ಆರೋಪಿ ಸುಳಿವು ನೀಡಿದ ಸಂಜಯ್‌ದತ್‌!

Team Udayavani, Jun 20, 2019, 3:00 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ನಿವೃತ್ತ ಪೊಲೀಸ್‌ ಪೇದೆಗೆ ಡಿಕ್ಕಿ ಹೊಡೆದು ಅವರ ಸಾವಿಗೆ ಕಾರಣವಾಗಿದ್ದ ಆಟೋ ಚಾಲಕನ ಸುಳಿವಿಗೆ ಸಹಕರಿಸಿದ್ದು ಬಾಲಿವುಡ್‌ ನಟ ಸಂಜಯ್‌ದತ್‌ ಚಿತ್ರ. ಈ ಸುಳಿವು ಆಧರಿಸಿ ತನಿಖೆ ಚುರುಕುಗೊಳಿಸಿದ ಮಡಿವಾಳ ಸಂಚಾರ ಠಾಣೆ ಪೊಲೀಸರು, ಆರೋಪಿ ಶೋಯಬ್‌ ಖಾನ್‌ (19)ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೂ.17ರಂದು ಮಧ್ಯಾಹ್ನ 1 ಗಂಟೆಗೆ ಮಡಿವಾಳ ಮಾರುಕಟ್ಟೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೆಎಸ್‌ಆರ್‌ಪಿ ನಿವೃತ್ತ ಪೇದೆ ರಾಮರಾವ್‌ (66) ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ರಾಮರಾವ್‌ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಸಂಚಾರ ಠಾಣೆ ಪೊಲೀಸರು ಆರೋಪಿ ಆಟೋಚಾಲಕನ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದರು. ಘಟನಾ ಸ್ಥಳದಿಂದ ಸುಮಾರು 500 ಮೀ. ದೂರದಲ್ಲಿರುವ ಸಿಸಿ ಕ್ಯಾಮೆರಾ ಫ‌ೂಟೇಜ್‌ ಪರಿಶೀಲಿಸಿದ್ದರು. ಅದರಲ್ಲಿ ಆಟೋ ದೃಶ್ಯಗಳು ಅಸ್ಪಷ್ಟವಾಗಿದ್ದು, ನಂಬರ್‌ ಕೂಡ ಸರಿಯಾಗಿ ಕಾಣಿಸುತ್ತಿರಲಿಲ್ಲ. ಆದರೆ, ಆಟೋ ಹಿಂದಿದ್ದ ನಟ ಸಂಜಯ್‌ ದತ್‌ ಫೋಟೋ ಕಾಣಿಸುತ್ತಿತ್ತು.

ಈ ಸುಳಿವು ಆಧರಿಸಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸುಮಾರು ಮೂವತ್ತು ಆಟೋ ಜಪ್ತಿ ಮಾಡಿ ಚಾಲಕರನ್ನು ವಿಚಾರಣೆಗೆ ಒಳಪಡಿಸಿದರೂ ಆರೋಪಿಯ ಸುಳಿವು ಸಿಗಲಿಲ್ಲ. ಬಳಿಕ ಸಿದ್ದಾಪುರದ ಮನೆಯ ಮುಂಭಾಗದ ಆಟೋ ಜಪ್ತಿ ಮಾಡಿ ಅದರ ಚಾಲಕ ಶೋಯಬ್‌ಖಾನ್‌ನನ್ನು ವಿಚಾರಣೆಗೊಳಪಡಿಸಿದಾಗ, ತಪ್ಪೊಪ್ಪಿಕೊಂಡಿದ್ದಾನೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.

ಅಪಘಾತದಲ್ಲಿ ಮೃತಪಟ್ಟಿದ್ದ ರಾಮರಾವ್‌ ಕೆಎಸ್‌ಆರ್‌ಪಿಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದು, ಪೊಲೀಸ್‌ ವಸತಿ ಗೃಹದಲ್ಲಿ ವಾಸಿಸುತ್ತಿದ್ದರು. ಮೇ 17ರಂದು ಕೆಎಸ್‌ಆರ್‌ಪಿ ನಾಲ್ಕನೇ ಬೆಟಾಲಿಯನ್‌ ಮುಖ್ಯದ್ವಾರದ ಮುಂಭಾಗ ನಡೆದುಕೊಂಡು ಬರುತ್ತಿದ್ದಾಗ ಏಕಮುಖರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಹೋದ ಶೋಯಬ್‌ಖಾನ್‌, ರಾಮರಾವ್‌ ಅವರಿಗೆ ಡಿಕ್ಕಿಹೊಡೆದು ಪರಾರಿಯಾಗಿದ್ದ.

ಇನ್ಸ್‌ಪೆಕ್ಟರ್‌ ಗವಿಸಿದ್ದಪ್ಪ, ಪಿಎಸ್‌ಐ ಟಿ.ಬಿ.ಜಯರಾಮ್‌, ಮುಖ್ಯಪೇದೆಗಳಾದ ರಾಘವೇಂದ್ರ ಹಾಗೂ ಮೌಸಿನ್‌ಖಾನ್‌ ತನಿಖಾ ತಂಡದಲ್ಲಿದ್ದರು.


ಈ ವಿಭಾಗದಿಂದ ಇನ್ನಷ್ಟು

  • ಯಲಹಂಕ: ರಾಜ್ಯದಲ್ಲಿ ಅಂಬೇಡ್ಕರ್‌ ಭವನಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಯಲಹಂಕ...

  • ಬೆಂಗಳೂರು: ಹೈದರಾಬಾದ್‌ನ ಪಶು ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಳಿಕ ಮಹಿಳಾ ಸುರಕ್ಷತೆ ಬಗ್ಗೆ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ನಗರ ಪೊಲೀಸರು ಕೈಗೊಳ್ಳುತ್ತಿದ್ದಾರೆ....

  • ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕಾವು ಜೋರಿದೆ. ಆದರೆ, ಉದ್ಯಾನ ನಗರಿಯ ವಾತಾವರಣಇದಕ್ಕೆ ಭಿನ್ನವಾಗಿದ್ದು, ಸ್ಪಲ್ಪ ಯಾಮಾರಿದರು ಆಸ್ಪತ್ರೆ ಮೆಟ್ಟಿಲೇರಬಹುದು...

  • ಬೆಂಗಳೂರು: ನಗರದ 24 ಪ್ರಮುಖ ಮೇಲ್ಸೇತುವೆ, ಅಂಡರ್‌ ಪಾಸ್‌ ಮತ್ತು ತೂಗು ಸೇತುವೆಗಳಲ್ಲಿನ ಲೋಪ ಸರಿಪಡಿಸಲು ಬಿಬಿಎಂಪಿ 40 ಕೋಟಿ ರೂ. ಮೀಸಲಿರಿಸಿದ್ದು, ಟೆಂಡರ್‌ ಕರೆಯಲು...

  • ಬೆಂಗಳೂರು: ಉಪ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧ ಹಾಗೂ ಈ ಭಾಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ...

ಹೊಸ ಸೇರ್ಪಡೆ