ಮುಖ್ಯಮಂತ್ರಿ ಕ್ಷಮೆ ಯಾಚಿಸದಿದ್ರೆ ಮಾನನಷ್ಟ ಮೊಕದ್ದಮೆ
Team Udayavani, Jul 5, 2017, 3:00 AM IST
ಬೆಂಗಳೂರು: ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದಿದ್ದರೆ ಅಮಿತ್ ಶಾ ಜೈಲಿನಲ್ಲಿರುತ್ತಿದ್ದರು’ ಎಂದು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳಲ್ಲಿ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಪಂ.ದೀನ್ದಯಾಳ್ ಉಪಾಧ್ಯಾಯ ಅವರ ಅವರ ಜನ್ಮ ಶತಾಬ್ದಿ ಪ್ರಯುಕ್ತ ಬಿಜೆಪಿ ಆಯೋಜಿಸಿರುವ ವಿಸ್ತಾರಕ ಅಭಿಯಾನದಡಿ ಮಂಗಳವಾರ ಸಂಪಂಗಿರಾಮನಗರದಲ್ಲಿ ಮನೆ ಮನೆ ಸಂಪರ್ಕ ನಡೆಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಅಮಿತ್ ಶಾ ಕುರಿತಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಗರಂ ಆದ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಮಿತ್ ಶಾ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ 3 ದಿನಗಳಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳದಿದ್ದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ಜತೆಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ