ಕೋ ಆಪರೇಟೀವ್ ಸೊಸೈಟಿಗೆ ಸಂಜನಾ ದೂರು
Team Udayavani, Aug 22, 2017, 12:08 PM IST
ಬೆಂಗಳೂರು: ಮಲ್ಲೇಶ್ವರದ ಪ್ರಸಿದ್ಧಿ ಚಿಟ್‌ಫಂಡ್ ವಿರುದ್ಧ ಕ್ರಮ ಜರುಗಿಸಲು ಕೋರಿ ಚಿತ್ರ ನಟಿ ಸಂಜನಾ ಸೋಮವಾರ ರಾಜ್ಯ ಕೋ-ಆಪರೇಟಿವ್ ಸೊಸೈಟಿ ರಿಜಿಸ್ಟ್ರಾರ್‌ಗೆ ದೂರು ನೀಡಿದ್ದಾರೆ. ಪ್ರಸಿದ್ಧಿ ಚಿಟ್‌ಫಂಡ್ ಪ್ರೈವೈಟ್ ಲಿ. ಮಾಲೀಕರಾದ ಮಹೇಶ್ ಹಾಗೂ ನಿರುಪಮಾ ತಮಗೆ 26 ಲಕ್ಷ ರೂ. ವಂಚಿಸಿದ್ದು, ಇದೇ ರೀತಿ ಹಲವರಿಗೆ ವಂಚಿಸಿರುವ ಸಾಧ್ಯತೆಯಿದೆ.
ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ಕೋರಿ ಕೋ ಆಪರೇಟೀವ್ ಸೊಸೈಟಿಯ ರಿಜಿಸ್ಟ್ರಾರ್ ಅವರನ್ನು ಭೇಟಿಯಾಗಿ ನಟಿ ದೂರು ನೀಡಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಅಲ್ಲದೆ ಮುಂದಿನ ಮೂರು ದಿನಗಳಲ್ಲಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆಯಿದ್ದು, ಸದ್ಯದಲ್ಲಿಯೇ ಬಂಧನವಾಗುವ ಸಾಧ್ಯತೆಯಿದೆ ಎಂದರು.
ಇದೇ ಆರೋಪಕ್ಕೆ ಸಂಬಂಧಿಸಿದಂತೆ ಸಂಜನಾ ಆಗಸ್ಟ್ 19ರಂದು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಠಾಣೆ ಪೊಲೀಸರು, ತನಿಖೆ ಚುರುಕೊಳಿಸಿದ್ದಾರೆ. ಆರೋಪಿಗಳಾದ ಮಹೇಶ್ ಹಾಗೂ ನಿರುಪಮಾ, ಸುಮಾರು 150 ಕುಟುಂಬಗಳಿಂದ 100ಕೋಟಿ ಹಣ ಸಂಗ್ರಹಿಸಿರುವ ಸಾಧ್ಯತೆಯಿದೆ. ಸದ್ಯ ಆರೋಪಿಗಳು ನೆರೆರಾಜ್ಯಗಳಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ