ಬಜೆಟ್‌ ಕಗ್ಗಂಟು: ಸಿದ್ದು-ಎಚ್‌ಡಿಕೆ ಪ್ರತಿಷ್ಠೆ 


Team Udayavani, Jun 26, 2018, 6:00 AM IST

cm-hd-sidda.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್‌ ಮಂಡನೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದ್ದು, ಇಂದು ಒಂದು ರೀತಿಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಲ್ಲಿ ಬಿರುಕು ಮೂಡಿಸುವ ಮಟ್ಟಕ್ಕೂ ತಲುಪುವ ಸಾಧ್ಯತೆಗಳು ಕಂಡು ಬರುತ್ತಿವೆ.

ಸರ್ಕಾರದಲ್ಲಿ ಕಾಂಗ್ರೆಸ್‌ ಸಹ ಭಾಗಿಯಾಗಿರುವುದರಿಂದ ಹೊಸ ಬಜೆಟ್‌ ಮಂಡಿಸುವ ಅವಶ್ಯಕತೆಯಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ತನ್ನ ನಿಲುವುನಿಂದ ಒಂದಿಷ್ಟೂ ಅಲುಗಾಡುತ್ತಿಲ್ಲ. ಬಜೆಟ್‌ ಮಂಡಿಸುವ ನಿರ್ಧಾರದಿಂದಲೂ ಎಚ್‌.ಡಿ.ಕುಮಾರಸ್ವಾಮಿ ಹಿಂದೆ ಸರಿಯುತ್ತಿಲ್ಲ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಜುಲೈ 5 ಕ್ಕೆ ಬಜೆಟ್‌ ಮಂಡಿಸುವುದು ಖಚಿತ ಎಂದು ಹೇಳುವ ಮೂಲಕ ಪರೋಕ್ಷವಾಗಿ ಪುತ್ರನಿಗೆ ಧೈರ್ಯ ತುಂಬಿದ್ದಾರೆ.

ಆದರೆ, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ನಿಲುವಿಗೆ ನಿಧಾನವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಸಚಿವ ರಮೇಶ್‌ಜಾರಕಿಹೊಳಿ, ಶಾಸಕ ಡಾ. ಸುಧಾಕರ್‌ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಬೀಸಲು ಪ್ರಾರಂಭಿಸಿರುವುದು ಮತ್ತಷ್ಟು ಶಾಸಕರು ಹೌದು ಎಂಬಂತೆ ತಲೆಯಾಡಿಸುತ್ತಿರುವುದು ಹೈಕಮಾಂಡ್‌ಗೆ ತಲೆಕಡಲು ಪ್ರಾರಂಭವಾಗಿದೆ.

ಬಜೆಟ್‌ ಮಂಡನೆ ಮಾಡಬೇಕಾ? ಬೇಡವಾ ಎಂಬ ವಿಚಾರವೇ ಇದೀಗ ಕಾಂಗ್ರೆಸ್‌ ವಲಯದಲ್ಲಿ ದೊಡ್ಡ ವಿಷಯವಾಗಿ ಚರ್ಚೆಯಾಗುತ್ತಿದೆ. ಬಜೆಟ್‌ ವಿಚಾರದಲ್ಲಿ ತಮ್ಮ ಮಾತೇ ನಡೆಯಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಹಠಕ್ಕೆ ಬಿದ್ದಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದರೆ ಬೇರೆಯದೇ ಸ್ವರೂಪ ಪಡೆಯುವ ಸಾಧ್ಯತೆಗಳು ಇಲ್ಲದಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಎರಡನೇ ಹಂತದ ಸಂಪುಟ ವಿಸ್ತರಣೆ ಕಗ್ಗಂಟು, ಸಚಿವಾಕಾಂಕ್ಷಿಗಳ ಅಸಮಾಧಾನ ತಣಿಸಲು ನಿಗಮ-ಮಂಡಳಿಗಳ ನೇಮಕ ತಲೆಬಿಸಿಯಲ್ಲಿದ್ದ ಕಾಂಗ್ರೆಸ್‌ಗೆ ಇದೀಗ ಸಿದ್ದರಾಮಯ್ಯ ಅವರ ಅಸಮಾಧಾನ ಮತ್ತೂಂದು ತಲೆನೋವಾಗಿ ಪರಿಣಮಿಸಿ ಬಿಸಿತುಪ್ಪದಂತಾಗಿದೆ. ಅಂತಿಮವಾಗಿ ಬಜೆಟ್‌ ಮಂಡನೆ ವಿಚಾರದಲ್ಲಿ ಯಾರ ಕೈ ಮೇಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಕಾರ್ಯತಂತ್ರ
ಸಚಿವ ಸಂಪುಟ ವಿಸ್ತರಣೆ ನಂತರ ಉಂಟಾಗಿದ್ದ ಅಸಮಾಧಾನ ಸ್ಫೋಟ ಸಂದರ್ಭದಲ್ಲೇ  ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಹೋಗಿದ್ದು, ಆ ನಂತರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಹನ್ನೆರಡು ದಿನ ಯಾವ ನಾಯಕರ ಸಂಪರ್ಕಕ್ಕೂ ಸಿಗದಿರುವುದರ ಹಿಂದೆ ಬೇರೆಯೇ “ಲೆಕ್ಕಾಚಾರ’ ಇದೆ ಎಂದು ಹೇಳಲಾಗಿದೆ.

ಕಳೆದೆರಡು ದಿನಗಳಿಂದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಭೇಟಿ ಸಂದರ್ಭದಲ್ಲಿ ನಡೆದ ಮಾತುಕತೆಯ ವೀಡಿಯೋ ದೃಶ್ಯಾವಳಿಗಳು ಇದೀಗ ಬೇರೋನೋ ನಡೆಯುತ್ತಿದೆ ಎಂಬ ಅನುಮಾನ ಮೂಡಲು ಕಾರಣವಾಗಿದೆ.

ಹನ್ನೆರಡು ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯ ಹಾಗೂ ಮುಂದಿನ ಸ್ಥಿತಿಗತಿಗಳ ಬಗ್ಗೆ  ಒಂದಷ್ಟು ಲೆಕ್ಕಾಚಾರ ಮಾಡಿ ಕಾರ್ಯತಂತ್ರ ರೂಪಿಸಿ “ಅಖಾಡ’ಕ್ಕೆ ಇಳಿಯುವ ಮುನ್ಸೂಚನೆ ನೀಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ವಾಸನೆ ಬಡಿಯುತ್ತಿದ್ದಂತೆ ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರ ದಂಡು ಸಿದ್ದರಾಮಯ್ಯ ಭೇಟಿ ಕಾರ್ಯ ಶುರು ಮಾಡಿದ್ದಾರೆ.

ಮತ್ತೂಂದು ಮೂಲಗಳ ಪ್ರಕಾರ, ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ  ರಾಹುಲ್‌ಗಾಂಧಿ ರಾಜ್ಯದಲ್ಲಿನ ಬೆಳವಣಿಗೆ, ಸಿದ್ದರಾಮಯ್ಯ ಅವರ ನಡೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದಿನ ವಾರದಲ್ಲಿ ಒಂದು ಸಂದೇಶ ರವಾನೆಯಾಗಿ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.

ರಾಹುಲ್‌- ಸಿದ್ದು ಭೇಟಿ ಸಾಧ್ಯತೆ
ಇತ್ತೀಚೆಗೆ ಸಚಿವ ಕೆ.ಜೆ.ಜಾರ್ಜ್‌ ಅವರು ದೆಹಲಿಯಲ್ಲಿ ರಾಹುಲ್‌ಗಾಂಧಿ ಭೇಟಿ ಮಾಡಿದ್ದ ಸಂದರ್ಭದಲ್ಲಿಯೂ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವಂತಿಲ್ಲ. ಕಾಂಗ್ರೆಸ್‌ 80 ಸ್ಥಾನ ಗಳಿಸಲು , ಶೇ.38 ರಷ್ಟು ಮತ ಪಡೆಯಲು ಸಿದ್ದರಾಮಯ್ಯ ಅವರ ಪರಿಶ್ರಮವಿದೆ. ಮುಸ್ಲಿಂ ಸಮುದಾಯದ ಮತ ಕ್ರೂಢೀಕರಣಕ್ಕೆ ಸಿದ್ದರಾಮಯ್ಯ ಸಾಕಷ್ಟು ಕಾರ್ಯತಂತ್ರ ರೂಪಿಸಿದ್ದರು. ಅದು ಯಶಸ್ವಿಯೂ ಆಯಿತು. ಹೀಗಾಗಿ, ಸಮ್ಮಿಶ್ರ ಸರ್ಕಾರದ ಪ್ರಮುಖ ತೀರ್ಮಾನಗಳಲ್ಲಿ ಸಿದ್ದರಾಮಯ್ಯ ಅವರ ಸಲಹೆ-ಸೂಚನೆ ಪಡೆಯುವುದು ಸೂಕ್ತ. ಒಮ್ಮೆ ನೀವು ಸಹ ದೆಹಲಿಗೆ ಕರೆಸಿಕೊಂಡು ಮಾತನಾಡಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಸಿದ್ದರಾಮಯ್ಯ ಬಂದ ನಂತರ ಬಹುಶಃ ರಾಹುಲ್‌ಗಾಂಧಿಯಿಂದ ಬುಲಾವ್‌ ಬರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಟಾಪ್ ನ್ಯೂಸ್

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.