ಸಕಾಲದಲ್ಲಿ ಖಾತಾ ಅರ್ಜಿ ಕಾರುಬಾರು


Team Udayavani, Nov 16, 2019, 10:05 AM IST

bng-tdy-1

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕಾಲ ಯೋಜನೆ ಅಡಿ ಖಾತಾ ವರ್ಗಾವಣೆಗೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚು ಸಲ್ಲಿಕೆಯಾಗಿವೆ. ನ.12ರವರೆಗೆ ಖಾತಾ ವರ್ಗಾವಣೆ ಸಂಬಂಧ 2107 ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಜಿದಾರರಿಂದ ಹಣ ಸಲ್ಲಿಕೆಯಾಗದ ಕಾರಣದಿಂದ 1928 ಅರ್ಜಿಗಳು ಬಾಕಿ ಉಳಿದಿವೆ. ಇವುಗಳಲ್ಲಿ 179 ಅರ್ಜಿಗಳು ಅಧಿಕಾರಿಗಳ ಬಳಿ ಇದ್ದು, ಇದನ್ನು ಅಧಿಕಾರಿಗಳೇ ವಿಲೇವಾರಿ ಮಾಡಬೇಕಿದೆ.

ವಿವಿಧ ವಿಭಾಗಳ ಅರ್ಜಿಗಳು ಕಾಲಮಿತಿಯೊಳಗೆ ವಿಲೇವಾರಿಯಾಗುತ್ತಿದ್ದು, ಕಂದಾಯ ವಿಭಾಗದ ಅರ್ಜಿಗಳು ವಿವಿಧ ಕಾರಣಗಳಿಂದ ತಡವಾಗಿ ವಿಲೇವಾರಿಯಾಗುತ್ತಿವೆ ಎನ್ನುತ್ತಾರೆ ಬಿಬಿಎಂಪಿ ಅಧಿಕಾರಿಗಳು. ಕೆಲವು ಅರ್ಜಿಗಳು ಕೋರ್ಟ್‌ನಲ್ಲಿ ವ್ಯಾಜ್ಯ ಹೊಂದಿರುವುದರಿಂದ ಶೀಘ್ರ ವಿಲೇವಾರಿ ಮಾಡಲಾಗುತ್ತಿಲ್ಲ ಎನ್ನಲಾಗಿದೆ.

ಈಗ ಸಕಾಲ ಯೋಜನೆಯಡಿ 91 ಇಲಾಖೆಯ 1,126 ಸೇವೆಗಳನ್ನು ಕಲ್ಪಿಸಲಾಗು¤ದೆ. ವಿವಿಧ ಸೇವೆಗಳಿಗೆ 7, 14 ಮತ್ತು 21 ದಿನಗಳ ಅವಧಿ ನಿಗದಿ ಮಾಡಲಾಗಿದೆ. ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿ ಸೇವೆ ನೀಡದಿದ್ದಲ್ಲಿ 20 ರೂ.ಗಳಿಂದ 500 ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ.

ನಾಗರಿಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಬೇಕು. ದೂರು ಆಧರಿಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹಾಲಿ ದಂಡ ಯೋಜನೆಯನ್ನು ಸುಧಾರಿಸುವ ಬಗ್ಗೆಯೂ ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆದಿದೆ.

ಸಹಾಯವಾಣಿ ನೆರವು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕಾಲ ಯೋಜನೆಯಡಿ ಸಲ್ಲಿಕೆಯಾಗುತ್ತಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವ ಉದ್ದೇಶದಿಂದ ಬಿಬಿಎಂಪಿ ಸಹಾಯವಾಣಿಯ ನೆರವು ಪಡೆದುಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಪ್ರದೇಶಿಕ ಚುನಾವಣಾ ಆಯುಕ್ತ ಹರ್ಷ ಗುಪ್ತಾ ಹೇಳಿದ್ದಾರೆ.

ಹರ್ಷ ಗುಪ್ತಾ ನೇತೃತ್ವದಲ್ಲಿ ಪ್ರತಿ ತಿಂಗಳು ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿಗೆ ಪರಿಶೀಲನಾ ಸಭೆ ನಡೆಸುತ್ತಿದ್ದು, ಬಿಬಿಎಂಪಿಯ ಸಹಾಯವಾಣಿ ಮೂಲಕವೂ ಅರ್ಜಿದಾರರಿಗೆ ಮಾಹಿತಿ ನೀಡಲಾಗುತ್ತಿದೆ. ಅರ್ಜಿ ವಿಲೇವಾರಿ ವಿಳಂಬ ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅದೇ ರೀತಿ ಸಕಾಲ ಯೋಜನೆಗೆ ಸಂಬಂಧಿಸಿದ ದೂರುಗಳಿದ್ದರೆ ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಬಹು ದಾಗಿದೆ. ಸಹಾಯವಾಣಿ: 080-22660000. ನೇರ ಅರ್ಜಿಗಳಿಗೆ ಕಡಿವಾಣ: ಕೆಲವು ಅಧಿಕಾರಿಗಳು ಅರ್ಜಿಗಳನ್ನು ಆನ್‌ಲೈನ್‌ (ಸಕಾಲ)ಮೂಲಕ

ತೆಗೆದುಕೊಳ್ಳದೆ ನೇರವಾಗಿ ಪಡೆಯುತ್ತಿರುವುದು ಹಾಗೂ ಅರ್ಜಿ ವಿಲೇವಾರಿಗೆ ಹಣ ಪಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಇಂತಹ ಅಧಿಕಾರಿಗಳ ಮೇಲೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಅರ್ಜಿಗಳನ್ನು ನೇರವಾಗಿ ಪಡೆಯುವಂತಿಲ್ಲ. ಎಲ್ಲ ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಪಡೆಯಬೇಕು ಹಾಗೂ ಅರ್ಜಿ ಪಡೆಯುವಾಗಲೇ ದಾಖಲೆಗಳು ಸರ್ಮಪಕ ವಾಗಿವೆಯೇ ಎಂದು ಪರಿಶೀಲಿಸಬೇಕು. ಅರ್ಜಿ ವಿಲೇವಾರಿಗೆ ನಿಗದಿ ಮಾಡಿರುವ ಅವಧಿ ಮುಗಿದ ಸಂದರ್ಭದಲ್ಲಿ ದಾಖಲೆಗಳು ಸರ್ಮಪಕವಾಗಿಲ್ಲ ಎಂದು ನೆಪ ಹೇಳುವಂತಿಲ್ಲ ಎನ್ನುವ ಸೂಚನೆಯನ್ನೂ ನೀಡಲಾಗಿದೆ ಎಂದರು.

ಸಕಾಲ ಯೋಜನೆಯಡಿ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸಾರ್ವಜನಿಕರು ಅರ್ಜಿ ಸ್ಥಿತಿಗತಿ ತಿಳಿಯಲು ಬಿಬಿಎಂಪಿ ಸಹಾಯವಾಣಿಗೂ ಕರೆ ಮಾಡಬಹುದು. -ಅನ್ಬುಕುಮಾರ್‌, ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ)

 ಖಾತಾ ವರ್ಗಾವಣೆ ಅರ್ಜಿಗಳೇ ಹೆಚ್ಚು:  ಬಿಬಿಎಂಪಿ ವ್ಯಾಪ್ತಿಯಲ್ಲಿ “ಸಕಾಲ’ ಅಡಿ ಖಾತಾ ವರ್ಗಾವಣೆ ಜತೆಗೆ ಖಾತಾ ನೋಂದಣಿ, ವಿಭಜನೆ ಮತ್ತು ಸಂಯೋಜನೆ ಸೇರಿ ಖಾತಾಗೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚು ಸಲ್ಲಿಕೆಯಾಗುತ್ತಿವೆ. 2018 ಮತ್ತು 2019ನೇ ಸಾಲಿನಲ್ಲಿ ಖಾತಾಗೆ ಸಂಬಂಧಿಸಿ 3,846 ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳಲ್ಲಿ 3,479 ಅರ್ಜಿದಾರರು ಹಣ ಪಾವತಿಸದ ಕಾರಣ ವಿಲೇವಾರಿಯಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

 

-ಹಿತೇಶ್‌ ವೈ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.