26.18 ಕೋಟಿ ವಸೂಲಿಗೆ ಆದೇಶ

Team Udayavani, Jul 27, 2018, 12:16 PM IST

2618-koti.jpg

ಬೆಂಗಳೂರು: ಕಾಮಗಾರಿ ನಡೆಸದೆ ಹಣ ಬಿಡುಗಡೆಗೊಳಿಸಿದ ಕಾರಣಕ್ಕಾಗಿ ಲೆಕ್ಕಪರಿಶೋಧನೆಯಲ್ಲಿ ನಮೂದಿಸಿರುವ 26.18 ಕೋಟಿ ರೂ. ವಸೂಲಿಗೆ ಕ್ರಮಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್‌ ಆದೇಶಿಸಿದ್ದು, ಅಕ್ರಮ ನಡೆಸಿದ ಆರೋಪವಿರುವ ಪ್ರಥಮ ದರ್ಜೆ ಗುಮಾಸ್ತ ಮಾಯಣ್ಣರನ್ನು ಬೇರೊಂದು ವಿಭಾಗಕ್ಕೆ ವರ್ಗಾವಣೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.

ಬಿಬಿಎಂಪಿ ರಸ್ತೆ ಹಾಗೂ ಮೂಲಸೌಕರ್ಯ ವಿಭಾಗದಲ್ಲಿ 2012-13ರಿಂದ 201-15ನೇ ಸಾಲಿನ ಲೆಕ್ಕ ಪರಿಶೋಧನೆಯಲ್ಲಿ 109.68 ಕೋಟಿ ರೂ.ಗೆ ಆಕ್ಷೇಪಣೆ ವ್ಯಕ್ತವಾಗಿದ್ದು, ಕಾಮಗಾರಿ ನಡೆಸದೆಯೇ 26.18 ಕೋಟಿ ರೂ. ಬಿಡುಗಡೆಗೊಳಿಸಿದ ಸಂಬಂಧ ಆರು ವಾರಗಳಲ್ಲಿ ತನಿಖೆ ನಡೆಸಿ, ಹಣ ವಸೂಲಿ ಮಾಡಲು ಕ್ರಮಕೈಗೊಳ್ಳುವಂತೆ ಲೆಕ್ಕಪರಿಶೋಧಕರು ತಿಳಿಸಿದ್ದಾರೆ.

ಈ ಕುರಿತು ರಾಬರ್ಟ್‌ ಎಂಬವವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿತ್ತು. ಅದರಂತೆ ತನಿಖೆ ನಡೆಸಿರುವ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ನೀಡಿರುವ ಮಧ್ಯಂತರ ವರದಿಯಿಂದ ಪಾಲಿಕೆಯ ರಸ್ತೆ ಹಾಗೂ ಮೂಲಸೌಕರ್ಯ ವಿಭಾಗದಲ್ಲಿನ 109.68 ಕೋಟಿ ಆಕ್ಷೇಪಣೆ ಹಾಗೂ ಮಾಯಣ್ಣ ಮೇಲಿನ ಅಕ್ರಮದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದ್ದು, ಅಗತ್ಯ ತನಿಖೆ ನಡೆಸಿ ಹಣ ವಸೂಲಿಗೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯ ಆಯುಕ್ತರಿಗೆ ಆದೇಶಿಸಲಾಗಿದೆ.

200 ಕೋಟಿ ಅವ್ಯವಹಾರ: ನ್ಯಾಯಾಲಯಕ್ಕೆ ಪಿಐಎಲ್‌ ಸಲ್ಲಿಸಿರುವ ರಾಬರ್ಟ್‌ ಅವರು, ರಸ್ತೆ ಮೂಲಸೌಕರ್ಯ ವಿಭಾಗದಲ್ಲಿನ ಪ್ರಥಮ ದರ್ಜೆ ಗುಮಾಸ್ತ ಮಾಯಣ್ಣ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ನಾಗರಾಜ್‌, ನಡೆಯದೇ ಇರುವ ಕಾಮಗಾರಿಗಳಿಗೆ ನಕಲಿ ಬಿಲ್‌ಗ‌ಳನ್ನು ಪಡೆದಿದ್ದು, ಸುಮಾರು 200 ಕೋಟಿ ರೂ. ಅಕ್ರಮ ನಡೆಸಿರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜತೆಗೆ ಪಾಲಿಕೆಯ ಎಂಟು ವಲಯಗಳಿಗೆ ಮಾಯಣ್ಣ ಒಬ್ಬರೇ ಗುಮಾಸ್ತರಾಗಿದ್ದು, ಅವರನ್ನು ಅಲ್ಲಿಂದ ವರ್ಗಾವಣೆ ಮಾಡಿದರೆ ಅಥವಾ ಅವರ ಜಾಗಕ್ಕೆ ಬೇರೆಯವರನ್ನು ನಿಯೋಜಿಸಿದರೆ ಪ್ರಭಾವಿಗಳಿಂದ ಒತ್ತಡ ತರುತ್ತಿದ್ದಾರೆ. ಜತೆಗೆ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಆ ಸ್ಥಾನಕ್ಕೆ ಬರದಂತೆ ಮಾಡುತ್ತಿದ್ದಾರೆ ಎಂಬ ಅಂಶಗಳನ್ನು ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಆ ಹಿನ್ನೆಲೆಯಲ್ಲಿ ಹೈಕೋರ್ಟ್‌ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿತ್ತು. ಅದರಂತೆ ಸಂಪೂರ್ಣ ತನಿಖೆ ನಡೆಸಲು ನಗರಾಭಿವೃದ್ಧಿ ಇಲಾಖೆಯಿಂದ ನೇಮಿಸಿದ್ದ ಮೂವರು ಲೆಕ್ಕಪರಿಶೋಧಕರು, ಮಧ್ಯಂತರ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್‌ ಆದೇಶ ಹೊರಡಿಸಿದ್ದು, ಆರು ವಾರಗಳಲ್ಲಿ ತನಿಖೆ ನಡೆಸಿ ಹಣ ವಸೂಲಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ವಿಚಾರಣೆ ವೇಳೆ ಮಾಯಣ್ಣರನ್ನು ಬೇರೊಂದು ವಿಭಾಗಕ್ಕೆ ವರ್ಗಾವಣೆ ಮಾಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯಿಂದ ಹೊರಡಿಸಿರುವ ಆದೇಶ ಪರಿಶೀಲಿಸಿ, ಅದರಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು. ತನಿಖೆಯ ವೇಳೆ ಆರೋಪ ಎದುರಿಸುತ್ತಿರುವ ಪ್ರಥಮ ದರ್ಜೆ ಗುಮಾಸ್ತನನ್ನು ಬೇರೊಂದು ವಿಭಾಗಕ್ಕೆ ವರ್ಗಾವಣೆ ಮಾಡಲಾಗುವುದು. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.