ಡಿನೋಟಿಫೈ ಪ್ರಕರಣದಲ್ಲಿ ಯಡಿಯೂರಪ್ಪರಗೆ ಕೊಂಚ ರಿಲೀಫ್ 


Team Udayavani, Jul 7, 2017, 11:16 AM IST

yadiyurappa.jpg

ಬೆಂಗಳೂರು: ರಾಜಧಾನಿಯ ಆರ್‌.ಟಿ. ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆಯಲ್ಲಿ 1 ಎಕರೆ 11 ಗುಂಟೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸ್ವಲ್ಪ ರಿಲೀಫ್ ಸಿಕ್ಕಿದೆ.

ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್‌ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸದಂತೆ ಗುರುವಾರ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ.

ಅರ್ಜಿ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್‌ ಆರ್‌. ಅರಬಟ್ಟಿ ಅವರು ಆಕ್ಷೇಪಣೆ ಸಲ್ಲಿಸಿ, ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಬಾರದು ಅಥವಾ ಎಫ್ಐಆರ್‌ ರದ್ದುಗೊಳಿಸಬಾರದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ನ್ಯಾಯಪೀಠ, “ಮುಂಬರುವ ಚುನಾವಣೆಯಲ್ಲಿ ನಾನು ಮುಖ್ಯಮಂತ್ರಿ ಅಭ್ಯರ್ಥಿ ಆಗಿರುವ ಕಾರಣಕ್ಕಾಗಿ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ತನಿಖೆ ನಡೆಸಲಾಗುತ್ತಿದೆ,’ ಎಂದು ಅರ್ಜಿದಾರರು ಹೇಳುತ್ತಿದ್ದಾರೆ.

ಅಲ್ಲದೆ, ನೀವು (ಲೋಕಾಯುಕ್ತ ಪೊಲೀಸರು) “ಅರ್ಜಿದಾರರ ವಿರುದ್ಧ ಎರಡು ವರ್ಷ‌ಳ ಹಿಂದೆ ಎಫ್ಐಆರ್‌ ದಾಖಲಿಸಿಕೊಂಡು ಈಗ ತರಾತುರಿಯಲ್ಲಿ ತನಿಖೆ ನಡೆಸುತ್ತಿದ್ದೀರಿ. ಒಂದು ವೇಳೆ ತನಿಖೆ ಪೂರ್ಣಗೊಳಿಸಿ ಚುನಾವಣೆ ಪೂರ್ಣಗೊಂಡ ಬಳಿಕ ಅರ್ಜಿದಾರರು ದೋಷಿ ಎಂದು ಸಾಬೀತಾದರೆ ಅವರ ರಾಜಕೀಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಲ್ಲವೇ,’ ಎಂದು ಮೌಖೀಕವಾಗಿ ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ವಕೀಲರು, ಎರಡು ವರ್ಷಗಳಿಂದಲೂ ಪ್ರಕರಣದ ತನಿಖೆ ಪ್ರಗತಿಯಲ್ಲಿತ್ತು ಎಂದು ಹೇಳಿದರಲ್ಲದೆ, ಈ ಸಂಬಂಧ ವಾದ ಮಂಡನೆಗೆ ಕಾಲವಕಾಶ ನೀಡುವಂತೆ ನ್ಯಾಯಪೀಠಕ್ಕೆ ಕೋರಿದರು.

ಮಧ್ಯಪ್ರವೇಶಿಸಿದ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌, ರಾಜಕೀಯ ದುರುದ್ದೇಶದಿಂದಲೇ ಎರಡು ವರ್ಷಗಳ ಹಿಂದಿನ ಪ್ರಕರಣದ ತನಿಖೆಯನ್ನು ಈಗ ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ ತನಿಖೆಗೆ  ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.

ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ,  ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಲೋಕಾಯುಕ್ತ ಪೊಲೀಸರಿಗೆ ತಾಕೀತು ಮಾಡಿ ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.

ಏನಿದು ಪ್ರಕರಣ?: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ 2010ರಲ್ಲಿ ಮಠದಹಳ್ಳಿಯ 1 ಎಕರೆ 11 ಗಂಟೆ ಭೂಮಿಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ವಿಮಲಾ ಹಾಗೂ ಅವರ ಪುತ್ರನಿಗೆ ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಿದ್ದು, ಈ  ಸಂಬಂಧ ತನಿಖೆ ನಡೆಸುವಂತೆ ಕೋರಿ ಜಯಕುಮಾರ್‌ ಹಿರೇಮಠ ಎಂಬುವವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ಅದರಂತೆ ಲೋಕಾಯುಕ್ತ ಪೊಲೀಸರು 2015 ಮೇ 5ರಂದು ಯಡಿಯೂರಪ್ಪ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.