ಪ್ರೇಮಿಗಳಿಗೆ ಆಶ್ರಯ ನೀಡಿದ ತಾಯಿ,ಮಗಳ ಗುಪ್ತಾಂಗಕ್ಕೆ ಖಾರದ ಪುಡಿ!
Team Udayavani, Jan 20, 2017, 11:14 AM IST
ಬೆಂಗಳೂರು: ನಗರದದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಂದುವರಿದಿದ್ದು, ನಂದಿನಿ ಲೇಔಟ್ನಲ್ಲಿ ಪ್ರೇಮಿಗೆ ಆಶ್ರಯ ನೀಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳನ್ನು ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಮೃಗೀಯವಾಗಿ ವರ್ತಿಸಿದ ಅಮಾನವೀಯ ಘಟನೆ ನಡೆದಿದೆ.
ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈಗಾಗಲೇ ಕೃತ್ಯದಲ್ಲಿ ಭಾಗಿಯಾದ ನಾಲ್ವರು ಮಹಿಳೆಯರು ಸೇರಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತನೀಷಾ, ಯಾಸ್ಮಿನ್ ,ನಿಜಾಮುನ್ನೀಸಾ, ಇಂದಿರಾ,ಇಮ್ರಾನ್ ಮತ್ತು ಜಬಿ ಎಂದು ತಿಳಿದು ಬಂದಿದೆ.
ಆರೋಪಿಗಳ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಗೆ ಸಂತ್ರಸ್ಥ ಮಹಿಳೆ ಆಶ್ರಯ ನೀಡಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಮಗಳ ಪ್ರೀತಿಗೆ ಮನೆಯವರು ತೀವ್ರ ವಿರೋಧ ವ್ಯಕ್ತ ಪಡಸುತ್ತಿದ್ದರಾದರೂ ಜನವರಿ 15 ರಂದು ಮನೆ ಬಿಟ್ಟು ತೆರಳಿದ್ದಾಳೆ ಎಂದು ಹೇಳಲಾಗಿದೆ.
ಬಳಿಕ ರೊಚ್ಚಿಗೆದ್ದ ಯುವತಿಯ ಮನೆಯವರು ಆಶ್ರಯ ನೀಡಿದ ಮಹಿಳೆ ಮತ್ತು ಮಗಳನ್ನು ಅಪಹರಿಸಿದ ಆರೋಪಿಗಳು ಕೆ.ಆರ್.ಪುರಂನ ಟಿನ್ ಫ್ಯಾಕ್ಟರಿ ಬಳಿಯ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಮೃಗೀಯವಾಗಿ ವರ್ತಿಸಿದ್ದಾರೆ. ಇಬ್ಬರನ್ನು ವಿವಸ್ತ್ರಗೊಳಿಸಿದ್ದು ಮಗಳ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಅಟ್ಟಹಾಸ ಮೆರೆದು ಪರಾರಿಯಾಗಿದ್ದರು.
ಬಳಿಕ ತಾಯಿ ಮಗಳು ಅಲ್ಲಿಂದ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ನಂದಿನಿ ಲೇಚೌಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ