Arrested: ಸತ್ತಿರುವುದಾಗಿ ಬಿಂಬಿಸಿಕೊಂಡು ತಲೆಮರೆಸಿಕೊಂಡಿದ್ದ ರೌಡಿ ಕಡೆಗೂ ಸೆರೆ

Team Udayavani, Nov 22, 2023, 9:52 AM IST

Arrested: ಸತ್ತಿರುವುದಾಗಿ ಬಿಂಬಿಸಿಕೊಂಡು ತಲೆಮರೆಸಿಕೊಂಡಿದ್ದ ರೌಡಿ ಕಡೆಗೂ ಸೆರೆ

ಬೆಂಗಳೂರು: ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿ ಸತ್ತು ಹೋಗಿರುವುದಾಗಿ ಎಲ್ಲರನ್ನೂ ನಂಬಿಸಿ 2 ವರ್ಷಗಳಿಂದ ತಲೆ ಮರೆಸಿಕೊಂಡು ಊರೂರು ಸುತ್ತುತ್ತಿದ್ದ ರೌಡಿ ಕೊನೆಗೂ ಸಿಸಿಬಿ ಬಲೆಗೆ ಬಿದ್ದಿದ್ದಾನೆ.

ವೈಟ್‌ ಫೀಲ್ಡ್ ಪೊಲೀ ಸ್‌ ಠಾಣೆಯ ರೌಡಿ ಶೀಟರ್‌ ಮಲ್ಲಿಕಾರ್ಜುನ ಅಲಿ ಯಾಸ್‌ ಮಲ್ಲಿ ಬಂಧಿತ. ‌

ಈತ ರಾಜಾನುಕುಂಟೆ ಠಾಣೆಯ ಕೊಲೆ ಪ್ರಕರಣ ಹಾಗೂ ಕಾಡು ಬೀಸನಹಳ್ಳಿ ಚಾಲಕ ಸೋಮನ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಈ ಪ್ರಕರಣಗಳಲ್ಲಿ ಪೊಲೀಸರ ಬಲೆಗೆ ಬೀಳದಂತೆ ಮುನ್ನೆಚ್ಚರಿಕೆ ವಹಿಸಿದ್ದ. ಆದರೂ, ಒಂದಲ್ಲ ಒಂದು ದಿನ ಪೊಲೀಸರು ಬಂಧಿಸುತ್ತಾರೆ ಎಂದು ಆತನಿಗೆ ಗೊತ್ತಿತ್ತು.

ಹೀಗಾಗಿ ತಾನು ಸತ್ತು ಹೋಗಿರುವುದಾಗಿ ನಕಲಿ ದಾಖಲೆ ತಯಾರಿಸಿ ಕುಟುಂಬಸ್ಥರಿಗೆ ಕೊಟ್ಟು ನಡೆದ ಘಟನೆ ವಿವರಿಸಿ ಪೊಲೀಸರು ಹುಡುಕಿಕೊಂಡು ಬಂದರೆ ಸತ್ತು ಹೋಗಿರುವುದಾಗಿ ಹೇಳುವಂತೆ ಸೂಚಿಸಿದ್ದ. ಅಲ್ಲದೇ, ಎಲ್ಲೆಡೆ ತಾನು ಸತ್ತು ಹೋಗಿರುವ ಸುದ್ದಿ ಹಬ್ಬಿಸಿದ್ದ. ಕಳೆದ ಎರಡು ವರ್ಷಗಳಿಂದ ಈತ ಪೊಲೀಸರ ಕಣ್ಣು ತಪ್ಪಿಸಿಕೊಂಡು ಊರೂರು ತಿರುಗಾಡುತ್ತಿದ್ದ. ಆತನ ಮನೆ ಬಳಿ ಪೊಲೀಸರು ವಿಚಾರಿಸಿದಾಗ ಮಲ್ಲಿಕಾರ್ಜುನ್‌ ಸತ್ತು ಹೋಗಿದ್ದಾನೆ ಎಂದು ಕುಟುಂಬದವರು ಹೇಳಿದ್ದರು. ಇನ್ನು ಸಿಸಿಬಿ ಪೊಲಿಸರು ಮಲ್ಲಿಕಾರ್ಜುನನ ಗೆಳೆಯರು, ಪರಿಚಿತರನ್ನು ವಿಚಾರಿಸಿದಾಗ ಅವರೂ ಸಹ ಆತ ಮೃತಪಟ್ಟಿದ್ದಾನೆ ಎಂದಿದ್ದರು. ಆದರೆ, ಆತನ ಮೃತಪಟ್ಟಿರುವುದಕ್ಕೆ ಸಂಬಂಧಿಸಿದ ಸೂಕ್ತ ಬಲವಾದ ದಾಖಲೆಗಳು, ಚಿತ್ರಗಳು ಕುಟುಂಬಸ್ಥರು ಹಾಗೂ ಸ್ನೇಹಿತರ ಬಳಿ ಇರಲಿಲ್ಲ. ಹೀಗಾಗಿ ಈ ಬಗ್ಗೆ ಅನುಮಾನಗೊಂಡ ಪೊಲೀಸರು, ಇತ್ತೀಚೆಗೆ ಮಲ್ಲಿಕಾರ್ಜುನ್‌ಗೆ ಇನ್ನಷ್ಟು ಶೋಧ ನಡೆಸಿದಾಗ ಆತ ಅಮೃತಳ್ಳಿ ಬಳಿ ಸುತ್ತಾಡುತ್ತಿರುವುದು ಗೊತ್ತಾಗಿತ್ತು. ಕೂಡಲೇ ಆತನನ್ನು ಲಾಕ್‌ ಮಾಡಿ ಜೈಲಿಗಟ್ಟಿದ್ದಾರೆ.

ಟಾಪ್ ನ್ಯೂಸ್

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.