ಕದ್ದನೆಂದು ಶಾಕ್‌ ಕೊಟ್ಟು ಕೊಂದರು


Team Udayavani, Aug 23, 2017, 12:10 PM IST

cable-wire.jpg

ಬೆಂಗಳೂರು: ವಿದ್ಯುತ್‌ ಕೇಬಲ್‌ಗ‌ಳನ್ನು ಕಳವು ಮಾಡುತ್ತಿದ್ದ ಎಂಬ ಆರೋಪದ ಮೇಲೆ ಪಶಿrಮ ಬಂಗಾಳ ಮೂಲದ ಕಾರ್ಮಿಕನೊಬ್ಬನನ್ನು ಕರೆಂಟ್‌ ಶಾಕ್‌ ಕೊಟ್ಟು ಚಿತ್ರ ಹಿಂಸೆ ನೀಡಿ ಹತ್ಯೆಗೈದಿರುವ ದುಷ್ಕರ್ಮಿಗಳು, ಮತ್ತಿಬ್ಬರನ್ನೂ ಕೊಲೆಗೈಯಲು ಯತ್ನಿಸಿರುವ ಘಟನೆ ಮಾರತ್‌ಹಳ್ಳಿಯ ಕುಂದಲಹಳ್ಳಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಪಶ್ಚಿಮ ಬಂಗಾಳದ ಬಶೀರ್‌(20)ಕೊಲೆಯಾದವ. ಈತನ ಸ್ನೇಹಿತರಾದ ಹಫೀಸುಲ್ಲಾ(23) ಹಾಗೂ ಅಜೆಲ್‌(26) ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸುರೆಡ್ಡಿ, ಮಿಥುನ್‌ ಹಾಗೂ ಮೈದುಲ್‌ ಎಂಬುವವರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಯುತ್ತಿದೆ ಎಂದು ಮಾರತ್‌ಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮೂವರು ಯುವಕರು ಕೆಲಸ ಹುಡುಕಿಕೊಂಡು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದರು. ಆರಂಭದಲ್ಲಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು, ನಂತರ ಟ್ಯಾಂಕರ್‌ ನೀರು ಸರಬರಾಜು ಮಾಡುವ ಬಸುರೆಡ್ಡಿ ಎಂಬಾತನ ಬಳಿ ಕೆಲಸಕ್ಕೆ ಸೇರಿಕೊಂಡಿದ್ದರು. ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂಬ ಕಾರಣಕ್ಕೆ ಮೂವರಿಗೂ ಬಸುರೆಡ್ಡಿ ಕುಂದಲಹಳ್ಳಿಯಲ್ಲಿರುವ ತಮ್ಮ ಜಮೀನಿನಲ್ಲಿ ಗುಡಿಸಲು ನಿರ್ಮಿಸಿದ್ದರು. 

ಈ ಮಧ್ಯೆ ನಾಲ್ಕು ದಿನಗಳ ಹಿಂದೆ ಜಮೀನಿನಲ್ಲಿ ವಿದ್ಯುತ್‌ ಕೇಬಲ್‌ಗ‌ಳು ಕಳುವಾಗಿದ್ದವು. ಇದಾದ ಮರು ದಿನ ಮೂವರು ಕೆಲಸಕ್ಕೆ ಬಂದಿರಲಿಲ್ಲ. ಅಲ್ಲದೇ ಕಳುವಾಗಿದ್ದ ದಿನ ಮೂವರು ಬಾರ್‌ವೊಂದರಲ್ಲಿ ಮದ್ಯ ಸೇವಿಸುತ್ತಿದ್ದರು ಎಂಬ ಆ ಮಾಹಿತಿಯನ್ನು ಬಸುರೆಡ್ಡಿ ಪಡೆದುಕೊಂಡಿದ್ದರು. ಅಲ್ಲದೆ, ಕೇಬಲ್‌ ಕಳವು ಮಾಡಿರುವ ಹಣದಿಂದಲೇ ಮದ್ಯ ಸೇವಿಸಿದ್ದಾರೆ ಎಂದು ಆರೋಪಿ ಬಾರ್‌ನಿಂದಲೇ ಮೂವರನ್ನು ಎಳೆದು ತಂದು ಗೋಡೌನ್‌ವೊಂದರಲ್ಲಿ ಕೂಡಿ ಹಾಕಿದ್ದಾರೆ.

ಬಳಿಕ ಬಸುರೆಡ್ಡಿ ಸೇರಿದಂತೆ ಮೂವರು ಆರೋಪಿಗಳು ಕಾರ್ಮಿಕರಿಗೆ ವಿದ್ಯುತ್‌ ಶಾಕ್‌ ನೀಡಿ ಚಿತ್ರ ಹಿಂಸೆ ನೀಡಿದ್ದಾರೆ ಎಂದು ಮಾರತ್‌ಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ. ವಿದ್ಯುತ್‌ ಶಾಕ್‌ನ ತೀವ್ರತೆಗೆ ಬಶೀರ್‌ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನುಳಿದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ವಿಷಯ ತಿಳಿದ ಸ್ಥಳೀಯರು ಬಸುರೆಡ್ಡಿ ಜಮೀನಿನ ಬಳಿ ಬರುತ್ತಿದ್ದಂತೆ ಎಲ್ಲರೂ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಮಾರತ್‌ಹಳ್ಳಿ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangalore news

ಎನ್ ಪಿ ಎಸ್ ನೌಕರರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯಾಧ್ಯಕ್ಷ ಷಡಕ್ಷರಿ ವಿಫಲ: ಒಕ್ಕೂಟ ಆರೋಪ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

The city police commissioner Kamalpant received the public’s plea

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

building

ಮಾಲೀಕರ ಅತಿ ಆಸೆ ಭವಿಷ್ಯದ ಆತಂಕಕೆ ಮೂಲ!

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.