ರೈತ ಸ್ಪಂದನಕ್ಕಿಂದು ಬೀದರ್‌ನಲ್ಲಿ ಚಾಲನೆ
Team Udayavani, Nov 15, 2018, 6:15 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹತ್ವಾಕಾಂಕ್ಷಿ ರೈತ ಸ್ಪಂದನ ಕಾರ್ಯಕ್ರಮ ಗುರುವಾರ ಬೀದರ್‌ನಲ್ಲಿ ಚಾಲನೆ ನೀಡಲಿದ್ದಾರೆ.
ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದಂತೆ ಕೃಷಿ ಒಂದು ಲಾಭದಾಯಕ ಉದ್ಯಮವೆಂದು ಸಾಧಿಸಲು, ಕೃಷಿಕರನ್ನು ಆಧುನಿಕ ತಂತ್ರಜ್ಞಾನದತ್ತ ಸೆಳೆವುದು ರೈತ ಸ್ಪಂದನದ ಮೂಲ ಆಶಯವಾಗಿದೆ.
ಮುಖ್ಯಮಂತ್ರಿಗಳು ಗುರುವಾರ ಮಧ್ಯಾಹ್ನ ಬೀದರ್ ಜಿಲ್ಲೆಯ ಚಿಟ್ಟಾ ಗ್ರಾಮದ ಪ್ರಗತಿಪರ ರೈತರ ತೋಟಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ ಬೀದರ್ ರಂಗಮಂದಿರದಲ್ಲಿ ಆಯೋಜಿಸಿರುವ ಸ್ಪಂದನ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲೆಯ ರೈತರ ಜತೆ ಸಂವಾದ ನಡೆಸಿ ಜಿಲ್ಲೆಯ ಐವರು ಪ್ರಗತಿಪರ ರೈತರ ಕುರಿತು ನಿರ್ಮಿಸಿರುವ ಕಿರುಚಿತ್ರ ವೀಕ್ಷಿಸಲಿದ್ದಾರೆ. ಮಿಶ್ರ ಬೆಳೆಯ ಪ್ರಯೋಗದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ರಾಯಚೂರು ಜಿಲ್ಲೆಯ ಪ್ರಗತಿಪರ ಕೃಷಿಕರದ ಕವಿತಾ ಉಮಾಶಂಕರ ಮಿಶ್ರಾ ಈ ವೇಳೆ ತಮ್ಮ ಅನುಭವ ಹಂಚಿಕೊಳ್ಳಲಿದ್ದು 800 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಸಮಾವೇಶ ಮಾಡುವ ಸಿದ್ಧರಾಮಯ್ಯ ಡೋಂಗಿ ಜ್ಯಾತ್ಯತೀತ ನಾಯಕ: ಎಚ್.ಡಿ.ಕುಮಾರಸ್ವಾಮಿ
ಸೊರಬ: ನೂತನ ಗ್ರಾಮ ಪಂಚಾಯ್ತಿ ಸ್ಥಾಪನೆಗೆ ಒತ್ತಾಯಿಸಿ ಯಲಸಿ ಗ್ರಾಮಸ್ಥರಿಂದ ಮನವಿ
ಕುಷ್ಟಗಿ : ಮದುವೆ ನಿಶ್ಚಿತಾರ್ಥಗೊಂಡಿದ್ದ ಯುವ ಜೋಡಿ ಆತ್ಮಹತ್ಯೆ : ಕಾರಣ ನಿಗೂಢ
ಆಸ್ಪತ್ರೆಗಳಲ್ಲಿ ನಾರ್ಮಲ್ ಹೆರಿಗೆಗಿಂತ ಸಿಸೇರಿಯನ್ ಹೆರಿಗೆ ಹೆಚ್ಚಳ : ಅಡಳಿತಾಧಿಕಾರಿ ಕಳವಳ
ಫೇಸ್ ಬುಕ್ ನಲ್ಲಿ ಹಾಕಿದ್ದ ಸೆಲ್ಫಿ ಪೋಸ್ಟ್ ನಿಂದ 5 ವರ್ಷದ ಬಳಿಕ ಅರೆಸ್ಟ್ ಆದ ಕೊಲೆ ಆರೋಪಿ!