ಪಶ್ಚಿಮ ಆಫ್ರಿಕಾದಲ್ಲಿ 19ರಂದೇ ರವಿ ಪೂಜಾರಿ ಸೆರೆ

Team Udayavani, Feb 2, 2019, 6:15 AM IST

pashchima.jpg

ಬೆಂಗಳೂರು: ಸಾರ್ವಜನಿಕರಿಗೆ ಬೆದರಿಕೆಯೊಡ್ಡುತ್ತಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಜ.19ರಂದೇ ಬಂಧಿಸಲಾಗಿದೆ. ಸ್ಥಳೀಯ ಸರ್ಕಾರದ ಸಹಕಾರದಲ್ಲಿ ಆತನನ್ನು ರಾಜ್ಯಕ್ಕೆ ಕರೆತರುವ ಕಾರ್ಯ ನಡೆದಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕುಮಾರಸ್ವಾಮಿ, ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ಶ್ರೀಮಂತರು, ವ್ಯಾಪಾರಿಗಳು, ಬಿಲ್ಡರ್‌ಗಳಿಗೆ ದೂರವಾಣಿ ಕರೆ ಮೂಲಕ ಬೆದರಿಕೆ ಒಡ್ಡಿ ಹಣ ವಸೂಲಿ ಮಾಡಲಾಗುತ್ತಿತ್ತು.

ಹಾಗಾಗಿ ನಮ್ಮ ಸರ್ಕಾರ ರಚನೆಯಾದ ಆರಂಭದಲ್ಲೇ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ಗುಪ್ತಚರ ಇಲಾಖೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಸಭೆ ನಡೆಸಿ ಚರ್ಚಿಸಿದ್ದೆ. ರವಿ ಪೂಜಾರಿ ಯಾವ ಪ್ರದೇಶದಲ್ಲಿ ಕುಳಿತು ದೂರವಾಣಿ ಕರೆ ಮಾಡಿ ಬೆದರಿಸುತ್ತಿದ್ದಾನೆ ಹಾಗೂ ವ್ಯವಹಾರ ನಿರ್ವಹಿಸುತ್ತಿದ್ದಾನೆ ಎಂಬುದನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದೆ ಎಂದು ಹೇಳಿದರು.

ಅದರಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾದರು. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಗುಜರಾತ್‌ ರಾಜ್ಯಗಳಲ್ಲಿ 2001ರಿಂದ ರವಿ ಪೂಜಾರಿಯ ಚಟುವಟಿಕೆ, ಹಿನ್ನೆಲೆ ಪರಿಶೀಲಿಸಲಾಯಿತು. ದೂರವಾಣಿ ಕರೆ ಮೂಲಕ ಬೆದರಿಕೆಯೊಡ್ಡುತ್ತಿದ್ದ ಕಾರಣ ಸಾಕಷ್ಟು ಕೊಲೆಗಳಾಗಿದ್ದು, ಇವರ ಹಣದಾಸೆಗೆ ಹಲವು ಕುಟುಂಬಗಳು ಬೀದಿಪಾಲಾಗಿವೆ.

ಹಾಗಾಗಿ ಪೊಲೀಸರು ತೀವ್ರ ಪರಿಶೀಲನೆ ನಡೆಸಿದ್ದರು ಎಂದು ತಿಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾದ ಸೆನೆಗಲ್‌ ರಾಷ್ಟ್ರದಲ್ಲಿ ರವಿ ಪೂಜಾರಿ ಇರುವುದು ಪತ್ತೆಯಾಯಿತು. ಆ ಮೂಲಕ ರವಿ ಪೂಜಾರಿ ಇತರೆ ಪ್ರದೇಶದಲ್ಲಿ ಕುಳಿತು ಬೆದರಿಕೆಯೊಡ್ಡುತ್ತಿದ್ದ ಎಂಬುದು ಸುಳ್ಳು ಎಂಬುದು ದೃಢಪಟ್ಟಿತು.

ಡಿ.30ರಂದು ಕ್ರಿಕೆಟ್‌ ಪಂದ್ಯಾವಳಿ ಆಯೋಜನೆ, ಕೆಲ ಛಾಯಾಚಿತ್ರಗಳ ಆಧಾರದ ಮೇಲೆ ಪೊಲೀಸರು ಮೂರ್‍ನಾಲ್ಕು ತಿಂಗಳಿನಿಂದ ಆತನ ಮೇಲೆ ನಿಗಾ ವಹಿಸಿದ್ದರು ಎಂದು ಹೇಳಿದರು. ರವಿ ಪೂಜಾರಿ ಇರುವ ಸ್ಥಳದ ಮಾಹಿತಿ ಪಡೆದ ಬಳಿಕ ದಕ್ಷಿಣ ಆಫ್ರಿಕಾದಲ್ಲಿನ ಭಾರತದ ರಾಯಭಾರಿ, ಐಎಫ್ಎಸ್‌ ಅಧಿಕಾರಿ ರಾಜೀವ್‌ ಅವರನ್ನು ಸಂಪರ್ಕಿಸಲಾಯಿತು.

ನಮ್ಮ ಮನವಿಯಂತೆ ಅವರು ಅಲ್ಲಿನ ಪ್ರಧಾನಿ, ಗೃಹ ಸಚಿವರೊಂದಿಗೆ ಚರ್ಚಿಸಿದ್ದು, ಜ.19ರಂದು ಪಾತಕಿಯನ್ನು ಬಂಧಿಸಲಾಗಿದೆ. ಆತನನ್ನು ಕರೆ ತರುವ ನಿಟ್ಟಿನಲ್ಲಿ ಅಲ್ಲಿನ ಗೃಹ ಕಚೇರಿಯೊಂದಿಗೆ ಚರ್ಚಿಸಿ ಮುಂದುವರಿಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಬಹಿರಂಗವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸಾರ್ವಜನಿಕರಿಗೆ ಬೆದರಿಕೆಯೊಡ್ಡಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಕಾರ್ಯಾಚರಣೆ ನಡೆಸುವ ಮೂಲಕ ಮೈತ್ರಿ ಸರ್ಕಾರದಲ್ಲಿ ಯಶಸ್ಸು ಸಾಧಿಸಲಾಗಿದೆ. ಪೊಲೀಸರ ಕಾರ್ಯ ನಿರ್ವಹಣೆಗೆ ಅಭಿನಂದನೆ ಸಲ್ಲಿಸುತ್ತೇನೆ.

ಹಾಗೆಯೇ ಸಹಕಾರ ನೀಡಿದ ದಕ್ಷಿಣ ಆಫ್ರಿಕಾದ ಸೆನೆಗಲ್‌ನಲ್ಲಿನ ಭಾರತದ ರಾಯಭಾರಿಗೂ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದೇವೆ. ಮುಂದೆ ರವಿ ಪೂಜಾರಿ ಹಾಗೂ ಆತನ ಹೆಸರಿನಲ್ಲಿ ನಡೆಯುತ್ತಿದ್ದ ಕಾನೂನು ಬಾಹಿರ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.