ಚಿತ್ರ ನಿರ್ಮಾಣದ ಆಸೆ ಹುಟ್ಟಿಸಿ 85 ಲಕ್ಷ ರೂ. ದೋಖಾ: ನಿರ್ಮಾಪಕ ಸೆರೆ


Team Udayavani, Dec 28, 2018, 11:34 AM IST

chitra.jpg

ಬೆಂಗಳೂರು: ಚಲನಚಿತ್ರ ನಿರ್ಮಾಣ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ಹಣ ಹೂಡಿದರೆ ಹೆಚ್ಚು ಲಾಭಗಳಿಸಬಹುದು ಎಂದು ನಂಬಿಸಿ ಮಹಿಳೆಯೊಬ್ಬರಿಂದ 85 ಲಕ್ಷ ರೂ. ಪಡೆದು ವಂಚಿಸಿದ್ದ ಚಿತ್ರ ನಿರ್ಮಾಪಕ ಸೇರಿ ಮೂವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. 

ಚಿತ್ರ ನಿರ್ಮಾಪಕ ಕೆ.ಸುಧಾಕರ, ವೆಂಕಟ ಸುಬ್ಬಯ್ಯ, ನಲ್ಲಯ್ಯನ್‌ ಪೀಟರ್‌, ಜಯ್‌ಕುಮಾರ್‌ ಬಂಧಿತರು. ವರ್ಧನ, ಹುಲಿದುರ್ಗ ಚಲನಚಿತ್ರಗಳ ನಿರ್ಮಾಪಕನಾಗಿರುವ ಕೆ.ಸುಧಾಕರ್‌, ಸದ್ಯದಲ್ಲಿಯೇ ಬಿಡುಗಡೆಯಾಗಲಿರುವ ರಜನಿಕಾಂತ್‌ ಅಭಿನಯದ “ಪೇಟ’ ಚಿತ್ರದ ವಿತರಣೆ ಹಕ್ಕು ಪಡೆದಿರುವುದಾಗಿ ನಂಬಿಸಿ ಹಲವರಿಂದ ಹಣಪಡೆದು ವಂಚಿಸಿರುವುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಹೊಸಕೆರೆಹಳ್ಳಿ ನಿವಾಸಿ ದಿವ್ಯಾ ಎಂಬುವವರನ್ನು ಪರಿಚಯಿಸಿಕೊಂಡಿದ್ದ ಸುಧಾಕರ್‌, ಚಲನ ಚಿತ್ರ ನಿರ್ಮಾಣದಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಮಾಡಬಹುದು. ಜತೆಗೆ, ಮೈಸೂರಿನ ಜಿ.ಆರ್‌.ಎಸ್‌. ಫ್ಯಾಂಟಸಿ ಪಾರ್ಕ್‌ ಬಳಿ ಜಮೀನು ಖರೀದಿಸಿ ಲೇಔಟ್‌ ನಿರ್ಮಾಣ ಮಾಡುವುದಾಗಿ ನಂಬಿಸಿ 85 ಲಕ್ಷ ರೂ. ಪಡೆದು ವಾಪಾಸ್‌ ನೀಡದೆ ವಂಚಿಸಿದ್ದ.

ಹಲವು ಬಾರಿ ಹಣ ವಾಪಾಸ್‌ ಕೇಳಿದರೂ ನೀಡದೆ, ಸತಾಯಿಸಿದ್ದಲ್ಲದೆ, ಬೆದರಿಕೆ ಹಾಕಿದ್ದ. ಈ ಕುರಿತು ದಿವ್ಯಾ, ಬ್ಯಾಟರಾಯನಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ವರ್ಗಾವಣೆಯಾದ ಬಳಿಕ ತನಿಖೆ ನಡೆಸಿ ಸುಧಾಕರ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಸುಧಾಕರ ಮಾಡುವ ವಂಚನೆಗಳಿಗೆ ಆತನ ಸಹಚರರು ಸಾಥ್‌ ನೀಡುತ್ತಿದ್ದರು. ಕೆಲವೊಮ್ಮೆ, ಅವರೇ ಹಣವಿರುವವರನ್ನು ಆತನಿಗೆ ಪರಿಚಯ ಮಾಡಿಕೊಡುತ್ತಿದ್ದರು. ಬಳಿಕ ಹಣ ಲಕ್ಷಾಂತರ ರೂ. ಹಣ ಪಡೆದು ವಂಚನೆ ಎಸಗುತ್ತಿದ್ದರು. ಆರೋಪಿಗಳಿಂದ ವಂಚನೆಗೊಳಗಾದವರು ದೂರು ನೀಡಿದರೆ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

cm

ಬುರುಡೆ ಬೊಮ್ಮಾಯಿ..! : ಬಿಜೆಪಿಗೆ ಸಿದ್ದರಾಮಯ್ಯ ಟ್ವೀಟಾಸ್ತ್ರದ ತಿರುಗೇಟು

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

1-qq

ಟಿ20 ವಿಶ್ವಕಪ್‌ : ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಜಯ

d-1

ದುಬೈನಲ್ಲಿ ಮಿಂಚಿದ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಳಿಗೆ

Untitled-1

ಡ್ರೋಣ್ ಮೂಲಕ ಕೀಟನಾಶಕ ಸಿಂಪಡಣೆ: ಕೆಕೆಆರ್ ಡಿಬಿಯಿಂದ ಪ್ರಾಯೋಗಿಕ ಜಾರಿ

25fine

ಮಾಹಿತಿ ಕೊಡದ ಎಸಿಗೆ ಐದು ಸಾವಿರ ರೂ. ದಂಡ

ನಿಮ್ಮ ಪಾಕ್ ಗೆಳತಿಗೂ ಐಎಸ್ ಐಗೂ ಏನು ಸಂಬಂಧ: ಅಮರಿಂದರ್ ಸಿಂಗ್ ಗೆ ರಾಂಧವಾ

ನಿಮ್ಮ ಪಾಕ್ ಗೆಳತಿಗೂ ಐಎಸ್ ಐಗೂ ಏನು ಸಂಬಂಧ: ಅಮರಿಂದರ್ ಸಿಂಗ್ ಗೆ ರಾಂಧವಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ದೀಪಗಳ ಉತ್ಸವಕ್ಕೆ ಚಾಲನೆ

ದೀಪಗಳ ಉತ್ಸವಕ್ಕೆ ಚಾಲನೆ

ಹೆಲ್ತ್‌ ಕೇರ್

ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯಿಂದ ಮಿತ್ರಾಕ್ಲಿಪ್‌ ಯಶಸ್ವಿ ಬಳಕೆ

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

MUST WATCH

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

ಹೊಸ ಸೇರ್ಪಡೆ

cm

ಬುರುಡೆ ಬೊಮ್ಮಾಯಿ..! : ಬಿಜೆಪಿಗೆ ಸಿದ್ದರಾಮಯ್ಯ ಟ್ವೀಟಾಸ್ತ್ರದ ತಿರುಗೇಟು

ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಹನ್ನೊಂದು ಕುರಿಗಳ ಸಾವು

ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಹನ್ನೊಂದು ಕುರಿಗಳ ಸಾವು

22-hnl-3

ಬೀರಲಿಂಗೇಶರ ದೇವರ ಬನ್ನಿ ಉತ್ಸವ

22dvg2

ಕ್ರೀಡಾಪಟುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ: ಸಚಿವ ನಾರಾಯಣ ಗೌಡ

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.