ಚಿಟ್ ಫಂಡ್ ಕಂಪನಿಯಿಂದ ಸಂಜನಾಗೆ 28 ಲಕ್ಷ ವಂಚನೆ
Team Udayavani, Aug 20, 2017, 11:18 AM IST
ಬೆಂಗಳೂರು: ಮಲ್ಲೇಶ್ವರದ ಪ್ರಸಿದ್ಧಿ ಚಿಟ್ಫಂಡ್ ಎಂಬ ಕಂಪೆನಿ ತಮಗೆ 28 ಲಕ್ಷ ರೂ. ವಂಚಿಸಿದೆ ಎಂದು ಆರೋಪಿಸಿ ನಟಿ ಸಂಜನಾ ಗರ್ಲಾನಿ ಮಲ್ಲೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚಿಟ್ಫಂಡ್ ಕಂಪನಿ ಮಾಲೀಕ ಮಹೇಶ್ ಮತ್ತು ಪತ್ನಿ ನಿರೂಪಾ ವಿರುದ್ಧ ಸಂಜನಾ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.
ಸಂಜನಾ ಕಳೆದೆರಡು ವರ್ಷಗಳಿಂದ ಪ್ರಸಿದ್ಧಿ ಚಿಟ್ ಫಂಡ್ನಲ್ಲಿ ಸುಮಾರು 28 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಆದರೆ, ಮಹೇಶ್ ಎರಡು ತಿಂಗಳಿನಿಂದ ಚಿಟ್ ಫಂಡ್ ಕಚೇರಿಯನ್ನು ಮುಚ್ಚಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಟಿ ಸಂಜನಾ ಮಾತ್ರವಲ್ಲದೆ, ಇತರೆ ನೂರಾರು ಮಂದಿಗೂ 18 ಕೋಟಿ ರೂ. ವಂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹತ್ತಾರು ಮಂದಿ ದೂರು ನೀಡಿದ್ದು, ಇದುವರೆಗೂ ಆರೋಪಿಗಳ ವಿರುದ್ಧ 6 ಎಫ್ಐಆರ್ ದಾಖಲಾಗಿದೆ. ಆರೋಪಿಗಳು ನೆರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ.
ಶೋಧ ಕಾರ್ಯ ನಡೆಯುತ್ತಿದೆ ಎಂದು ಮಲ್ಲೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಹಕಾರ ಜಂಟಿ ನಿಬಂಧಕ ಎಚ್.ಬಾಲಶೇಖರ್ ಅವರಿಗೂ ದೂರು ನೀಡಿರುವ ನಟಿ ಸಂಜನಾ, ಹಣ ವಾಪಸ್ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ