Arrested: ಮಾರಕಾಸ್ತ್ರ ಹಿಡಿದು “ರೀಲ್ಸ್‌’; ಸುಪಾರಿ ಕಿಲ್ಲರ್‌ ಸೆರೆ

Team Udayavani, Jan 22, 2024, 11:46 AM IST

Arrested: ಮಾರಕಾಸ್ತ್ರ ಹಿಡಿದು “ರೀಲ್ಸ್‌’; ಸುಪಾರಿ ಕಿಲ್ಲರ್‌ ಸೆರೆ

ಬೆಂಗಳೂರು: ಮಾರಕಾಸ್ತ್ರ ಹಿಡಿದು ಅನುಮಾ ನಾಸ್ಪದವಾಗಿ ಓಡಾಡುತ್ತಿದ್ದ ಸುಪಾರಿ ಕಿಲ್ಲರ್‌ನನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಸಂಘಟಿತ ಅಪರಾಧ ದಳ(ಪಶ್ಚಿಮ) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಳಿಮಾವು ನಿವಾಸಿ ಶಶಾಂಕ್‌(28) ಬಂಧಿತ ಸುಪಾರಿ ಕಿಲ್ಲರ್‌.

ಕೆಲ ದಿನಗಳ ಹಿಂದೆ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ಕೆರೆ ಬಳಿ ಮಾರಕಾಸ್ತ್ರ ಹಿಡಿದುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಅಲ್ಲದೆ, ಇದೇ ಫೋಟೋವನ್ನು “ರೀಲ್ಸ್‌’ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಸಾರ್ವಜನಿಕರಲ್ಲಿ ಭಯ ಸೃಷ್ಟಿಸಲು ಮುಂದಾಗಿದ್ದ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಈ ಸಂಬಂಧ ಆರೋಪಿ ವಿರುದ್ಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಈತನ ವಿರುದ್ಧ ಈ ಹಿಂದೆ ಹುಳಿಮಾವು ಮತ್ತು ಬನ್ನೇರುಘಟ್ಟ ಠಾಣೆಯಲ್ಲಿ ಕೊಲೆ ಪ್ರಕರಣ, ಅತ್ತಿಬೆಲೆ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಅಪ್ರಾಪ್ತ ವಯಸ್ಸಿನಲ್ಲೇ ಕೊಲೆ ಆರೋಪಿ: ಶಶಾಂಕ್‌ ಅಪ್ರಾಪ್ತನಿದ್ದಾಗಲೇ ಯುವಕನೊಬ್ಬನ ಕೊಲೆ ಪ್ರಕರಣದಲ್ಲಿ ಬಾಲ ನ್ಯಾಯ ಮಂಡಳಿ ಸೇರಿದ್ದ. ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಹಿಂದೆ ಕ್ರಿಕೆಟ್‌ ಆಟುವಾಗ ಎದುರಾಳಿ ತಂಡದ ಜತೆ ಗಲಾಟೆ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕೆಲ ಯುವಕರ ಜತೆ ಸೇರಿ ಕ್ರಿಕೆಟ್‌ ಬ್ಯಾಟ್‌ ಮತ್ತು ಮಾರಕಾಸ್ತ್ರದಿಂದ ಬೇಬಿ ಎಂಬ ಯುವಕನನ್ನು ಕೊಲೆಗೈದು ಜೈಲು ಸೇರಿದ್ದ. ಈ ವೇಳೆ ಜೈಲಿನಲ್ಲೇ ಕೆಲ ರೌಡಿಗಳನ್ನು ಪರಿಚಯಿಸಿಕೊಂಡ ಶಶಾಂಕ್‌, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾನೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆಗೆ ಸುಫಾರಿ: 2019ರಲ್ಲಿ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುವ ಸತೀಶ್‌ ರೆಡ್ಡಿ ಎಂಬವರನ್ನು ಸುಪಾರಿ ಪಡೆದು ಕೊಲೆಗೈದಿದ್ದ. ಸತೀಶ್‌ರೆಡ್ಡಿ ಹಾಗೂ ಇತರರಿಗೆ ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲಿ ಜಗಳ ನಡೆದಿತ್ತು. ಆಗ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಶಶಾಂಕ್‌ನ ಕೆಲ ಯುವಕರು, ಜೈಲಿನಲ್ಲೇ ಸತೀಶ್‌ ರೆಡ್ಡಿ ಕೊಲೆಗೆ ಸುಪಾರಿ ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಗ ತಾನೇ ಜೈಲಿನಿಂದ ಬಿಡುಗಡೆಯಾಗಿದ್ದ ಶಶಾಂಕ್‌ ಸತೀಶ್‌ ರೆಡ್ಡಿ ಕೊಲೆಗೈದಿದ್ದ ಎಂದು ಸಿಸಿಬಿ ಪೊಲೀಸರು ಹೇಳಿದರು.

ಪೊಲೀಸರಿಂದ ಗುಂಟೇಟು: ಅತ್ತಿಬೆಲೆ ಠಾಣೆ ವ್ಯಾಪ್ತಿಯಲ್ಲಿ ಟೆಕಿಯೊಬ್ಬರನ್ನು ಅಪಹರಿಸಿದ್ದ ಪ್ರಕರಣದಲ್ಲಿ ಶಶಾಂಕ್‌ನನ್ನು ಪೊಲೀಸರು ಬಂಧಿಸಲು ಹೋಗಿದ್ದರು. ಆಗ ಅವರ ಮೇಲೆಯೇ ಆರೋಪಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ. ಹೀಗಾಗಿ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು ಎಂದು ಸಿಸಿಬಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.