- Friday 13 Dec 2019
ರೌಡಿಶೀಟರ್‌ಗೆ ಬಲಗಾಲಿಗೆ ಗುಂಡೇಟು
Team Udayavani, May 19, 2019, 3:02 AM IST
ಬೆಂಗಳೂರು: ದರೋಡೆ, ಡಕಾಯಿತಿ, ಕೊಲೆ ಯತ್ನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ಗೆ ಅಶೋಕನಗರ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ವಿವೇಕನಗರ ನಿವಾಸಿ ವಿನೋದ್ ಅಲಿಯಾಸ್ ಪಚ್ಚಿ (24) ಗುಂಡೇಟು ತಿಂದ ರೌಡಿಶೀಟರ್.
ಆರೋಪಿಯಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆರೋಪಿಯ ಬಲಗಾಲಿಗೆ ಗುಂಡೇಟು ಬಿದ್ದಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ಅಪರಾಧ ಜಗತ್ತಿಗೆ ಕಾಲಿಟ್ಟಿದ್ದ ವಿನೋದ್, ಬೈಕ್ ಕಳ್ಳತನ ಮಾಡಿದ್ದ ಆರೋಪದ ಮೇಲೆ ಜೈಲು ಸೇರಿದ್ದ. ಜಾಮೀನು ಪಡೆದು ಹೊರಬಂದಿದ್ದ ಆರೋಪಿ, ಮತ್ತೆ ಬೈಕ್ ಕಳವು ಮತ್ತು ಸುಲಿಗೆ ಮಾಡಲು ಆರಂಭಿಸಿದ್ದ.
ಆತನ ವಿರುದ್ಧ ಭಾರತೀನಗರ, ಕೋರಮಂಗಲ, ಅಶೋಕನಗರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದ್ವಿಚಕ್ರ ವಾಹನ ಕಳವು, ದರೋಡೆ, ಡಕಾಯಿತಿ, ಸುಲಿಗೆ ಪ್ರಕರಣಗಳು ದಾಖಲಾಗಿದ್ದು,
ರಸ್ತೆಯಲ್ಲಿ ಒಂಟಿಯಾಗಿ ಓಡಾಡುತ್ತಿದ್ದ ಸಾರ್ವಜನಿಕರನ್ನು ಅಡ್ಡಹಾಕಿ, ಬೆದರಿಸಿ, ಮೊಬೈಲ್ ಹಾಗೂ ನಗದು ಸುಲಿಗೆ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ. ಆತನ ವಿರುದ್ಧ ರೌಡಿಪಟ್ಟಿ ಕೂಡ ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲಗಾಲಿಗೆ ಗುಂಡೇಟು: ಮೇ 14ರಂದು ಬೆಳಗ್ಗೆ 9 ಗಂಟೆಗೆ ಪೇಟಿಂಗ್ ಕೆಲಸ ಮಾಡುತ್ತಿದ್ದ ಎನ್.ಚಾರ್ಲೆ ಎಂಬುವರು ಆನೇಪಾಳ್ಯ ನಿವಾಸಿ ಪಿಂಟೋ ಎಂಬುವರ ಮನೆ ಬಳಿ ನಿಂತಿದ್ದರು. ಅದೇ ವೇಳೆ ಅಲ್ಲೇ ಇದ್ದ ಆರೋಪಿ ಹಾಗೂ ಆತನ ಸಹಚರ ನಂದಾ ಚಾರ್ಲೆ ಅವರನ್ನು ಗುರಾಯಿಸುತ್ತಿದ್ದರು. ಅದನ್ನು ಚಾರ್ಲೆ ಪ್ರಶ್ನಿಸಿದ್ದಾರೆ.
ಅಷ್ಟಕ್ಕೆ ಕುಪಿತಗೊಂಡ ಆರೋಪಿಗಳು ಹಲ್ಲೆಗೆ ಮುಂದಾಗಿದ್ದು, ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ರಕ್ಷಣೆ ಬಂದ ಸ್ಥಳೀಯರ ಮೇಲೆ ಬಿಯರ್ ಬಾಟಲಿ ಹಾಗೂ ರಾಡ್‌ನಿಂದ ಹೊಡೆದಿದ್ದರು. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಮೇ 18ರಂದು ಮುಂಜಾನೆ ಆರು ಗಂಟೆ ಸುಮಾರಿಗೆ ಬನ್ನೇರುಘಟ್ಟ ರಸ್ತೆಯ ಕ್ರೈಸ್ತರ ಸ್ಮಶಾನದಲ್ಲಿ ರೌಡಿ ವಿನೋದ್ ತಲೆಮರೆಸಿಕೊಂಡಿದ್ದ. ಈ ಮಾಹಿತಿ ಪಡೆದು ಸ್ಥಳಕ್ಕೆ ಹೋಗಿದ್ದ ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್ ಶಶಿಧರ್ ಶರಣಾಗುವಂತೆ ಆರೋಪಿಗೆ ಸೂಚಿಸಿದ್ದಾರೆ.
ಅದಕ್ಕೆ ಒಪ್ಪದ ಆರೋಪಿ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಆ ವೇಳೆ ಇನ್‌ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಕಾನೂನು ಜಾರಿ, ಅಂಬೇಡ್ಕರ್ ಸ್ಮಾರ್ಟ್ ಕಾರ್ಡ್ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ...
-
ಬೆಂಗಳೂರು: ನಗರದಲ್ಲಿ ಹೊಸ ವಾಹನ ಖರೀದಿಸುವವರು ಕಡ್ಡಾಯವಾಗಿ ಆ ವಾಹನ ನಿಲುಗಡೆಗೆ ಜಾಗ ಇರುವ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ಇನ್ನು ಈಗಾಗಲೇ ವಾಹನ ಇರುವವರಿಗೆ...
-
ಬೆಂಗಳೂರು: "ಬಯಲು ಬಹಿರ್ದೆಸೆ ಮುಕ್ತ' (ಒಡಿಎಫ್) ಎಂದು ಬೆಂಗಳೂರು ಅಧಿಕೃತವಾಗಿ ಪ್ರಮಾಣೀಕರಿಸಿಕೊಳ್ಳದ ಹಿನ್ನೆಲೆಯಲ್ಲಿ ಈ ಬಾರಿಯೂ ಬಿಬಿಎಂಪಿ ಸ್ವಚ್ಛ ಸರ್ವೇಕ್ಷಣ್ನಲ್ಲಿ...
-
ಬೆಂಗಳೂರು: ರಸ್ತೆಯಲ್ಲಿನ ಕಸ ಗಾಳಿಗೆ ಹಾರಿ ಮನೆಯೊಳಗೆ ಬರುತ್ತದೆ ಅಂತ ಮನೆಗೆ ಬೀಗಹಾಕಿ ಎಲ್ಲರೂ ಹೊರಗೆ ವಾಸವಿದ್ದರೆ ಹೇಗಿರುತ್ತದೆ? ಕೇಳಲಿಕ್ಕೂ ಇದು ಹಾಸ್ಯಾಸ್ಪದ....
-
ಬೆಂಗಳೂರು: ಮಟನ್ ಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರವೇ ಈಗ ಕುರಿ ಮಾಂಸದ ಸಂಚಾರಿ ಮಳಿಗೆಗಳನ್ನು ತೆರೆಯುವ ಮೂಲಕ ಮಾಂಸ ಪ್ರಿಯರಿಗೆ ತಾಜಾ ಮಾಂಸದ ಊಟ ನೀಡಲು...
ಹೊಸ ಸೇರ್ಪಡೆ
-
ಶಶಿಕಾಂತ ಕೆ.ಭಗೋಜಿ ಹುಮನಾಬಾದ: ಧರ್ಮಸಮನ್ವಯ ಖ್ಯಾತಿಗೆ ಪಾತ್ರವಾದ ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ ಮಾಣಿಕನಗರ ಮಾಣಿಕಪ್ರಭು ಸಂಸ್ಥಾನ ಸಕಲ ಕಲೆ-ಕಲಾವಿದರನ್ನು...
-
ಅಳ್ನಾವರ: ಮಕ್ಕಳು ದೇಶದ ಆಸ್ತಿ ಇದ್ದಂಗೆ. ದೇಶದ ಭವಿಷ್ಯ ನಿರ್ಮಿಸುವ ಗುರುತರ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅಂತಹ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸುವುದು ನಮ್ಮೆಲ್ಲರ...
-
ದಾವಣಗೆರೆ: ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಡಿ.16 ರಂದು ದಾವಣಗೆರೆಗೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದ್ದಾರೆ. ನಳೀನ್...
-
ದಾವಣಗೆರೆ: ಮನುಷ್ಯ ಉತ್ಪಾದಿಸುವ ತಂಬಾಕು ಇಂದು ಆತನನ್ನೇ ಬಲಿ ಪಡೆಯುತ್ತಿದೆ. ತಂಬಾಕನ್ನು ವಿವಿಧ ರೀತಿಯಲ್ಲಿ ಬಳಸಿಕೊಳ್ಳುವುದರ ಮೂಲಕ ಮನುಷ್ಯ ಅದರ ದಾಸನಾಗುತ್ತಿದ್ದಾನೆ...
-
ಹುಬ್ಬಳ್ಳಿ: ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗುತ್ತಿದ್ದಂತೆ ಆಂತರಿಕ ಭದ್ರತಾ ಪಡೆ (ಐಎಸ್ಡಿ) ಹಾಗೂ ಪೊಲೀಸ್ ಇಲಾಖೆಯಿಂದ ಹು-ಧಾ ಅವಳಿ ನಗರ...