ರಿಯಲ್ ಟೈಮ್ ಕೇಂದ್ರಿಕೃತ ವ್ಯವಸ್ಥೆ ಜಾರಿ
Team Udayavani, Jul 9, 2020, 5:27 AM IST
ಬೆಂಗಳೂರು: ಖಾಸಗಿ ಆಸ್ಪತ್ರೆಗಳು ನರ್ಸಿಂಗ್ ಹೋಂಗಳಲ್ಲಿ ಲಭ್ಯವಿರುವ ಹಾಸಿಗಳ ಮಾಹಿತಿಗೆ ಕೇಂದ್ರೀಕೃತ ವ್ಯವಸ್ಥೆ ರಿಯಲ್ ಟೈಮ್ ಜಾರಿಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಪ್ರತಿಯೊಂದು ಖಾಸಗಿ ಆಸ್ಪತ್ರೆಗಳು ನರ್ಸಿಂಗ್ ಹೋಂಗಳಲ್ಲಿ ಲಭ್ಯವಿರುವ ಜನರಲ್ ಹಾಸಿಗೆಗಳು, ಐಸಿಯು ಹಾಸಿಗೆಗಳು ಮತ್ತು ವೆಂಟಿಲೇಟರ್ ಸೌಲಭ್ಯ ಕುರಿತಾದ ಕ್ಷಣಕ್ಷಣದ ಮಾಹಿತಿ ಪಡೆಯುವುದಕ್ಕಾಗಿ ಕೇಂದ್ರೀಕೃತ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ರಿಯಲ್ ಟೈಮ್ ಡಾಟಾ ಆಧಾರದ ಮೇಲೆ ಹಾಸಿಗೆಗಳನ್ನು ಹಂಚಿಕೆ ಮಾಡಲಾಗುವು ದು. ಇದರಿಂದ ರೋಗಿಗಳು ಒಂದು ಅಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಅಲೆಯುವುದು ತಪ್ಪುತ್ತದೆ ಎಂದು ತಿಳಿಸಿದರು.
ಆ್ಯಂಬುಲೆನ್ಸ್ ನಿರ್ವಹಣೆಗೂ ಕೇಂದ್ರೀಕೃತ ವ್ಯವಸ್ಥೆ ಬರಲಿ ದ್ದು ಡ್ಯಾಶ್ ಬೋರ್ಡ್ ಮೂಲಕ ಯಾವ ಸೋಂಕಿತರನ್ನು ಎಲ್ಲಿಗೆ ಸಾಗಿಸಬೇಕು ಎನ್ನುವುದನ್ನು ರಿಯಲ್ ಟೈಮ್ ಡಾಟಾ ಆಧಾರದ ಮೇಲೆ ನಿರ್ಧರಿಸಲಾಗುವುದು. ಇನ್ನು ವಾರಾಂತ್ಯದೊಳಗೆ ರಾಜ್ಯದಲ್ಲಿ ಆಂಟಿಜೆನ್ ಟೆಸ್ಟ್ ಕಿಟ್ಗಳು ಸಂಖ್ಯೆಯಲ್ಲಿ ಲಭ್ಯವಿರಲಿದ್ದು, 1 ಲಕ್ಷ ಆಂಟಿಜೆನ್ ಟೆಸ್ಟ್ ನಡೆಸಲು ಸರ್ಕಾರ ಸಿದತೆ ನಡೆಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ