ಅಪಪ್ರಚಾರ ಮಾಡಿ ಸೋಲಿಸಿಯೇ ಬಿಟ್ಟರು​​​​​​​

Team Udayavani, Aug 20, 2018, 6:00 AM IST

180819kpn81.jpg

ಬೆಂಗಳೂರು: ನಾನು ಜಾತಿಗಳನ್ನು ಒಡೆಯುತ್ತೇನೆ ಎಂದು ನಿರಂತರ ಅಪಪ್ರಚಾರ ಮಾಡಿ, ಕೊನೆಗೆ ಸೋಲಿಸಿಯೇ ಬಿಟ್ಟರು. ಸಾಮಾಜಿಕ ನ್ಯಾಯದಿಂದ ವಂಚಿತರಾದವರೂ ಚುನಾವಣೆಯಲ್ಲಿ ನಮ್ಮ ಪರವಾಗಿ ನಿಲ್ಲಲಿಲ್ಲ ಮತ್ತು ದನಿ ಎತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಮ್ಮ ಸಮುದಾಯದ ಎದುರು ಅಲವತ್ತುಕೊಂಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಭಾನುವಾರ ಕರ್ನಾಟಕ ಪ್ರದೇಶ ಕುರುಬರ ಸಂಘ ಹಮ್ಮಿಕೊಂಡಿದ್ದ “ಪ್ರತಿಭಾ ಪುರಸ್ಕಾರ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ನಾಲ್ಕು ಕೋಟಿ ಜನರಿಗೆ ಅನ್ನಭಾಗ್ಯ, ಲಕ್ಷಾಂತರ ವಿದ್ಯಾರ್ಥಿಗಳಿಗೆ ವಾರದ ಐದು ದಿನಗಳು ಕ್ಷೀರಭಾಗ್ಯ, ಕೃಷಿಭಾಗ್ಯದಡಿ ಕೃಷಿ ಹೊಂಡಗಳ ನಿರ್ಮಾಣ, ಎಲ್ಲ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಸೇರಿದಂತೆ ಅನೇಕ ಯೋಜನೆಗಳನ್ನು ನನ್ನ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ್ದೇನೆ. ಇವೆಲ್ಲವೂ ಎಲ್ಲ ಜಾತಿಗಳಿಗೂ ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ಸಾಮಾಜಿಕನ್ಯಾಯದಡಿ ಇಷ್ಟೆಲ್ಲಾ ಯೋಜನೆಗಳನ್ನು ಘೋಷಿದ್ದರೂ ಆ ಜಾತಿ ವಿರೋಧಿ, ಈ ಜಾತಿ ವಿರೋಧಿಯಾಗಿ ಜಾತಿಗಳನ್ನು ಒಡೆಯುತ್ತೇನೆ ಎಂದು ಅಪಪ್ರಚಾರ ಮಾಡಿ ಸೋಲಿಸಿಬಿಟ್ಟರು. ಸಾಮಾಜಿಕನ್ಯಾಯದಿಂದ ಈವರೆಗೆ ವಂಚಿತರಾದವರು ಚುನಾವಣೆಯಲ್ಲಿ ಟೀಕಾಕಾರರಿಗೆ ತಿರುಗೇಟು ನೀಡಬೇಕಾಗಿತ್ತು. ಅವರು ಕೂಡ ಮೌನ ವಹಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಮಾಡಿದ್ದನ್ನು ಹೇಳಿಕೊಳ್ಳಲು ಹೋಗುವುದಿಲ್ಲ. ಆದರೆ, ಕೆಲವರು ತಾವು ಏನೂ ಮಾಡದಿದ್ದರೂ ಎಲ್ಲವನ್ನೂ ಮಾಡಿದೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಅವರನ್ನು ತಾವೇ ಕಾಂಗ್ರೆಸ್‌ಗೆ ತಂದಿದ್ದು ಎಂದು ಹೇಳಿಕೊಂಡು ಓಡಾಡುತ್ತಾರೆ. ಆದರೆ, ವಾಸ್ತವವಾಗಿ ಅಹಮ್ಮದ್‌ ಪಟೇಲ್‌ ನನ್ನನ್ನು ಕಾಂಗ್ರೆಸ್‌ಗೆ ಕರೆತಂದರು ಎಂದು ಪರೋಕ್ಷವಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ವಿರುದ್ಧ ವಾಗ್ಧಾಳಿ ನಡೆಸಿದರು. ಅಲ್ಲದೆ, ಈ ಬಗ್ಗೆ ಸಮಯ ಸಿಕ್ಕಾಗ ಎದುರಲ್ಲೇ ಹೇಳುತ್ತೇನೆ. ನಾನು ಯಾರಿಗೂ ಹೆದರುವ ವ್ಯಕ್ತಿ ಅಲ್ಲ ಎಂದು ಗುಡುಗಿದರು.

ಬ್ರಿಗೇಡ್‌ ಎಲ್ಲಿ ಹೋಯ್ತು?:
ಸಮುದಾಯದಲ್ಲಿ ಬಿರುಕು ಮೂಡುತ್ತಿದೆ. ಶೇ. 70ರಷ್ಟು ಜನ ಒಗ್ಗಟ್ಟಾಗಿದ್ದಾರೆ. ಉಳಿದವರು ಸ್ವಲ್ಪ ಆ ಕಡೆ ಈ ಕಡೆ ಎನ್ನುತ್ತಾರೆ. ಒಗ್ಗಟ್ಟಿನ ವಿಚಾರದಲ್ಲಿ ಬೇರೆಯವರನ್ನು ನೋಡಿ ಕಲಿಯಿರಿ ಎಂದು ಕಿವಿಮಾತು ಹೇಳಿದ ಅವರು, ಚುನಾವಣೆ ಸಂದರ್ಭದಲ್ಲಿ ರಾಯಣ್ಣ ಬ್ರಿಗೇಡ್‌ ಚಾಲ್ತಿಯಲ್ಲಿತ್ತು. ಈಗ ಅದು ಎಲ್ಲಿ ಹೋಯಿತು? ಕೆ.ಎಸ್‌.ಈಶ್ವರಪ್ಪ ಅಹಿಂದದ ಮೊದಲ ಸಭೆಗೆ ಬಂದರು. ಆದರೆ, ಹಣ ಸಂಗ್ರಹಿಸುವ ಸಮಯಕ್ಕೆ ಕೈಕೊಟ್ಟರು. ಈ ವಿಷಯಗಳ ಬಗ್ಗೆ ವಿಶಾಲವಾಗಿ ಯೋಚಿಸಿ ಎಂದು ಸೂಚ್ಯವಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಆರ್‌.ಶಂಕರ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಯಮನಪ್ಪ ಸಣ್ಣಕ್ಕಿ, ಪ್ರಧಾನ ಕಾರ್ಯದರ್ಶಿ ಕೆ.ಎಂ.ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌
“ನೀವು ಘೋಷಿಸಿದ್ದ ಉಚಿತ ಬಸ್‌ ಪಾಸ್‌ ಕೊಡಲೇ ಇಲ್ಲ ಸ್ವಾಮಿ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸಮುದಾಯದ ವ್ಯಕ್ತಿಯೊಬ್ಬ ದೂರು ಸಲ್ಲಿಸಿದ ಪ್ರಸಂಗ ನಡೆಯಿತು.

ಪ್ರತಿಭಾ ಪುರಸ್ಕಾರದಲ್ಲಿ ಸಿದ್ದರಾಮಯ್ಯ ಅವರು, “ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಘೋಷಿಸಿದ್ದೇನೆ’ ಎಂದರು. ಆಗ, ವೇದಿಕೆ ಮುಂಭಾಗದಲ್ಲೇ ಇದ್ದ ವ್ಯಕ್ತಿಯೊಬ್ಬ, “ಬಸ್‌ ಪಾಸ್‌ ಇನ್ನೂ ಕೊಟ್ಟಿಲ್ಲ ಸ್ವಾಮಿ’ ಎಂದು ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಸಮನ್ವಯ ಸಮಿತಿ ಸಭೆಯಲ್ಲಿ ಹೇಳುತ್ತೇನೆ. ಕೊಡ್ತಾರೆ ಸುಮ್ಮನೆ ಕುಳಿತುಕೊ’ ಎಂದು ಗದರಿದರು.

“ನಾನು ಹಂಡ್ರೆಡ್‌ ಪರ್ಸೆಂಟ್‌ ಹಿಂದೂ’
ನಾನು ಹಂಡ್ರೆಡ್‌ ಪರ್ಸೆಂಟ್‌ ಹಿಂದೂ. ನಾನ್ಯಾಕೆ ಹಿಂದೂ ವಿರೋಧಿ ಆಗಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ನಾನು ಹಿಂದೂ ವಿರೋಧಿ ಎಂದು ಪದೇ ಪದೇ ಕೆಲವರು ಹೇಳುತ್ತಾರೆ. ಆದರೆ, ನಾನ್ಯಾಕೆ ಹಿಂದೂಗಳನ್ನು ವಿರೋಧಿಸಲಿ? ನಾನೂ ಅಪ್ಪಟ ಹಿಂದೂ. ಆದರೆ, ಎಲ್ಲ ಜಾತಿಯವರನ್ನೂ ಪ್ರೀತಿಸುತ್ತೇನೆ ಎಂದರು.

ಡಾಕ್ಟರ್‌ ಆಗ್ಬೇಕು ಅನ್ಕೊಂಡಿದ್ದೆ….
ನಾನೂ ಡಾಕ್ಟರ್‌ ಆಗುವ ಕನಸು ಕಂಡಿದ್ದೆ. ಈ ನಿಟ್ಟಿನಲ್ಲಿ ಎರಡು ಬಾರಿ ಪ್ರಯತ್ನವನ್ನೂ ಮಾಡಿದ್ದೆ. ಆದರೆ, ಆಗಲಿಲ್ಲ ಎಂದು ಸಿದ್ದರಾಮಯ್ಯ ಮೆಲುಕುಹಾಕಿದರು.

ಪಿಯುಸಿ ಮತ್ತು ಬಿಎಸ್ಸಿಯಲ್ಲಿ ಎರಡೂ ಸಲ ವೈದ್ಯನಾಗಬೇಕು ಎಂಬ ಕನಸು ಕಂಡಿದ್ದೆ, ಸಾಧ್ಯವಾಗಲಿಲ್ಲ. ಡಾಕ್ಟರ್‌ ಆಗಿದ್ದರೆ, ನಾನು ರಾಜಕೀಯಕ್ಕೆ ಬರುತ್ತಿರಲಿಲ್ಲ ಹಾಗೂ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಈಗಿನ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲೂ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆಯುತ್ತಾರೆ. ಆದರೆ, ನಾನು ಲೆಕ್ಕದಲ್ಲಿ ಪಕ್ಕಾ ಇದ್ದೆ. ಹಾಗಾಗಿ, ಗಣಿತದಲ್ಲಿ ಮಾತ್ರ ಹೆಚ್ಚು ಅಂಕಗಳು 90 ದಾಟುತ್ತಿತ್ತು. ಉಳಿದವು 50-60 ಅಂಕ ದಾಟುತ್ತಿರಲಿಲ್ಲ ಎಂದು ಸ್ಮರಿಸಿದರು.

ಟಾಪ್ ನ್ಯೂಸ್

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

T20 World Cup,ಭಾರತ-ಅಫ್ಘಾನಿಸ್ಥಾನ ಕ್ರಿಕೆಟ್‌ ಕದನ

T20 World Cup,ಭಾರತ-ಅಫ್ಘಾನಿಸ್ಥಾನ ಕ್ರಿಕೆಟ್‌ ಕದನ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

bjpಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ

ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ

ಸರ್ಕಾರಿ ಬಸ್‌ ಪ್ರಯಾಣ ದರ ಹೆಚ್ಚಳ: ಸಾರಿಗೆ ಸಚಿವರ ಸುಳಿವು

Government ಬಸ್‌ ಪ್ರಯಾಣ ದರ ಹೆಚ್ಚಳ: ಸಾರಿಗೆ ಸಚಿವರ ಸುಳಿವು

bjBJP ತೈಲದರ ಇಳಿಕೆಗೆ ಪಟ್ಟು: ಇಂದು ರಸ್ತೆ ತಡೆ

BJP ತೈಲದರ ಇಳಿಕೆಗೆ ಪಟ್ಟು: ಇಂದು ರಸ್ತೆ ತಡೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.