ಕೊಲೆಗೈದ ಆರೋಪಿಗಳಿಗೆ ಗುಂಡೇಟು


Team Udayavani, Jan 21, 2020, 3:04 AM IST

kolegyda

ಬೆಂಗಳೂರು: ಇತ್ತೀಚೆಗಷ್ಟೇ ಅಬ್ದುಲ್‌ ಮತೀನ್‌ ಎಂಬಾತನನ್ನು ಬಾಗಲೂರಿನ ನಿರ್ಜನ ಪ್ರದೇಶದಲ್ಲಿ ಹತ್ಯೆಗೈದು ಪರಾರಿಯಾಗಿದ್ದ ಇಬ್ಬರು ಆರೋಪಿಗಳಿಗೆ ಪೂರ್ವ ವಿಭಾಗದ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.

ಭಾರತೀನಗರ ನಿವಾಸಿಗಳಾದ ಮೊಹಮ್ಮದ್‌ ರಿಜ್ವಾನ್‌(29) ಮತ್ತು ಪರ್ವೇಜ್‌ ಅಹಮದ್‌(28) ಗುಂಡೇಟು ತಿಂದವರು. ಇದೇ ವೇಳೆ ಪ್ರಕರಣದ ಇತರೆ ಆರೋಪಿಗಳಾದ ಮೊಹಮ್ಮದ್‌ ಸಫಾನ್‌, ಸೈಯದ್‌ ಅಲಿ, ಯಾಸೀನ್‌ ಖಾನ್‌, ಶಾಹೀದ್‌ ಎಂಬವರನ್ನು ಬಂಧಿಸಲಾಗಿದೆ.

ಆರೋಪಿಗಳು ಜ.16ರಂದು ಅಬ್ದುಲ್‌ ಮತೀನ್‌ನನ್ನು ಹತ್ಯೆ ಗೈದಿ ದಲ್ಲದೆ, ಅಬೂ ಸೂಫಿಯನ್‌ ಎಂಬಾತನನ್ನು ಕೊಲೆಗೆ ಯತ್ನಿಸಿದ್ದರು. ಹಲ್ಲೆ ವಿಡಿಯೋ ಸಾಮಾ ಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ಪುಲಕೇಶಿನಗರ ಮತ್ತು ಶಿವಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜತೆಗೆ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದರು.

ಆರೋಪಿಗಳ ಕಾಲಿಗೆ ಗುಂಡೇಟು: ಪ್ರಕರಣದ ಬೆನ್ನತ್ತಿದ್ದ ವಿಶೇಷ ತಂಡ ಘಟನಾ ಸ್ಥಳದ ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಮೊಹಮ್ಮದ್‌ ತಂಜೀಲ್‌ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಈತನ ಮಾಹಿತಿ ಆಧರಿಸಿ ರಿಜ್ವಾನ್‌ ಮತ್ತು ಫ‌ರ್ವೇಜ್‌ ಅಡಗಿರುವ ಸ್ಥಳ ಗೊತ್ತಾಗಿತ್ತು. ಬಳಿಕ ಅವರ ಚಲನವಲನಗಳ ಮೇಲೆ ನಿಗಾವಹಿಸಿದಾಗ ಸೋಮವಾರ ನಸುಕಿನ ಮೂರು ಗಂಟೆ ಸುಮಾರಿಗೆ ಇಬ್ಬರು ನಂಬರ್‌ ಪ್ಲೇಟ್‌ ಇಲ್ಲದ ದ್ವಿಚಕ್ರ ವಾಹನದಲ್ಲಿ ಕಲಪಲ್ಲಿ ಸ್ಮಶಾನದ ರಸ್ತೆಯಲ್ಲಿ ಸಂಚರಿಸುತ್ತಿದ್ದರು ಎಂಬುದು ತಿಳಿಯಿತು.

ಕೂಡಲೇ ಭಾರತೀನಗರ ಇನ್‌ಸ್ಪೆಕ್ಟರ್‌ ಜಿ.ಪಿ. ರಮೇಶ್‌ ತಮ್ಮ ತಂಡದೊಂದಿಗೆ ಆರೋಪಿಗಳ ಬಂಧನಕ್ಕೆ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಕಾನ್‌ಸ್ಟೆಬಲ್‌ ಮಜರ್‌ ಬೇಗ್‌ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದ್ದರು. ಆಗ ಆತ್ಮರಕ್ಷಣೆಗಾಗಿ ರಮೇಶ್‌, ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಗಾಯಗೊಂಡವರನ್ನು ವಿಕ್ಟೋ ರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಕರಣದ ಹಿನ್ನೆಲೆ?: ಡಿಸೆಂಬರ್‌ನಲ್ಲಿ ಭಾರತೀನಗರ ನಿವಾಸಿ ಇರ್ಷಾದ್‌ ಎಂಬಾತನನ್ನು ಕೆಲವರು ಗಾಂಜಾ ಸೇವನೆ ವಿಚಾರಕ್ಕೆ ಹತ್ಯೆಗೈದಿದ್ದರು. ಆತನ ಪತ್ನಿ ಜತೆ ಮೊಹಮ್ಮದ್‌ ಮತೀನ್‌ ಅನೈತಿಕ ಸಂಬಂಧ ಹೊಂದಿದ್ದರು. ಜತೆಗೆ ಪತಿಯನ್ನು ಕಳೆದುಕೊಂಡಿದ್ದ ಸಹೋದರಿಯನ್ನು ಅಬೂ ಸೂಫಿಯ ಮತೀನ್‌ ಜತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದ.

ಈ ವಿಚಾರ ತಿಳಿದ ಇರ್ಷಾದ್‌ ಸಹೋದರ ಮೊಹಮ್ಮದ್‌ ರಿಜ್ವಾನ್‌ ತನ್ನ ಸಹಚರರ ಜತೆ ಸೇರಿ ಜ.16ರಂದು ಮತೀನನ್ನು ಶಿವಾಜಿನಗರದಿಂದ ಅಪಹರಿಸಿ ಬಾಗಲೂರಿನ ನಿರ್ಜನ ಪ್ರದೇಶದಲ್ಲಿ ಕೊಲೆಗೈದಿದ್ದರು. ಬಳಿಕ ಪುಲಕೇಶಿನಗರದ ಎಂಎಂ ರಸ್ತೆಯ ಇಂಡಿಯನ್‌ ಚಾಯ್‌ ಪಾಯಿಂಟ್‌ ಮುಂಭಾಗ ಅಬೂ ಸೂಫಿಯ ಕೊಲೆಗೆ ಯತ್ನಿಸಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.