ಹಾಸನ ಜಿಲ್ಲಾಧಿಕಾರಿ ಹುದ್ದೆಗೆ ಮತ್ತೆ ರೋಹಿಣಿ ಸಿಂಧೂರಿ
Team Udayavani, Jun 26, 2018, 6:35 AM IST
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಆದೇಶ ಹೊರಡಿಸಿದೆ.
ಇನ್ನೊಂದೆಡೆ ತಮ್ಮನ್ನು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಳಿಸಿದ್ದ ಆದೇಶ ಎತ್ತಿಹಿಡಿದಿದ್ದ ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದೆ. ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿ ಸಲ್ಲಿಸಿದ್ದ ಅರ್ಜಿ ಸೋಮವಾರ ಹೈಕೋರ್ಟ್‌ನಲ್ಲಿ ನ್ಯಾ.ಎಚ್.ಜಿ.ರಮೇಶ್, ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯ ಪೀಠ, ಮುಂದಿನ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಗೊಳಿಸಿತು.
ಹೈಕೋರ್ಟ್‌ನಲ್ಲಿ ಅರ್ಜಿ ಇತ್ಯರ್ಥಗೊಳ್ಳುತ್ತಿದ್ದಂತೆ ಇತ್ತ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ಸರ್ಕಾರ, ಇದುವರೆಗೆ ಆ ಹುದ್ದೆಯಲ್ಲಿದ್ದ ಡಾ.ಪಿ.ಸಿ.ಜಾಫರ್ ಅವರನ್ನು ಅಲ್ಲಿಂದ ವರ್ಗ ಮಾಡಿದೆ.ಆದರೆ, ಯಾವುದೇ ಹುದ್ದೆ ತೋರಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ