ಪ್ರತೀಕಾರಕ್ಕೆ ನಡೀತು ರೌಡಿಶೀಟರ್‌ ಕೊಲೆ

Team Udayavani, Feb 6, 2018, 11:44 AM IST

blore-4.jpg

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದಿದೆ.

ಬೆಂಗಳೂರು ದಕ್ಷಿಣ ವಲಯದ ಕುಖ್ಯಾತ ರೌಡಿಶೀಟರ್‌ ಸೈಕಲ್‌ ರವಿ ಸಹಚರ ಕುಮಾರ್‌ ಅಲಿಯಾಸ್‌ ಪಿಚ್ಚು
ಕುಮಾರ (30) ಕೊಲೆಯಾದವ. ಬೇಕರಿ ರಘು ತಂಡದಲ್ಲಿಯೂ ಗುರುತಿಸಿಕೊಂಡಿದ್ದ ಕುಮಾರ, 2016ರಲ್ಲಿ ಬನಶಂಕರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್‌, ಫೈನಾನ್ಸಿಯರ್‌ ಅವಿನಾಶ್‌ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದ ಕುಮಾರ್‌ನನ್ನು, ಅವಿನಾಶ್‌ ಕೊಲೆಗೆ ಪ್ರತೀಕಾರವಾಗಿ ಹತ್ಯೆಗೈದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸೋಮವಾರ ಸಂಜೆ ಯಲಚೇನಹಳ್ಳಿ ಮೆಟ್ರೋ ನಿಲ್ದಾಣ ಬಳಿ ಬೈಕ್‌ನಲ್ಲಿ ಬಂದ ಐವರು ದುಷ್ಕರ್ಮಿಗಳು, ಮಾರಕಾಸ್ತ್ರಗಳನ್ನು ಹಿಡಿದು ಕುಮಾರನನ್ನು ರಸ್ತೆಗಳಲ್ಲಿ ಅಟ್ಟಾಡಿಸಿದ್ದಾರೆ. ಪ್ರಾಣ ಭೀತಿಯಿಂದ ಸುಮಾರು ಒಂದು ಕಿ.ಮೀ. ಓಡಿದ ಕುಮಾರನನ್ನು ಮೆಟ್ರೋ ನಿಲ್ದಾಣ ಬಳಿ ಅಡ್ಡಗಟ್ಟಿ ಮನಸೋ ಇಚ್ಚೆ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾರೆ.

ಹಫ್ತಾ ವಸೂಲಿ: ರೌಡಿಶೀಟರ್‌ಗಳಾದ ಸೈಕಲ್‌ ರವಿ, ಬೇಕರಿ ರಘು ಹೆಸರಿನಲ್ಲಿ ಪಿಚ್ಚು ಕುಮಾರ ಮಾರುಕಟ್ಟೆ ಹಾಗೂ ಇತರೆಡೆ ಹಫ್ತಾ ವಸೂಲಿ ಮಾಡುತ್ತಿದ್ದ. ಈತನ ವಿರುದ್ಧ ಬನಶಂಕರಿಯಲ್ಲಿ ರೌಡಿಪಟ್ಟಿ ತೆರೆಯಲಾಗಿತ್ತು. ಎಂಟು ತಿಂಗಳ ಹಿಂದೆ ಫೈನಾನ್ಸಿಯರ್‌ ಅವಿನಾಶ್‌ ಕೊಲೆ ಪ್ರಕರಣದಲ್ಲಿ ಈತನೂ ಆರೋಪಿ ಯಾಗಿದ್ದು, ಸೈಕಲ್‌ ರವಿ ತಲೆಮರೆಸಿಕೊಂಡಿದ್ದಾನೆ. ಇನ್ನು ಬೇಕರಿ ರಘು ರಾಮನಗರ ಜೈಲಿನಲ್ಲಿದ್ದಾನೆ. ಬೇಕರಿ ರಘು ಹತ್ಯೆಗೆ ಸಂಚು ರೂಪಿಸಿದ್ದ ಅವಿನಾಶ್‌ ಸಹಚರರೇ ಕುಮಾರನನ್ನು ಕೊಲೆ ಮಾಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ವಾರ ಮೊದಲೇ ನಡೆದಿತ್ತು ಸಂಚು: ಕಳೆದೊಂದು ವಾರದಿಂದಲೇ ಕುಮಾರನ ಕೊಲೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಅವಿನಾಶ್‌ ಬೆಂಬಲಿಗರು ಮಾತ್ರವಲ್ಲದೇ, ಹರೀಶ್‌ ಮತ್ತು ಕುಳ್ಳ ರಿಜ್ವಾನ್‌ ತಂಡ ಕೂಡ ಈ ಕೃತ್ಯದಲ್ಲಿ ಕೈಜೋಡಿಸಿದೆ. ಕುಮಾರ ಜೈಲಿನಿಂದ ಹೊರಬರುತ್ತಿದ್ದಂತೆ ಆರೋಪಿಗಳು ಈತನ ಚಲವಲನಗಳ ಮೇಲೆ ನಿಗಾ ಇಟ್ಟು ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.