ಟ್ರಾಫಿಕ್‌ ನಿಯಂತ್ರಣಕ್ಕೆ ಪ್ರತ್ಯೇಕ “ಬಸ್‌ ಲೇನ್‌’


Team Udayavani, May 22, 2017, 12:41 PM IST

bus-line.jpg

ಬೆಂಗಳೂರು: ರಾಜಧಾನಿಯ ಟ್ರಾಫಿಕ್‌ ಜಾಮ್‌ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮ ಕೈಗೊಂಡಿರುವ ನಗರ ಸಂಚಾರ ಪೊಲೀಸರು, ಇದೀಗ ಬಸ್‌ಗಳ ಓಡಾಟಕ್ಕೆ ಪ್ರತ್ಯೇಕ “ಬಸ್‌ಲೇನ್‌’ ಜಾರಿಗೆ ಚಿಂತನೆ ನಡೆಸಿದ್ದಾರೆ.

ನಗರದಲ್ಲಿ ಟ್ರಾಫಿಕ್‌ ಜಾಮ್‌ನಿಂದ ಸಾರ್ವಜನಿಕರು ತಾಸುಗಟ್ಟಲೇ ಕಾಯುವುದು ಒಂದೆಡೆಯಾದರೆ, ಟ್ರಾಫಿಕ್‌ ಮಧ್ಯೆಯೇ ಅಡ್ಡಾದಿಡ್ಡಿ ಸಂಚರಿಸುವ ಬಸ್‌ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ನಗರದ ಹಲವೆಡೆ ಜಾರಿಯಲ್ಲಿರುವ ಆಟೋಲೇನ್‌ ಮಾದರಿಯಂತೆ ಬಸ್‌ಗಳ ಸಂಚಾರಕ್ಕೇ ಪ್ರತ್ಯೇಕ ಲೇನ್‌ ಆರಂಭಿಸಲು ನಿರ್ಧರಿಸಲಾಗಿದೆ. ಇದರಿಂದ ಬಸ್‌ಗಳ  ಅಡ್ಡಾದಿಡ್ಡಿ ಸಂಚಾರ, ಚಾಲಕರ ಓವರ್‌ಟೇಕ್‌ ಪ್ರವೃತ್ತಿಗೆ ಕಡಿವಾಣ ಬೀಳುವ ಜತೆಗೆ ಟ್ರಾಫಿಕ್‌ ಸಮಸ್ಯೆಗೂ ಪರಿಹಾರ ಸಿಗಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ದೇಶಿತ “ಬಸ್‌ಲೇನ್‌’ ರೂಪಿಸುವ ಸಂಬಂಧ ಪಶ್ಚಿಮ ಹಾಗೂ ಪೂರ್ವ ವಿಭಾಗ ಸೇರಿದಂತೆ ನಗರದಲ್ಲಿ ಬಸ್‌ಗಳ ಸಂಚಾರ ಹೆಚ್ಚಿರುವ ಮಾರ್ಗಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಈ ಪಟ್ಟಿಯಲ್ಲಿ ಕೆ.ಆರ್‌.ಮಾರುಕಟ್ಟೆ,  ಮೆಜೆಸ್ಟಿಕ್‌ ಸುತ್ತಮುತ್ತಲ ಭಾಗ, ಮೈಸೂರು ರಸ್ತೆ ಸೇರಿದಂತೆ ಇತರೆ ಮಾರ್ಗಗಳು ಇವೆ. ಬಸ್‌ ಲೇನ್‌ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಹಾಗೂ ಎಲ್ಲ ಖಾಸಗಿ ಬಸ್‌ಗಳಿಗೂ ಅನ್ವಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ “ಉದಯವಾಣಿ’ ಜತೆ ಮಾತನಾಡಿದ ನಗರ ಸಂಚಾರ ಪೊಲೀಸ್‌ ವಿಭಾಗದ ಹೆಚ್ಚುವರಿ ಆಯುಕ್ತ ಹಿತೇಂದ್ರ, “ಟ್ರಾಫಿಕ್‌ ನಿಯಂತ್ರಣದ ದೃಷ್ಟಿಯಿಂದ ಬಸ್‌ಲೇನ್‌ ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮೊದಲು ನಗರದ ಬಸ್‌ಗಳ ಓಡಾಟ ಹೆಚ್ಚಿರುವ ಭಾಗಗಳಲ್ಲಿ ಬಸ್‌ಲೇನ್‌ ಆರಂಭಿಸಿ, ಅದರ ಯಶಸ್ಸು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು,’ ಎಂದು ತಿಳಿಸಿದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.