ಬಿಯರ್‌ ಬಾಟಲ್‌ನಿಂದ ಹೊಡೆದು ಕೊಲೆ

Team Udayavani, May 2, 2019, 3:00 AM IST

murder

ಬೆಂಗಳೂರು: ಕೆಲ ದಿನಗಳ ಹಿಂದೆ ತಮ್ಮನ್ನು ಗುರಾಯಿಸಿದ್ದ ಎಂಬ ಕಾರಣಕ್ಕೆ ಗುಂಪೊಂದು, ಯುವಕನ ತಲೆಗೆ ಬಿಯರ್‌ ಬಾಟಲ್‌ನಿಂದ ಹೊಡೆದು ಕೊಂದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜೆ.ಪಿ.ನಗರ ನಿವಾಸಿ ಮಂಜುನಾಥ್‌ (21) ಕೊಲೆಯಾದ ಯುವಕ. ಏ.25ರಂದು ರಾತ್ರಿ ವಿನಾಯಕ ಬ್ಯಾಂಕ್‌ ಲೇಔಟ್‌ನಲ್ಲಿ ದುಷ್ಕರ್ಮಿಗಳ ಗುಂಪು ಮಂಜುನಾಥ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದು, ಏ.27ರಂದು ಚಿಕಿತ್ಸೆ ಫ‌ಲಿಸದೆ ಮಂಜುನಾಥ್‌ ಮೃತಪಟ್ಟಿದ್ದಾರೆ.

ದುಷ್ಕರ್ಮಿಗಳ ತಂಡ ಮಂಜುನಾಥ್‌ ಮೇಲೆ ಹಲ್ಲೆ ನಡೆಸಿದ್ದನ್ನು ಆತನ ಸ್ನೇಹಿತ ಜಗನ್ನಾಥ್‌ ನೋಡಿ ಭಯಗೊಂಡಿದ್ದಾನೆ. ಗಲಾಟೆ ಬಗ್ಗೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದ ಆತ ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲಿ ಭಯದಿಂಧ ಮನೆಗೆ ಹೋಗಿದ್ದ.

ಈ ಕುರಿತು ಜಗನ್ನಾಥ್‌ ನೀಡಿರುವ ದೂರು ಆಧರಿಸಿ ಮೈಕೋ ಲೇಔಟ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು,ಆರೋಪಿಗಳಾದ ನಂದ, ಅರ್ಜುನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಮೃತ ಮಂಜುನಾಥ್‌ ಹಾಗೂ ಜಗನ್ನಾಥ್‌ ಏ.25ರಂದು ರಾತ್ರಿ 7 ಗಂಟೆ ಸುಮಾರಿಗೆ ವಿಜಯ ಬ್ಯಾಂಕ್‌ ಲೇಔಟ್‌ನಲ್ಲಿರುವ ಬಾರ್‌ಗೆ ಹೋಗಿ, ಮದ್ಯ ಖರೀದಿಸಿದ್ದು, ಮದ್ಯ ಸೇವಿಸಲು ಸಮೀಪದ, ನಿರ್ಮಾಣ ಹಂತದ ಕಟ್ಟಡಕ್ಕೆ ತೆರಳಿದ್ದಾರೆ. ಇದೇ ವೇಳೆ ಕಟ್ಟಡದ ಮೊದಲನೇ ಮಹಡಿಯಲ್ಲಿ ನಾಲ್ವರು ಯುವಕರು ಮದ್ಯ ಸೇವಿಸುತ್ತಿದ್ದರು.

ಮಂಜುನಾಥ್‌ನನ್ನು ನೋಡಿದ ಯುವಕರು ಮೇಲೆ ಬಾ ಎಂದು ಕರೆದಿದ್ದಾರೆ. ಅಲ್ಲಿಗೆ ಹೋದ ಬಳಿಕ, 15 ದಿನಗಳ ಹಿಂದೆ ಮದ್ಯ ಸೇವಿಸುವಾಗ ಗುರಾಯಿಸಿದ್ದು ಯಾಕೆ? ಎಂದು ಏಕಾಏಕಿ ಒಬ್ಬ ಅತನ ಮುಖಕ್ಕೆ ನಾಲ್ಕೈದು ಬಾರಿ ಹೊಡೆದಿದ್ದಾನೆ.

ಈ ವೇಳೆ ಮತ್ತೂಬ್ಬ, ಬಿಯರ್‌ ಬಾಟಲ್‌ನಿಂದ ಮುಖ ಹಾಗೂ ತಲೆಗೆ ಹೊಡೆದಿದ್ದಾನೆ. ಕ್ಷಮಿಸಿ ಎಂದು ಕೇಳಿಕೊಂಡರೂ ಬಿಡದೆ ಮನಬಂದಂತೆ ಥಳಿಸಿದ್ದಾರೆ. ರಕ್ಷಣೆಗೆ ಹೋದ ತನ್ನ ಮೇಲೂ ಹಲ್ಲೆ ನಡೆಸಿದರು ಎಂದು ಜಗನ್ನಾಥ್‌ ದೂರಿನಲ್ಲಿ ತಿಳಿಸಿರುವುದಾಗಿ ಎಂದು ಹಿರಿಯ ಅಧಿಕಾರಿ ವಿವರಿಸಿದರು.

ಟಾಪ್ ನ್ಯೂಸ್

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Shobha

Lokasabha Poll: ಎಸ್‌ಟಿಎಸ್‌ ಕ್ಷೇತ್ರದಲ್ಲಿ ಲೀಡ್‌ ಕೊಟ್ಟು ಪಾಠ ಕಲಿಸಿದ್ದೀರಿ- ಶೋಭಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.