ರೇವಾ ಹಸಿರಿನ ನಿತ್ಯ ತೋರಣ

Team Udayavani, Jun 5, 2018, 11:50 AM IST

reva-2.jpg

ಬೆಂಗಳೂರು: ಯಲಹಂಕ ಸಮೀಪದ ರೇವಾ ವಿಶ್ವವಿದ್ಯಾಲಯ ಹಚ್ಚ ಹಸಿರಿನ ನಿತ್ಯ ತೋರಣದ ವಿದ್ಯಾ ದೇವಾಲಯ ಎಂದು ನಾದಬ್ರಹ್ಮ ಹಂಸಲೇಖ ಅವರು ಬಣ್ಣಿಸಿದರು. ಸೋಮವಾರ ಅವರು ರೇವಾ ವಿವಿ ಕ್ಯಾಂಪಸ್‌ನಲ್ಲಿ ನಿರ್ಮಿಸಿರುವ ನೂತನ ಮಾಧ್ಯಮ ಕೇಂದ್ರ(ಮೀಡಿಯಾ ಸೆಂಟರ್‌)ವನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರು ನಗರ ಒತ್ತಡದ ಮತ್ತು ಸಂಚಾರ ದಟ್ಟಣೆಯ ಕಿಷ್ಕಿಂದೆ ಎಂದು ಹೆಸರಾಗುತ್ತಿದೆ. ಅಂತಹ ಆಲೋಚನೆಗಳಿಂದ ಹೊರ ಬರಲು ಬೆಂಗಳೂರಿನಿಂದ ಕೊಂಚ ಹೊರ ವಲಯದಲ್ಲಿ ರೇವಾ ವಿದ್ಯಾ ದೇವಾಲಯವಿದೆ. ಇದರ ಮಾಧ್ಯಮ ಕೇಂದ್ರದ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿರುವುದು ನನ್ನ ಪುಣ್ಯ. ಈ ವಿಶ್ವವಿದ್ಯಾಲಯದ ಬಗ್ಗೆ ಕೇಳಿದ್ದೆ. ಆದರೆ ಇವತ್ತು ನೋಡುವಂತಹ ಭಾಗ್ಯ ಲಭಿಸಿದೆ.

ಒಳಗೆ ಬಂದು ನೋಡಿದಾಗ ಇದೊಂದು ಹಚ್ಚ ಹಸಿರಿನ ನಿತ್ಯ ತೋರಣವೆಂದು ಭಾಸವಾಯಿತು. ಇಲ್ಲಿ ಮಾಧ್ಯಮ ಕೇಂದ್ರವನ್ನು  ವೃತ್ತಿಪರವಾಗಿ ನಿರ್ಮಾಣ ಮಾಡಲಾಗಿದೆ. ಈ ಕೇಂದ್ರ ಉದ್ಘಾಟನೆಗೊಳ್ಳುವ ಮೂಲಕ ರೇವಾ ವಿವಿ ಕುಲಾಧಿಪತಿ ಡಾ. ಪಿ. ಶ್ಯಾಮರಾಜು ಅವರ ಕನಸು ನನಸಾಗಿದೆ ಎಂದರು.

ಇವತ್ತು ಸುದ್ದಿಯಿಂದ ಜೀವನ. ಆದರೆ ಶಿಕ್ಷಕರಾದ ನಾವು ಸುದ್ದಿವೊಳಗಿನ ವೈಬ್ರೆಂಟ್‌ನಿಂದ ಜೀವನ ಎನ್ನುತ್ತೇವೆ. ಪ್ರತಿಯೊಂದು ವೈಬ್ರೆಷನ್‌ ಒಂದು ಮೆಸೇಜ್‌ ಇದ್ದಂತೆ. ಇವತ್ತಿನಿಂದ ಮೀಡಿಯಾ ಸೆಂಟರ್‌ನಲ್ಲಿ ಪಾಸಿಟಿವ್‌ ವೈಬ್ರೆಷನ್‌ ಪ್ರಾರಂಭವಾಗಿದೆ.

ಈ ವಿಶ್ವದ್ಯಾಲಯದಲ್ಲಿ ಪ್ರತಿವರ್ಷ ಐದು ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಹೊರ ಹೋಗುತ್ತಿದ್ದಾರೆ. ಅವರೆಲ್ಲ ಈ ನಾಡಿಗೆ ಕೊಡುಗೆಯನ್ನು ನೀಡಲಿ ಎಂದು ಹಾರೈಸಿದರು. ಈ ಸ್ಟುಡಿಯೋದಲ್ಲಿ ಪ್ರದರ್ಶನ ಕಲೆಗೆ ಒಂದು ಪ್ರತ್ಯೇಕ ಭಾಗ ತೆರೆಯಲಾಗಿದೆ.

ಜೊತೆಗೆ ಇದಕ್ಕೆ ಪ್ರತಿಭಾನ್ವಿತ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಾನಪದಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುವಾಗ ನಾನು ಇವರ ಜೊತೆ ಕೈಜೋಡಿಸುತ್ತೇನೆ ಎಂದು ಅವರು ತಿಳಿಸಿದರು.

ರೇವಾ ವಿಶ್ವದ್ಯಾಲಯದ ಕುಲಾಧಿಪತಿ ಡಾ. ಪಿ. ಶ್ಯಾಮರಾಜು, ಉಪಕುಲಪತಿಗಳಾದ ಡಾ. ಎಸ್‌. ವೈ ಕುಲಕರ್ಣಿ, ಕುಲಸಚಿವರಾದ ಡಾ. ಧನಂಜಯ್‌, ವಿಭಾಗದ ಮುಖ್ಯಸ್ಥೆ ಡಾ. ಬೀನಾ ಜಿ., ಡಾ. ಪಾಯಲ್‌ ದತ್ತ ಚೌಧರಿ ಮತ್ತು ಮಂಜುನಾಥ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲೆ ಕಾಯಿ

ಗರಿಬಿಚ್ಚಿಕೊಂಡ ಹಳ್ಳಿ ಸೊಗಡು

ಪತ್ನಿಯನ್ನು ಕೊಂದಿದ್ದವನ ಶವ ಆಂಧ್ರದಲ್ಲಿ ಪತ್ತೆ

ಪತ್ನಿಯನ್ನು ಕೊಂದಿದ್ದವನ ಶವ ಆಂಧ್ರದಲ್ಲಿ ಪತ್ತೆ..!

fake marks cards

ನಕಲಿ ಅಂಕಪಟ್ಟಿ ದಂಧೆ: ನಾಲ್ವರು ವಶಕ್ಕೆ

ವರ್ಕ್‌ ಫ್ರಂ ಹೋಮ್‌ಗೆ ವಿದಾಯ

ವರ್ಕ್‌ ಫ್ರಂ ಹೋಮ್‌ಗೆ ವಿದಾಯ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.