ಕೆಂಪುದೀಪ: ಅನುಷ್ಟಾನಕ್ಕೆ ರಾಜ್ಯ ಸರ್ಕಾರ ಸಿದ್ಧತೆ

Team Udayavani, Apr 21, 2017, 3:45 AM IST

REd-light-20.jpg

ಬೆಂಗಳೂರು: ಅತಿಗಣ್ಯರ ವಾಹನಗಳ ಮೇಲೆ ಕೆಂಪುದೀಪ ಮತ್ತು ಸೈರನ್‌ಗಳ ಬಳಕೆ ರದ್ದತಿಗೆ ಕೇಂದ್ರ ಸರ್ಕಾರ ಮುಂದಾದ ಬೆನ್ನಲ್ಲೇ ಇತ್ತ ರಾಜ್ಯ ಸಾರಿಗೆ ಇಲಾಖೆಯು ಅದರ ಅನುಷ್ಠಾನಕ್ಕೆ ಸಿದ್ಧಗೊಳ್ಳುತ್ತಿದೆ.

ಅತಿಗಣ್ಯರ ವಾಹನಗಳ ಮೇಲೆ ಕೆಂಪುದೀಪ ನಿಷೇಧಕ್ಕೆ ಸಂಬಂಧಿಸಿದ ಆದೇಶಕ್ಕಾಗಿ ಕಾಯುತ್ತಿರುವ ಸಾರಿಗೆ ಇಲಾಖೆ, ಮೇ 1ರಿಂದ ಕೆಲ ದಿನಗಳು ಕಾಲಾವಕಾಶ ಕೊಟ್ಟು, ನಂತರದಿಂದ ಕೆಂಪುದೀಪ ವಾಹನಗಳ ವಿರುದ್ಧ ಕಾರ್ಯಾಚರಣೆಗಿಳಿಯಲಿದೆ. ಇದಕ್ಕಾಗಿ ಮಾನಸಿಕವಾಗಿ ಸಜ್ಜಾಗುತ್ತಿದೆ.

ರಾಜ್ಯದಲ್ಲಿ ರಾಜ್ಯಪಾಲ, ಮುಖ್ಯಮಂತ್ರಿ, ಸಭಾಪತಿ, ಸ್ಪೀಕರ್‌, ಎಲ್ಲ ಸಚಿವರು, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಮೂರ್ತಿಗಳ ವಾಹನಗಳಿಗೆ ಕೆಂಪುದೀಪ ಅಥವಾ ಸೈರನ್‌ ಬಳಕೆಗೆ ಅವಕಾಶ ಇದೆ.

2013ರಲ್ಲಿ ಸುಪ್ರೀಂ ಕೋರ್ಟ್‌ ಹೊರಡಿಸಿದ ಆದೇಶದ ಪ್ರಕಾರ ಗಣ್ಯರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ಬರುವ ತಿಂಗಳಿಂದ ಇದನ್ನು ರದ್ದುಪಡಿಸಿದ ನಂತರವೂ ಕೆಂಪುದೀಪ ಹಾಕಿಕೊಂಡು ಓಡಾಡುವುದು ಮೋಟಾರು ವಾಹನ ಕಾಯ್ದೆ ವ್ಯಾಪ್ತಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಅಂತಹ ವಾಹನಗಳ ವಿರುದ್ಧ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಮುಂದಾಗಲಿದ್ದಾರೆ.

ಇನ್ನೂ ಆದೇಶ ಬಂದಿಲ್ಲ; ಅಧಿಕಾರಿ
ಆದರೆ, ಅತಿಗಣ್ಯರ ವಾಹನಗಳ ಮೇಲೆ ಕೆಂಪುದೀಪ ಬಳಕೆ ರದ್ದುಪಡಿಸಿದ ಸಂಬಂಧ ಇದುವರೆಗೆ ಕೇಂದ್ರದಿಂದ ಯಾವುದೇ ಆದೇಶ ಬಂದಿಲ್ಲ. ಕೇವಲ ಮಾಧ್ಯಮಗಳಿಂದ ಮಾತ್ರ ತಿಳಿದುಬಂದಿದೆ. ಕೇಂದ್ರದ ಸಾರಿಗೆ ಇಲಾಖೆ ಸಚಿವಾಲಯದಿಂದ ಆದೇಶ ಬಂದ ನಂತರ ಅದರ ಪ್ರಕಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜು ತಿಳಿಸಿದ್ದಾರೆ.

ಆದೇಶ ಬಂದ ನಂತರ ಎಲ್ಲ ಇಲಾಖೆಗಳಿಗೆ ಮಾಹಿತಿ ನೀಡಲಾಗುವುದು. ಆಮೇಲೆ ಕೆಂಪುದೀಪ ತೆರವಿಗೆ ಅತಿಗಣ್ಯರಿಗೆ ಕೆಲದಿನಗಳು ಕಾಲಾವಕಾಶ ನೀಡಲಾಗುವುದು. ಆದಾಗ್ಯೂ ಕಂಡುಬಂದರೆ, ವಾಹನಗಳನ್ನು ತಡೆದು ಮನವಿ ಮಾಡಲಾಗುವುದು. ನಂತರವೂ ನಿಯಮ ಪಾಲಿಸದಿದ್ದರೆ, ಅನಿವಾರ್ಯವಾಗಿ ತೆರವುಗೊಳಿಸಲಾಗುವುದು ಎಂದೂ ಬಸವರಾಜು ಸ್ಪಷ್ಟಪಡಿಸಿದರು.

ಅತಿಗಣ್ಯರ ವಾಹನಗಳಿಗೆ ಕೆಂಪುದೀಪ ಮತ್ತು ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಆ್ಯಂಬರ್‌ ದೀಪ (ಇತರೆ ಬಣ್ಣದ ದೀಪ)ಗಳ ಬಳಕೆಗೆ ಅವಕಾಶ ಇದೆ. ಆದೇಶ ಬಂದ ನಂತರ ಕೆಂಪುದೀಪ ಬಳಕೆಗೆ ಅವಕಾಶ ಇರುವುದಿಲ್ಲ. ಆದರೆ, ಇದುವರೆಗೆ ಯಾವುದೇ ಸೂಚನೆ ಅಥವಾ ಆದೇಶಗಳು ಬಂದಿಲ್ಲ ಎಂದು ಸಾರಿಗೆ ಆಯುಕ್ತ ದಯಾನಂದ ತಿಳಿಸಿದ್ದಾರೆ. ಈ ಮಧ್ಯೆ ನಗರವು ಸೇರಿದಂತೆ ಎಲ್ಲೆಡೆ ಕೆಂಪುದೀಪ ಹೊತ್ತ ವಾಹನಗಳ ಸಂಚಾರ ಎಂದಿನಂತಿತ್ತು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.