ಕಂದಾಯ ಅಧಿಕಾರಿಗೆ 4 ವರ್ಷ ಜೈಲು
Team Udayavani, Aug 18, 2018, 2:34 PM IST
ಬೆಂಗಳೂರು: ಉದ್ಯಮಿಯೊಬ್ಬರು ಖರೀದಿಸಿದ್ದ ಕೈಗಾರಿಕಾ ನಿವೇಶನದ ಖಾತಾ ಬದಲಾವಣೆ ಮಾಡಿಕೊಡಲು 20 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದ ಕಂದಾಯ ಅಧಿಕಾರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.
2013ರ ಅವಧಿಯಲ್ಲಿ ಬಿಬಿಎಂಪಿಯ ಲಕ್ಷ್ಮೀದೇವಿನಗರ ಉಪವಿಭಾಗದ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಎಸ್.ಶ್ರೀರಾಮ್, 2013ರ ಅಕ್ಟೋಬರ್ 7ರಂದು ಆರೋಪಿ ಶ್ರೀರಾಮ್ರನ್ನು 20 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ಪ್ರಾಸಿಕ್ಯೂಶನ್ ವಾದ ಹಾಗೂ ಸಾಕ್ಷ್ಯಾಧಾರ ಪುರಸ್ಕರಿಸಿರುವ ನ್ಯಾ. ರವೀಂದ್ರ ಹೆಗ್ಡೆ, ಆರೋಪಿ ಶ್ರೀರಾಮ್ಗೆ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 7ರ ಅನ್ವಯ 4 ವರ್ಷ ಜೈಲು ಹಾಗೂ 1 ಲಕ್ಷ ರೂ. ದಂಡ ವಿಧಿಸಿದ್ದಾರೆ.
ಅಲ್ಲದೆ, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ತಿಳಿಸಿದ್ದಾರೆ. ಜತೆಗೆ ಭ್ರಷ್ಟಾಚಾರ ನಿಗ್ರಹ ಕಾಯಿದೆ ಕಲಂ 13 (1)ಡಿ ಹಾಗೂ (2)ರ ಅನ್ವಯ ನಾಲ್ಕು ವರ್ಷ ಜೈಲು ಹಾಗೂ 2 ಲಕ್ಷ ರೂ. ದಂಡ ಪಾವತಿಸಬೇಕು ಎಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್