ಪ್ರತ್ಯೇಕ ಅಪಘಾತ: ಇಬ್ಬರ ಸಾವು

Team Udayavani, Apr 17, 2019, 3:00 AM IST

ಬೆಂಗಳೂರು: ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಟೆಕ್ಕಿಯೊಬ್ಬರು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆ.ಪಿನಗರದ ನಿವಾಸಿ ಪ್ರಶಾಂತ್‌ ಮಜೂಮಾರ್‌ (43) ಮೃತರು.

ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದ ಪ್ರಶಾಂತ್‌ ಸೋಮವಾರ (ಎ.15)ರಂದು ಸಂಜೆ ಕೆಲಸ ಮುಗಿಸಿಕೊಂಡು 6.30ರ ಸುಮಾರಿಗೆ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಾರ್ಗಮಧ್ಯೆ ಹೊಸೂರು ಮುಖ್ಯರಸ್ತೆಯ ಎನ್‌ಡಿಟಿಎಫ್‌ ಕಾಲೇಜು ಬಳಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಬೈಕ್‌ಡಿಕ್ಕಿ ಹೊಡೆದಿದ್ದು ಪ್ರಶಾಂತ್‌ ಕೆಳಗೆ ಬಿದ್ದಿದ್ದಾರೆ. ಅವರ ಮೇಲೆಯೇ ಲಾರಿಯ ಚಕ್ರಹರಿದಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಲಾರಿ ಸ್ಥಳದಲ್ಲಿಯೇ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ವಿದ್ಯಾರ್ಥಿ ಸಾವು: ಮತ್ತೂಂದು ಪ್ರಕರಣದಲ್ಲಿ ಚಲಿಸುತ್ತಿದ್ದ ಬೈಕ್‌ ಸ್ಕಿಡ್‌ ಆದ ಪರಿಣಾಮ ರಸ್ತೆಯ ಮೇಲೆ ಬಿದ್ದ ವಿದ್ಯಾರ್ಥಿಯೊಬ್ಬರ ತಲೆಗೆ ಗಂಭೀರ ಪೆಟ್ಟಾಗಿ ಮೃತಪಟ್ಟಿರುವ ಘಟನೆ ಹೊಸಕೆರೆಹಳ್ಳಿಯಲ್ಲಿ ನಡೆದಿದೆ. ಕೇರಳ ಮೂಲದ ಅಬ್ರಹಾಂ ಫಿಲಿಪ್ಸ್‌ (23) ಮೃತ ವಿದ್ಯಾರ್ಥಿ.

ಖಾಸಗಿ ಕಾಲೇಜೊಂದರಲ್ಲಿ ಫಿಸಿಯೋಥೆರಪಿ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ಅಬ್ರಹಾಂ ಹೊಸಕೆರೆಹಳ್ಳಿಯಲ್ಲಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಅಬ್ರಹಾಂ, ಸೋಮವಾರ ರಾತ್ರಿ 8.20ರಲ್ಲಿ ಹೊಸಕೆರೆಹಳ್ಳಿ ಶನಿಮಹಾತ್ಮ ದೇವಾಲಯದ ಬಳಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ತಲೆಗೆ ಪೆಟ್ಟಾಗಿದೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬನಶಂಕರಿ ಸಂಚಾರ ಪೊಲೀಸ್‌ ಠಾಣೆಯಲಿ ಪ್ರಕರಣ ದಾಖಲಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ