ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಸಲೀಂ ಅಹ್ಮದ್ ಆಗ್ರಹ
Team Udayavani, Aug 25, 2021, 5:29 PM IST
ಬೆಂಗಳೂರು: ‘ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ.
ಯತ್ನಾಳ್ ಅವರ ವಿರುದ್ಧ ಪ್ರತಿಭಟನೆಗೆ ಮಾಡಿದ್ದ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದ ಕಾರಣ ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯತ್ನಾಳ್ ಅವರ ಮಾತುಗಳು, ಅವರ ವ್ಯಕ್ತಿತ್ವ ಹಾಗೂ ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯತ್ನಾಳ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲಿ ಪ್ರತಿಭಟಿಸಿ ಪೋಸ್ಟರ್ ಅಂಟಿಸಲು ಮುಂದಾಗಿದ್ದರು. ಹೀಗಾಗಿ ವಿಧಾನಸೌಧ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ದಸ್ತಗಿರಿ ಮಾಡಿದ್ದರು. ಹೀಗಾಗಿ ನಾವೆಲ್ಲರೂ ಹೋಗಿ ನಮ್ಮ ಕಾರ್ಯಕರ್ತರನ್ನು ಬಿಡಿಸಿಕೊಂಡು ಬಂದಿದ್ದೇವೆ. ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೂ ಮನವಿ ನೀಡಿದ್ದಾರೆ. ಪ್ರತಿಭಟನೆ ಮಾಡಿದವರ ವಿರುದ್ಧ ಈ ರೀತಿ ಕ್ರಮ ಕೈಗೊಂಡಿರುವ ಸರ್ಕಾರ, ಅವಹೇಳನಕಾರಿ ಹೇಳಿಕೆ ಕೊಟ್ಟವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇಂತಹ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಉರಿಗೌಡ,ನಂಜೇಗೌಡ ಹೆಸರು ರಾಜಕೀಯ ವಿಚಾರ ಆಗಬಾರದು: ಆರ್.ಅಶೋಕ್
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ
ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ
ಈ ದೇಶ ಯಾರೋ ಒಬ್ಬರ, ಅದಾನಿ ಸ್ವತ್ತಲ್ಲ : ಬೆಳಗಾವಿಯಲ್ಲಿ ರಾಹುಲ್ ಗಾಂಧಿ
ಉಡುಪಿ:ಹೊಟೇಲ್ಗಳಿಗೆ ತಟ್ಟಿದ ನೀರಿನ ಬಿಸಿ – ಹೆಚ್ಚಿದ ಟ್ಯಾಂಕರ್ಗಳ ಓಡಾಟ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್ಐ ಪಾತ್ರ?