ಮಂಗಳೂರು ಪೊಲೀಸರಿಗೆ ಸಿಕ್ಕಿಬಿದ್ದ ಸ್ಯಾಮ್‌ ಪೀಟರ್‌

Team Udayavani, Aug 22, 2019, 3:03 AM IST

arrest

ಬೆಂಗಳೂರು: ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಹೆಸರು ಬಳಸಿಕೊಂಡು ದರೋಡೆಗೆ ಸಂಚು ರೂಪಿಸಿ ತನ್ನ ಎಂಟು ಮಂದಿ ತಂಡದ ಜತೆ ಮಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಪ್ರಮುಖ ಆರೋಪಿ ಕೇರಳ ಮೂಲದ ಟಿ. ಸ್ಯಾಮ್‌ ಪೀಟರ್‌ ಬೆಂಗಳೂರಿನಲ್ಲಿಯೂ ವಂಚಿಸಿರುವ ಸಂಗತಿ ಬಯಲಾಗಿದೆ.

ಕಳೆದ ಐದಾರು ತಿಂಗಳಿಂದ ಮಳಿಗೆಯ ಬಾಡಿಗೆ ಕೊಡದೆ ಮಾಲೀಕರಿಗೆ ವಂಚಿಸಿ ಪರಾರಿಯಾಗಿರುವ ಸಂಬಂಧ ಯಲಹಂಕ ನ್ಯೂಟೌನ್‌ ನಿವಾಸಿ ರೋಸಿ ಆರ್‌.ಪಿ.ದೇವಸಗಾಯಂ ಎಂಬವರು ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರ ವಿಚಾರಣೆ ಮುಕ್ತಾಯಗೊಳ್ಳುತ್ತಿದ್ದಂತೆ ಆರೋಪಿಯನ್ನು ಬಾಡಿ ವಾರೆಂಟ್‌ ಮೂಲಕ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ಹೇಳಿದರು.

ದೂರುದಾರರಾದ ರೋಸಿ ಪಿ.ದೇವಸಗಾಯಂ ಅವರು ಯಲಹಂಕ ಉಪನಗರದಲ್ಲಿ ಇಂಟರ್‌ ಬಿಯಿಂಗ್‌ ಕಂಪನಿ ನಡೆಸುತ್ತಿದ್ದಾರೆ. ಈ ಮಧ್ಯೆ 2018ರ ಏಪ್ರಿಲ್‌ನಲ್ಲಿ ರೋಸಿ ಅವರ ಬಳಿ ಬಂದು, ತಾನೂ ಸ್ಥಳೀಯ ನಿವಾಸಿ ಎನ್‌ಸಿಬಿಯಲ್ಲಿ ನಿರ್ದೇಶಕನಾಗಿದ್ದೇನೆ ಎಂದು ಆರೋಪಿ ಪರಿಚಯಿಸಿಕೊಂಡಿದ್ದಾನೆ. ನಂತರ ರೋಸಿ ಅವರ ಕಂಪನಿಯ ಒಂದು ಭಾಗದ ಜಾಗವನ್ನು ಬಾಡಿಗೆಗೆ ಪಡೆದುಕೊಂಡು ಎನ್‌ಸಿಬಿ ಕಚೇರಿ ತೆರೆದಿದ್ದು, ನಾಲ್ಕು ತಿಂಗಳವರೆಗೆ ಬಾಡಿಗೆ ಪಾವತಿಸಿದ್ದಾನೆ.

ಅನಂತರ ಮೂರು ತಿಂಗಳು ಬಾಡಿಗೆ ಕೊಡದೆ ತಲೆಮರೆಸಿಕೊಂಡಿದ್ದ. ಬಾಡಿಗೆ ಹಣ ಕೊಡುವಂತೆ ಕೇಳಿದಾಗ ಏಪ್ರಿಲ್‌ 2019ರ ಒಳಗಾಗಿ ಬಾಕಿ ಬಾಡಿಗೆ ಹಣ 67,741 ರೂ. ಕೊಟ್ಟು ಖಾಲಿ ಮಾಡುವುದಾಗಿ ಭರವಸೆ ನೀಡಿದ್ದ. ಆದರೆ, ಇದುವರೆಗೂ ಹಣ ಕೊಡದೆ, ಕಚೇರಿ ಖಾಲಿ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಎನ್‌ಸಿಬಿ ಅಧಿಕಾರಿ ಎಂದು ಹೇಳಿಕೊಂಡು ಮೋಸ ಮಾಡಿದ್ದಾನೆ ಎಂದು ರೋಸಿ ಅವರು ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ಹೇಳಿದರು.

ತಿಂಗಳಿಗೆ ಒಂದೆರಡು ಬಾರಿ ಮಾತ್ರ ಭೇಟಿ: ಎನ್‌ಸಿಬಿ ಅಧಿಕಾರಿ ಎಂದು ಹೇಳಿಕೊಂಡಿದ್ದ ಆರೋಪಿ ತಿಂಗಳಿಗೆ ಒಂದೆರಡು ಬಾರಿ ಮಾತ್ರ ಕಚೇರಿಗೆ ಬರುತ್ತಿದ್ದ. ತಾನೂ ಎನ್‌ಸಿಬಿ ಅಧಿಕಾರಿ, ನೆರೆ ಜಿಲ್ಲೆ ಮತ್ತು ಬೇರೆ ಬೇರೆ ರಾಜ್ಯಗಳಲ್ಲಿ ಕಾರ್ಯನಿಮಿತ್ತ ಹೋಗುತ್ತಿರುತ್ತೇನೆ. ಹೀಗಾಗಿ ಕಚೇರಿಯಲ್ಲಿ ಇರಲು ಸಾಧ್ಯವಾಗುವುದಿಲ್ಲ. ಇದೊಂದು ಕೇಂದ್ರ ಸರ್ಕಾರದ ಇಲಾಖೆಯಾದರಿಂದ ತಾನೂ ಯಾರೊಂದಿಗೂ ಹೆಚ್ಚು ಬೆರೆಯುವಂತಿಲ್ಲ.

ಯಾವುದೇ ವಿಚಾರವನ್ನು ಹಂಚಿಕೊಳ್ಳುವಂತಿಲ್ಲ ಎಂದು ಸ್ಥಳೀಯರಿಗೆ ಹೇಳಿಕೊಳ್ಳುತ್ತಿದ್ದ. ಹೀಗಾಗಿ ಆತನ ಬಳಿ ಯಾರು ಮಾತನಾಡುತ್ತಿರಲಿಲ್ಲ ಎಂದು ಪೊಲೀಸರು ಹೇಳಿದರು. ಸ್ಯಾಮ್‌ ಪೀಟರ್‌ ವಿರುದ್ಧ ಕರ್ನಾಟಕ ಮಾತ್ರವಲ್ಲದೆ, ಮಹಾರಾಷ್ಟ್ರ, ಕೇರಳ ಸೇರಿ ದೇಶದ ವಿವಿಧೆಡೆ ನಾನಾ ಪ್ರಕರಣಗಳು ದಾಖಲಾಗಿದ್ದು, ಮೋಸ್ಟ್‌ ವಾಟೆಂಡ್‌ ಕ್ರಿಮಿನಲ್‌ ಆಗಿದ್ದಾನೆ. ಈತನ ವಿರುದ್ಧ ಸಿಬಿಐನಲ್ಲಿಯೂ ಪ್ರಕರಣ ದಾಖಲಾಗಿದ್ದು, ಸದ್ಯದಲ್ಲೇ ಸಿಬಿಐ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.