ಹೊಸ ವರ್ಷಾಚರೆಣೆಗೆ ಬ್ರೇಕ್: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ
Team Udayavani, Dec 31, 2020, 10:48 AM IST
ಕಮಲ್ ಪಂತ್
ಬೆಂಗಳೂರು: ರೂಪಾಂತರಿತ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೊಸ ಆದೇಶ ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಈ ಹಿಂದೆ ಇಂದು ಸಂಜೆ 6ರಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಆದರೆ ಇದೀಗ ಈ ಆದೇಶವನ್ನು ಬದಲಾಯಿಸಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದಲೇ ಸೆ.144 ಜಾರಿಯಲ್ಲಿರಲಿದೆ ಎಂದು ಆದೇಶಿಸಿದ್ದಾರೆ.
ಬೆಂಗಳೂರಿನ 15 ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ರಾತ್ರಿ ಹತ್ತು ಗಂಟೆಯ ನಂತರ ನಗರದ ಮೇಲ್ಸೇತುವೆಗಳು ಬಂದ್ ಆಗಿರಲಿದೆ. ಪ್ರಮುಖ ರಸ್ತೆಗಳು ಬಂದ್ ಮಾಡಲಾಗಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಮಾರ್ಗೋಸ್ ರೋಡ್, ರೆಸಿಡೆನ್ಸಿ ರೋಡ್, ಇಂದಿರಾ ನಗರ ರೋಡ್, ಕಬ್ಬನ್ ಪಾರ್ಕ್ ರೋಡ್ ಸೇರಿ 15 ಕಡೆ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನಿರ್ಬಂಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.144 ನಿಷೇಧಾಜ್ಞೆ ಜಾರಿ
ನಗರದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇರಲಿದ್ದು, ಪೊಲೀಸ್ ಬಂದೋಬಸ್ತ್ ಕೂಡಾ ಹೆಚ್ಚಾಗಿರಲಿದೆ.
ಮಂಗಳೂರಿನಲ್ಲೂ ಇಂದು ಸಂಜೆ ಆರರಿಂದ ನಾಳೆ ಬೆಳಗ್ಗೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ