ನೂತನ ಬಿಬಿಎಂಪಿ ಜಾಹೀರಾತು ನಿಯಮ 2019ಕ್ಕೆ ಅನುಮತಿ ದೊರೆತಿಲ್ಲ. ಇದೀಗ ಜಾಹೀರಾತು ನಿಯಮ ಅಳವಡಿಕೆಗೆ ಅನುಮತಿ ನೀಡುವಂತೆ ಬೆಂಗಳೂರಿನ ಕೆಲ ಶಾಸಕರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

ಸದ್ಯ ಪಿಪಿಪಿಗೆ ಮಾತ್ರ ಅನುಮತಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯ ವಾರ್ತಾ ಇಲಾಖೆ ಅಳವಡಿಸಿರುವ ಬೃಹತ್‌ ಹೋರ್ಡಿಂಗ್ಸ್‌ಗಳಲ್ಲಿ ಸರ್ಕಾರದ ಕಾರ್ಯಕ್ರಮಗಳ ಜಾಹೀರಾತನ್ನು ಮಾತ್ರ ಪ್ರದರ್ಶಿಸಲಾಗುತ್ತಿದೆ. ಅದನ್ನು ಹೊರತು ಪಡಿಸಿದರೆ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವ ಶೌಚಾಲಯ, ಪಾದಚಾರಿ ಮೇಲ್ಸೇತುವೆ, ಬಸ್‌ ನಿಲುಗಡೆ ಸ್ಥಳ ಸೇರಿ ಇನ್ನಿತರ ನಿರ್ಮಾಣದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಅನುಮತಿಸಲಾಗುತ್ತಿದೆ. ಅದನ್ನು ಹೊರತುಪಡಿಸಿ ದರೆ ಖಾಸಗಿಯವರು ಹೋರ್ಡಿಂಗ್ಸ್‌ಗಳನ್ನು ಅಳವಡಿಸುವುದು, ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳ ಪ್ರದರ್ಶನಕ್ಕೆ ಅನುಮತಿಯಿಲ್ಲ.

ನೂತನ ಕ್ರಮದಿಂದ ಆದಾಯ: ಸಾರ್ವಜನಿಕ ಸ್ಥಳದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಖಾಸಗಿಯವರಿಗೆ ಅನುಮತಿಸುವುದರಿಂದ ಬಿಬಿಎಂಪಿಯ ಆದಾಯ ವೃದ್ಧಿಯಾಗಲಿದೆ. ಈ ಹಿಂದೆ ಜಾಹೀರಾತು ಪ್ರದರ್ಶನ ನಿಷೇಧಿಸುವವರೆಗೆ ಬಿಬಿಎಂಪಿಗೆ ವಾರ್ಷಿಕ 40ರಿಂದ 50 ಕೋಟಿ ರೂ. ಮಾತ್ರ ಆದಾಯ ಬರುತ್ತಿತ್ತು. ಅದಕ್ಕೆ ಪ್ರಮುಖ ಕಾರಣ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 8 ಸಾವಿರಕ್ಕೂ ಹೆಚ್ಚಿನ ಜಾಹೀರಾತು ಹೋರ್ಡಿಂಗ್ಸ್‌ಗಳಲ್ಲಿ ಶೇ. 50 ಅಕ್ರಮ ಹಾಗೂ ಬಿಬಿಎಂಪಿಯಲ್ಲಿ ನೋಂದಣಿ ಮಾಡಿಕೊಳ್ಳದೇ ಇರುವಂತಹದ್ದಾಗಿದ್ದವು. ಆದರೆ, ಬಿಬಿಎಂಪಿ ಜಾಹೀರಾತು ನಿಯಮ 2019 ಜಾರಿಯ ನಂತರ ಬಿಬಿಎಂಪಿಗೆ 200ರಿಂದ 300 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಹೊಂದಲಾಗಿದೆ.

ಹೋರ್ಡಿಂಗ್ಸ್‌ಗಳಿಗೆ ಪ್ರತ್ಯೇಕ ಸಂಖ್ಯೆ ನಿಗದಿ : ಈ ಹಿಂದೆಯೇ ರೂಪಿಸಲಾಗಿರುವ ಬಿಬಿಎಂಪಿ ಜಾಹೀರಾತು ನಿಯಮ 2019ಕ್ಕೆ ಅನುಮತಿ ದೊರೆತ ನಂತರ ಬಿಬಿಎಂಪಿ ಕಂದಾಯ ವಿಭಾಗ ಜಾಹೀರಾತು ಪ್ರದರ್ಶನದ ಸ್ಥಳಗಳನ್ನು ನಿಗದಿ ಮಾಡಲಿದೆ. ಅಲ್ಲದೆ, ಪ್ರತಿ ಜಾಹೀರಾತು ಹೋರ್ಡಿಂಗ್‌ಗೂ ಪ್ರತ್ಯೇಕ ಆರ್‌ಎಫ್ಐಡಿ ಸಂಖ್ಯೆಯನ್ನು ನೀಡಲಿದೆ. ಹಾಗೆಯೇ, ಪ್ರತಿ ಹೋರ್ಡಿಂಗ್‌ನ್ನು ಜಿಪಿಎಸ್‌ ಮ್ಯಾಪಿಂಗ್‌ ಮಾಡಲಾಗುತ್ತದೆ. ಅದರಿಂದ ಜಾಹೀರಾತು ಹೋರ್ಡಿಂಗ್‌ನ ಲೆಕ್ಕ ಸಮರ್ಪಕವಾಗಿಟ್ಟುಕೊಳ್ಳಲು, ಅದನ್ನು ಹರಾಜಿನ ಮೂಲಕ ಜಾಹೀರಾತು ಪ್ರದರ್ಶಕರಿಗೆ ನೀಡಲು ಅನುಕೂಲವಾಗಲಿದೆ. ಈ ಎಲ್ಲದರ ಬಗ್ಗೆಯೂ ನಿಯಮದಲ್ಲಿ ಉಲ್ಲೇಖೀಸಲಾಗಿದೆ.

ಮಾಸಿಕ 10 ಪ್ರಕರಣ : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್‌ ಮತ್ತು ಬ್ಯಾನರ್‌ ಅಳವಡಿಸುವವರ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಪ್ರತಿ ವಲಯದಲ್ಲಿ ಅನಧಿಕೃತ ಜಾಹೀರಾತು ಪ್ರದರ್ಶಕರ ವಿರುದ್ಧ ಮಾಸಿಕ ಕನಿಷ್ಠ 10 ಪ್ರಕರಣ ದಾಖಲಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಜಾಹೀರಾತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಸಿದ್ಧಪಡಿಸಲಾಗಿರುವ ಬಿಬಿಎಂಪಿ ಜಾಹೀರಾತು ನಿಯಮ 2019ರಲ್ಲಿ ಎಲ್ಲ ಅಂಶಗಳಿದ್ದು, ಮುಖ್ಯಮಂತ್ರಿಗಳ ಒಪ್ಪಿಗೆ ನಂತರ ಅದನ್ನು ಜಾರಿ ಮಾಡಲಾಗುವುದು. ಅದರಿಂದ ಬಿಬಿಎಂಪಿಗೆ ಆದಾಯವೂ ಬರಲಿದೆ.  -ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ್ತ

-ಗಿರೀಶ್‌ ಗರಗ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.