ಲೈಂಗಿಕ ದೌರ್ಜನ್ಯ ಎಸಗಿದವನ ಸೆರೆ
Team Udayavani, Jul 29, 2018, 12:01 PM IST
ಬೆಂಗಳೂರು: ಬಾರ್ಗರ್ಲ್ ಒಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸ್ಟಿನ್ ಟೌನ್ ನಿವಾಸಿ ಜಾವೇದ್ (28) ಬಂಧಿತ ಆರೋಪಿ. ಆರೋಪಿ ತನಗೆ ಪರಿಚಯವಿರುವ ಮುಂಬೈ ಮೂಲದ ಬಾರ್ಗರ್ಲ್ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಕ್ಲಬ್ ಒಂದರಲ್ಲಿ ಕೆಲಸ ಮಾಡುತ್ತಿರುವ ಜಾವೇದ್, ತನ್ನ ಮನೆ ಮುಂದೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 22 ವರ್ಷದ ಬಾರ್ ಗರ್ಲ್ ಅನ್ನು ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಮಧ್ಯೆ ಯುವತಿ ನಗರದಲ್ಲಿದ್ದ ಕೆಲಸ ತೊರೆದು ಮುಂಬೈಗೆ ಹೋಗಿದ್ದರು.
ಜು.27ರಂದು ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿದ್ದ ವಸ್ತುಗಳನ್ನು ಕೊಂಡೊಯ್ಯಲು ನಗರಕ್ಕೆ ಬಂದಿದ್ದರು. ಇದನ್ನು ಗಮನಿಸಿದ ಆರೋಪಿ, ಮಾತನಾಡಿಸುವ ನೆಪದಲ್ಲಿ ಈಕೆಯ ಮನೆಗೆ ಬಂದು, ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ. ಈ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದರು ಎಂದು ಅಶೋಕನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್