ಸಹಚರರಿಂದಲೇ ರೌಡಿಶೀಟರ್ ಹತ್ಯೆ?
Team Udayavani, Sep 4, 2018, 12:19 PM IST
ಬೆಂಗಳೂರು: ರೌಡಿಶೀಟರ್ ಗುರುಮೂರ್ತಿ ಅಲಿಯಾಸ್ ಗೋಪಿಯನ್ನು ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದಾರೆ. ವಿಶ್ವೇಶ್ವರಯ್ಯ ಲೇಔಟ್‌ನ ನಿವೇಷನ ಒಂದರಲ್ಲಿ ಸೋಮವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಯ ಶವ ಕಂಡು ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಶೀಲಿಸಿದಾಗ ಕೊಲೆಯಾದ ವ್ಯಕ್ತಿ ಗುರುಮೂರ್ತಿ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೌಡಿಶೀಟರ್ ಸೀಡಿ ನರಸಿಂಹನ ಜತೆ ಗುರುತಿಸಿಕೊಂಡಿದ್ದ ಗುರುಮೂರ್ತಿ, ಬಳಿಕ ತನ್ನದೇ ಗ್ಯಾಂಗ್ ಕಟ್ಟಿಕೊಂಡು ದರೋಡೆ, ಕೊಲೆಯತ್ನ, ಪುಂಡಾಟಿಕೆ ಕೃತ್ಯಗಳಲ್ಲಿ ತೊಡಗಿದ್ದ. ಜನರಲ್ಲಿ ಭೀತಿ ಹುಟ್ಟಿಸಲು ಪುಂಡಾಟಿಕೆ ನಡೆಸುತ್ತಿದ್ದ. ಒಟ್ಟು 27 ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿರುವ ಗುರುಮೂರ್ತಿ ವಿರುದ್ಧ ಮಾದನಾಯಹಳ್ಳಿ ರಾಜಗೋಪಾಲನಗರ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಪಟ್ಟಿ ತೆರೆಯಲಾಗಿದೆ.
ಶನಿವಾರ ರಾತ್ರಿ ಗುರುಮೂರ್ತಿ ತನ್ನ ಸ್ನೇಹಿತರ ಜತೆ ಮದ್ಯಪಾನ ಮಾಡಲು ಬಾರ್‌ಗೆ ತೆರಳಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಡರಾತ್ರಿಯವರೆಗೂ ಎಲ್ಲರೂ ಕಂಠಪೂರ್ತಿ ಕುಡಿದಿದ್ದು, ಸಹಚರರೇ ಕೊಲೆ ಮಾಡಿರುವ ಶಂಕೆಯಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಬಗ್ಗೆ ಆರೋಪಿಗಳ ಬಂಧನದ ಬಳಿಕ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಚ್.ಕೆ.ಪಾಟೀಲರಿಂದ ಹತಾಶೆಯ ಅಪ್ರಬುದ್ಧ ಹೇಳಿಕೆ:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್
ಮಾರ್ಚ್ 2ರಂದು ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಲೋಕಾರ್ಪಣೆ
1,800 ಕೋಟಿ ರೂ. ಮೊತ್ತದ ಟೆಂಡರ್ ರದ್ದು ವಿಚಾರ: ಸಚಿವ ಸುಧಾಕರ್ ಗೆ ಹೈಕೋರ್ಟ್ ನೋಟಿಸ್
ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಕೈಗಾರಿಕೆಗಳಿಗೆ ಸಿಐಎಸ್ : ಕೇಂದ್ರೀಕೃತ ಪರಿವೀಕ್ಷಣೆ ಜಾರಿಗೆ ನಿರ್ಧಾರ