ಏ.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ
Team Udayavani, Apr 15, 2018, 6:00 AM IST
ಬೆಂಗಳೂರು :ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ಣಗೊಂಡಿದ್ದು, ಏ.30ಕ್ಕೆ ಪಿಯುಸಿ ಹಾಗೂ ಮಾ.7ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಹೊರ ಬೀಳಲಿದೆ. ಫಲಿತಾಂಶ ಪ್ರಕಟಕೊಂಡ ಮಾರನೇ ದಿನ ಶಾಲಾ ಕಾಲೇಜಿನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಮಾ.1ರಿಂದ ಆರಂಭಗೊಂಡ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.17ಕ್ಕೆ ಪೂರ್ಣಗೊಂಡಿದೆ. ಮಾ.23ಕ್ಕೆ ಆರಂಭಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.6ಕ್ಕೆ ಕೊನೆಯಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಪಾಲನ ಕಾರ್ಯ ಆರಂಭವಾಗಿದೆ. ಈ ತಿಂಗಳ ಅಂತ್ಯದೊಳಗೆ ಎಸ್ಸೆಸ್ಸೆಲ್ಸಿ ಮೌಲ್ಯಮಾಪನವೂ ಪೂರ್ಣಗೊಳ್ಳಲಿದೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಅವಧಿಗೂ ಮೊದಲೇ ಮಾಡಲಾಗಿದೆ. ಚುನಾವಣೆ ಹಾಗೂ ನೀತಿ ಸಂಹಿತೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಬಾರದು ಎಂಬ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿತ್ತು.ಈ ಎರಡು ಪರೀಕ್ಷೆಯ ಫಲಿತಾಂಶವೂ ಕೂಡ ವಿಧಾನಸಭೆ ಚುನಾವಣೆಯ ಮೊದಲೇ ಬರಲಿದೆ. ಏ.30ಕ್ಕೆ ದ್ವಿತೀಯ ಪಿಯುಸಿ ಹಾಗೂ ಮಾ.7ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್