ರಂಗಮಂದಿರ ಪುನರಾರಂಭಕ್ಕೆ ರ್ಯಾಲಿ

Team Udayavani, May 14, 2019, 3:04 AM IST

ಬೆಂಗಳೂರು: ಕಲಾಗ್ರಾಮದ ರಂಗಮಂದಿರ ಪುನರಾರಂಭಿಸಲು ಒತ್ತಾಯಿಸಿ ರಂಗವಸಂತ ಸಾಂಸ್ಕೃತಿಕ ಸೇವಾ ಟ್ರಸ್ಟ್‌ ವತಿಯಿಂದ ಪುರಭವನದ ಎದುರು ಸೋಮವಾರ ಬೈಕ್‌ರ್ಯಾಲಿ ನಡೆಸಿದರು.

ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್‌ ಸದಸ್ಯರು, ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿರುವ ರಂಗಮಂದಿರವು ಸುಮಾರು 5 ತಿಂಗಳ ಹಿಂದೆ ಬೆಂಕಿ ಅವಘಡದಿಂದ ಹಾನಿಗೊಳಗಾಗಿತ್ತು.

ಹೀಗಾಗಿ, ಕನ್ನಡ ಸಂಸ್ಕೃತಿ ಇಲಾಖೆಯು ಆ ರಂಗಮಂದಿರವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಆನಂತರ ಇಲಾಖೆಯು ಯಾವುದೇ ದುರಸ್ತಿಗೆ ಮುಂದಾಗದೇ ನಿರ್ಲಕ್ಷ್ಯ ತೋರಿದೆ. ರಂಗಭೂಮಿ ಮುಚ್ಚಿರುವುದರಿಂದ ರಂಗ ತಂಡಗಳಿಗೆ ಹಾಗೂ ಸ್ಥಳೀಯ ಪ್ರೇಕ್ಷಕರಿಗೆ ಸಾಕಷ್ಟು ತೊಂದರೆಯಾಗಿದೆ.

ಹೀಗಾಗಿ, ಕನ್ನಡ ಸಂಸ್ಕೃತಿ ಇಲಾಖೆಗೆ ರಂಗಮಂದಿರದ ಅವಶ್ಯಕತೆಯನ್ನು ಮನವರಿಕೆ ಮಾಡಿಕೊಡಲು “ರಂಗಭೂಮಿ ಉಳಿಸಿ, ಬೆಳೆಸಿ’ ಎಂಬ ಘೋಷಣೆಯೊಂದಿಗೆ ನಗರದ ವಿವಿಧೆಡೆ ಬೈಕ್‌ ರ್ಯಾಲಿ ನಡೆಸಿ ಆನಂತರ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಮನವಿ ಪತ್ರಸಲ್ಲಿಸಲಾಯಿತು ಎಂದು ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ