ಇಡೀ ದಿನ ಸುರಿದ ಮಳೆ


Team Udayavani, Aug 28, 2017, 11:44 AM IST

rain.jpg

ಬೆಂಗಳೂರು: ಭಾನುವಾರ ಇಡೀ ದಿನ ಸುರಿದ ಜಡಿಮಳೆಗೆ ನಗರ ಸಂಪೂರ್ಣ ನೆನೆದಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡು, ನಾಲ್ಕಕ್ಕೂ ಹೆಚ್ಚು ಮರಗಳು ನೆಲಕಚ್ಚಿದವು. ಮದ್ಯಾಹ್ನದಿಂದ ಶುರುವಾದ ಮಳೆ ರಾತ್ರಿವರೆಗೂ ಸುರಿಯಿತು. ಆಗಾಗ್ಗೆ ಬಿಡುವು ನೀಡಿದಂತೆ ಕಂಡುಬಂದರೂ ಕೆಲವೇ ಹೊತ್ತಿನಲ್ಲಿ ಮತ್ತೆ ಹನಿಯುತ್ತಿತ್ತು.

ನಗರದಲ್ಲಿ ಗರಿಷ್ಠ 40 ಮಿ.ಮೀ. ಮಳೆ ದಾಖಲಾಗಿದೆ. ಆದರೆ, ಹಬ್ಬ ಮತ್ತು ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ನಗರ ಬಹುತೇಕ ಖಾಲಿಯಾಗಿತ್ತು. ಹಾಗಾಗಿ, ಇದರ ಬಿಸಿ ಜನರಿಗೆ ಅಷ್ಟಾಗಿ ತಟ್ಟಲಿಲ್ಲ.  ನಗರದಲ್ಲಿ ಹಬ್ಬದ ಉತ್ಸಾಹಕ್ಕೆ ಮಾತ್ರ ಮಳೆ ತಣ್ಣೀರೆರಚಿತು. ಗಣೇಶನ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ವಿವಿಧ ಬಡಾವಣೆಗಳ ಸಂಘಟನೆಗಳು ತಮಟೆ, ಮೆರವಣಿಗೆ, ಡಿಜೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದವು.

ಆದರೆ, ಮಳೆ ನಿರಂತರವಾಗಿ ಇದ್ದುದರಿಂದ ಇದರ ಅಬ್ಬರಕ್ಕೆ ಬ್ರೇಕ್‌ ಬಿದ್ದಿತು. ವಾಹನದಲ್ಲೇ ಗಣೇಶನ ವಿಸರ್ಜನೆ ಮಾಡಿ ಬಂದರು. ಮೊದಲೇ ನಗರ ಖಾಲಿಯಾಗಿತ್ತು. ಈ ಮಧ್ಯೆ ಮಳೆ ಕೂಡ ಇರುವುದರಿಂದ ಬಹುತೇಕ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಮೆಜೆಸ್ಟಿಕ್‌ ಸೇರಿದಂತೆ ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಪ್ರಮುಖ ನಿಲ್ದಾಣಗಳ ಆಸುಪಾಸು ಮಾತ್ರ “ಪೀಕ್‌ ಅವರ್‌’ನಲ್ಲಿ ವಾಹನದಟ್ಟಣೆ ಹೆಚ್ಚಿತ್ತು.  ಹಾಗಾಗಿ, ತುಸು ಸಂಚಾರದಟ್ಟಣೆ ಕಂಡುಬಂತು. 

ಲಾಲ್‌ಬಾಗ್‌, ಕಬ್ಬನ್‌ ಉದ್ಯಾನ ಸೇರಿದಂತೆ ಪ್ರಮುಖ ಉದ್ಯಾನಗಳು, ವಿಧಾನಸೌಧ ಮುಂಭಾಗ ಮಳೆಯಲ್ಲೂ ಜನರ ಓಡಾಟ ಕಂಡುಬಂತು. ಮಧ್ಯಾಹ್ನದಲ್ಲೂ ಮೋಡಮುಸುಕಿದ ವಾತಾವರಣ, ಈ ಮಧ್ಯೆ ಬಂದು-ಹೋಗುತ್ತಿದ್ದ ಮಳೆಗೆ ಜನ ಮೈಯೊಡ್ಡಿ, ಸೆಲ್ಫಿà ತೆಗೆದುಕೊಳ್ಳುವುದು ಸಾಮಾನ್ಯವಾಗಿತ್ತು. 

ಮಳೆಯಿಂದ ಅರಕೆರೆಯ ಶಾಂತಿನಿಕೇತನ ಮತ್ತು ಮೈಕೋ ಲೇಔಟ್‌, ಬನಶಂಕರಿಯಲ್ಲಿನ ನಾಗಲಕ್ಷ್ಮೀ ಕಲ್ಯಾಣ ಮಂಟಪದ ಬಳಿ ಮೂರು ಮರಗಳು ಧರೆಗುರುಳಿವೆ. ಹೊಸೂರು ರಸ್ತೆಯ ಜಾನ್ಸನ್‌ ಮಾರುಕಟ್ಟೆ ಬಳಿ ಮರದ ಕೊಂಬೆಯೊಂದು ಬಿದ್ದಿದೆ. ಬ್ರಿಗೇಡ್‌ ರಸ್ತೆ ಜಲಾವೃತಗೊಂಡು ಸಂಚಾರ ವ್ಯತ್ಯಯ ಉಂಟಾಯಿತು.

ಟಾಪ್ ನ್ಯೂಸ್

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road accident

ರಸ್ತೆ ಅಪಘಾತ: ವರ್ಷಕ್ಕೆ 2.91 ಲಕ್ಷ ಕೋಟಿ ನಷ್ಟ!

High court of karnataka

ವರದಿಗೆ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಹೈ ಸೂಚನೆ‌

ನಟಿ ಮೇಲೆ ಹಲ್ಲೆ- ಮಾಜಿ ಪ್ರಿಯಕರ ಸೆರೆ

ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

ನಿಷೇಧಿತ ನೋಟುಗಳ ಬದಲಾವಣೆ ಯತ್ನ ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿ ಐವರ ಬಂಧನ | 80 ಲಕ್ಷ ರೂ. ಮೌಲ್ಯದ ಅಮಾನ್ಯಗೊಂಡ ನೋಟು ವಶ

ನಿಷೇಧಿತ ನೋಟುಗಳ ಬದಲಾವಣೆ ಯತ್ನ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.