ಮಳೆ: ಮರ ಬಿದ್ದು ಇಬ್ಬರು ಸಾವು
Team Udayavani, Apr 23, 2018, 6:10 AM IST
ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಪೂರ್ವ ಮುಂಗಾರು ಮಳೆಯಾಗಿದ್ದು, ಮಳೆ ಸಂಬಂಧಿ ಅವಘಡಕ್ಕೆ ಇಬ್ಬರು ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಸಮೀಪ ಮರವೊಂದು ಕಾರಿನ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿನ್ನಮ್ಮ (55), ಮೇನಕಾ (30) ಮೃತಪಟ್ಟವರು. ಕಾರಿನಲ್ಲಿ ಸ್ವಗ್ರಾಮ ಹೊಂಕರವಳ್ಳಿಗೆ ವಾಪಸ್ ಆಗುವಾಗ ಬಿರುಗಾಳಿ ಬೀಸಿದ ಪರಿಣಾಮ ಕುನಿಗನಹಳ್ಳಿ ಗ್ರಾಪಂ ವ್ಯಾಪ್ತಿಯ ಬಂದಿಹಳ್ಳಿ ಗ್ರಾಮದ ಸಮೀಪ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿನ ಹಿಂದಿನ ಸೀಟಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ವಸಂತ ಹಾಗೂ ಮುಂದಿನ ಸೀಟಿನಲ್ಲಿದ್ದ ಸಂಬಂಧಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ತುಮಕೂರು ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆ ಸುರಿದು ಮರಗಳು ಧರೆಗುರುಳಿವೆ. ಈ ಮಧ್ಯೆ ಭಾನುವಾರ ಹಾಸನ,ಚಾಮರಾನಗರ, ರಾಮನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ,ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಹಾಸನದಲ್ಲಿ ಗರಿಷ್ಠ 60 ಮಿ.ಮೀ.ಮಳೆ ದಾಖಲಾಗಿದೆ. ಇನ್ನೂ ಮೂರ್ನಾಲ್ಕು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ