ಲೈಂಗಿಕ ದೌರ್ಜನ್ಯ ಆರೋಪಿಗೆ 20 ವರ್ಷ ಶಿಕ್ಷೆ

Team Udayavani, May 3, 2018, 11:43 AM IST

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 55ನೇ ಸಿಟಿ ಸಿವಿಲ್‌ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ರಾಜಣ್ಣ (55) ಶಿಕ್ಷೆ ಗೊಳಗಾದವ.

ಆರೋಪಿ 2014ರ ನ.19ರಂದು ಶಾಲೆಯಿಂದ ಮನೆಗೆ ಬಂದಿದ್ದ ಅಪ್ರಾಪ್ತೆಯನ್ನು ಆಮಿಷ ವೊಡ್ಡಿ ತನ್ನ ಮನೆಗೆ ಕರೆದೊಯ್ದ ಆರೋಪಿ, ಆಕೆಯ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ವೆಸಗಿದ್ದ. ಈ ಸಂಬಂಧ ಪೋಷಕರು ದೂರು ನೀಡಿದ್ದರು. ಪೊಲೀಸರು ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾ ರೋಪ ಪಟ್ಟಿಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ ಸಂತ್ರಸ್ತೆಯ ಪೋಷಕರಿಗೆ 2.50 ಲಕ್ಷರೂ. ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ. ಸರ್ಕಾರದ ಪರವಾಗಿ ಅಭಿಯೋಜಕ ಎಸ್‌. ಎನ್‌. ಹಿರೇಮನಿ ವಾದಿಸಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ