ವೈದ್ಯ ಸೀಟು ಕೊಡಿಸುವುದಾಗಿ ಹೇಳಿ 17 ಲಕ್ಷ ರೂ. ವಂಚನೆ

Team Udayavani, Feb 18, 2019, 6:18 AM IST

vaydyakiya.jpg

ಬೆಂಗಳೂರು: ತೆಲಂಗಾಣ ಮೂಲದ ವೈದ್ಯರೊಬ್ಬರ ಪತ್ನಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ 17 ಲಕ್ಷ ರೂ. ಹಣ ಪಡೆದ ವ್ಯಕ್ತಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ತೆಲಂಗಾಣ ಮೂಲದ ಡಾ.ಶ್ರೀಧರ್‌ ಚಟ್ಲ ಎಂಬುವರು ಎಂ.ಜಿ.ರಸ್ತೆ ನಿವಾಸಿ ವಿಜಯ್‌ ಸೇರಿ ಮೂವರ ವಿರುದ್ಧ ಕಬ್ಬನ್‌ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವೈದ್ಯ ಶ್ರೀಧರ್‌ 2017-18ನೇ ಸಾಲಿನಲ್ಲಿ ತಮ್ಮ ಪತ್ನಿ ಸುನಿತಾ ಅವರಿಗೆ ವೈದ್ಯಕೀಯ ಸೀಟು ಕೊಡಿಸಲು ಪ್ರಯತ್ನಿಸುತ್ತಿದ್ದರು. ಇದೇ ವೇಳೆ ಶ್ರೀಧರ್‌ರ ಸ್ನೇಹಿತೆ ಶ್ರಾವಣಿ ಎಂಬುವವರು ವಿಜಯ್‌ ಎಂಬಾತ ಮೊಬೈಲ್‌ ನಂಬರ್‌ ಕೊಟ್ಟು ಸಂಪರ್ಕಿಸುವಂತೆ ಹೇಳಿದ್ದರು. ನಂತರ ಕಾರ್ಯನಿಮಿತ್ತ ಬೆಂಗಳೂರಿಗೆ ಬಂದಿದ್ದ ವೈದ್ಯ, ಆರೋಪಿ ವಿಜಯ್‌ನನ್ನು ಎಂ.ಜಿ.ರಸ್ತೆಯಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಭೇಟಿ ಮಾಡಿದ್ದರು. 

ಭೇಟಿ ವೇಳೆ ಆರೋಪಿ ವಿಜಯ್‌, ಕೋಲಾರದ ದೇವರಾಜ ಅರಸು ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ಹೇಳಿ ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಅದರಂತೆ ವೈದ್ಯ ಶ್ರೀಧರ್‌, ಆರೋಪಿ ಖಾತೆಗೆ ಒಂದು ಲಕ್ಷ ರೂ. ಹಾಗೂ ಎನ್‌.ಬಿ.ಚಾರಿ ಎಂಬುವವರ ಖಾತೆಗೆ ನಾಲ್ಕು ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. 

ಹಣ ವರ್ಗಾವಣೆಯಾದ ಕೆಲ ದಿನಗಳ ಬಳಿಕ ಶ್ರೀಧರ್‌ ಅವರಿಗೆ ಕರೆ ಮಾಡಿದ ಆರೋಪಿ, ನಿಮ್ಮ ಪತ್ನಿಗೆ ವೈದ್ಯಕೀಯ ಸೀಟು ಖಾತರಿಯಾಗಿದೆ. ಬಾಕಿ ಹಣ ತೆಗೆದುಕೊಂಡು ಬನ್ನಿ ಎಂದು ಹೇಳಿದ್ದ. ಈ ಹಿನ್ನೆಲೆಯಲ್ಲಿ ಶ್ರೀಧರ್‌, ಆರೋಪಿಗೆ ಆರು ಲಕ್ಷ ರೂ. ಮೊತ್ತದ ಡಿಡಿ ಕೊಟ್ಟಿದ್ದರು. ಹಲವು ತಿಂಗಳು ಕಳೆದರೂ ಸೀಟು ಸಿಕ್ಕಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಕೋಲಾರದಲ್ಲಿ ಸೀಟಿಲ್ಲ,

ಬದಲಿಗೆ ಆದಿಚುಂಚನಗಿರಿ ಸಂಸ್ಥೆಯಲ್ಲಿ ಕೊಡಿಸುತ್ತೇನೆ ಎಂದು ಮತ್ತೆ ಆರು ಲಕ್ಷ ನಗದು ಸೇರಿ ಸೇರಿದಂತೆ ವಿವಿಧ ಹಂತಗಳಲ್ಲಿ ಒಟ್ಟು 17 ಲಕ್ಷ ರೂ. ಪಡೆದುಕೊಂಡಿದ್ದ. ಬಳಿಕ ಎಲ್ಲಿಯೂ ಸೀಟು ಕೊಡಿಸದೇ ವಂಚನೆ ಮಾಡಿದ್ದಾನೆ. ಈ ಸಂಬಂಧ ವೈದ್ಯ ಶ್ರೀಧರ್‌ ಫೆ.15ರಂದು ಪ್ರಕರಣ ದಾಖಲಿಸಿದ್ದಾರೆ ಎಂದು ಕಬ್ಬನ್‌ಪಾರ್ಕ್‌ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

10

Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.