ಸಿದ್ದರಾಮಯ್ಯ ಸಲಹೆ ಪಡೆಯಲು ಸಿಎಂಗೆ ಸಲಹೆ
Team Udayavani, May 26, 2018, 7:10 AM IST
ಬೆಂಗಳೂರು: ಬಜೆಟ್ ಮಂಡನೆ ಸೇರಿದಂತೆ ಸರ್ಕಾರದ ಆರ್ಥಿಕ ವ್ಯವಹಾರಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಹುಮತ ಸಾಬೀತುಪಡಿಸಿದ ನಂತರ ಮಾತನಾಡಿದ ಸ್ಪೀಕರ್ ರಮೇಶ್
ಕುಮಾರ್, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ದೀರ್ಘಕಾಲ ಹಣಕಾಸು ಖಾತೆಯನ್ನು ನಿರ್ವಹಿಸಿದವರು. ಯಾವತ್ತೂ ವಿತ್ತೀಯ ಹೊಣೆಗಾರಿಕೆ ಕಾಯ್ದೆ ಮತ್ತು ಆರ್ಥಿಕ ಶಿಸ್ತು ಉಲ್ಲಂಘನೆಯಾಗದಂತೆ ನೋಡಿಕೊಂಡಿದ್ದರು.ಅವರು ಹಣಕಾಸು ಖಾತೆ ನಿರ್ವಹಿಸಿದ ಸಂದರ್ಭದಲ್ಲಿ ಯಾವತ್ತೂ ಸರ್ಕಾರದ ಒಂದು ಚೆಕ್ ಕೂಡ ತಿರಸ್ಕೃತಗೊಂಡಿರಲಿಲ್ಲ. ಕಲ್ಯಾಣ ಕಾರ್ಯಕ್ರಮಗಳ ಜತೆ
ಅಭಿವೃದ್ಧಿ ಕಾರ್ಯಗಳೂ ಯಶಸ್ವಿಯಾಗುವಂತೆ ಕೆಲಸ ಮಾಡಿದ್ದರು. ಆದ್ದರಿಂದ ಆರ್ಥಿಕ ನಿರ್ವಹಣೆ ವೇಳೆ ಸಿದ್ದರಾಮಯ್ಯ ಅವರ ಅನುಭವಗಳ ಸಲಹೆ ಪಡೆಯಿರಿ ಎಂದು ರಾಜ್ಯದ ಒಬ್ಬ ಪ್ರಜೆಯಾಗಿ ನಿಮಗೆ ಸಲಹೆ ನೀಡುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’