ವಂಚಕ ಐಎಂಎ ಚರಾಸ್ತಿ ವಶಕ್ಕೆ ಪಡೆದ ಎಸ್‌ಐಟಿ

Team Udayavani, Aug 27, 2019, 3:06 AM IST

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ಮುಂದುವರಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಂಚಕ ಸಂಸ್ಥೆಗೆ ಸೇರಿದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚರಾಸ್ತಿ ಮತ್ತು 2.20 ಕೋಟಿ ರೂ. ನಗದು ವಶಕ್ಕೆ ಪಡೆದಿದೆ.

ಸಕ್ಷಮ ಪ್ರಾಧಿಕಾರ ಪ್ರಾದೇಶಿಕ ಆಯುಕ್ತರ ನೇತೃತ್ವದ ತಂಡದ ಜತೆ ಜಂಟಿ ಕಾರ್ಯಾಚರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು, ಐಎಂಎ ಸಂಸ್ಥೆಯ ಜಯನಗರ, ಯಶವಂತಪುರ, ಶಿವಾಜಿನಗರ, ತಿಲಕನಗರ ಶಾಖೆಗಳು ಮತ್ತು ಬನ್ನೇರುಘಟ್ಟ ರಸ್ತೆಯಲ್ಲಿರುವ ಐಎಂಎ ಪಬ್ಲಿಷರ್ಸ್‌ ಪ್ರೈವೆಟ್‌ ಲಿಮಿಡೆಟ್‌ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಪೀಠೊಪಕರಣ ಸೇರಿದಂತೆ ಚರಾಸ್ಥಿಗಳನ್ನು ಪಟ್ಟಿಮಾಡಿ ಮಹಜರು ಮಾಡಿ, ಹರಾಜಿಗೆ ಕ್ರಮ ಕೈಗೊಳ್ಳಲಾಗುವುದು. ಅವುಗಳ ಒಟ್ಟು ಮೌಲ್ಯ 2.15 ಕೋಟಿ ರೂ. ಎಂದು ಅಂದಾಜಿಸಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.

2.20 ಕೋಟಿ ರೂ. ನಗದು ಜಪ್ತಿ: ಆರೋಪಿ ಮನ್ಸೂರ್‌ ಖಾನ್‌ಜತೆ ಸ್ಕೈವಾಕ್‌ ನಿರ್ಮಾಣ ವ್ಯವಹಾರ ಹೊಂದಿದ್ದ ಅಬ್ದುಲ್‌ ಸಾಬೀರ್‌ ಎಂಬಾತ, ಖಾನ್‌ನಿಂದ 2 ಕೋಟಿ ರೂ. ಪಡೆದಿದ್ದ. ಈ ಹಿನ್ನೆಲೆಯಲ್ಲಿ ಅಬ್ದುಲ್‌ ಸಾಬೀರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡು, ಡಿಡಿ ಮೂಲಕ 2 ಕೋಟಿ ರೂ. ಹಿಂದಿರುಗಿಸಿದ್ದಾರೆ. ಅಲ್ಲದೆ, ಆರೋಪಿ ಮನ್ಸೂರ್‌ ಖಾನ್‌, ನವನೀತ್‌ ಮೋಟಾರ್ಸ್‌ನಲ್ಲಿ ಬಿಎಂಡಬ್ಲೂ ಕಾರು ಖರೀದಿಸಲು ಮುಂಗಡವಾಗಿ ನೀಡಿದ್ದ 10 ಲಕ್ಷ ರೂ.ಗಳನ್ನೂ ಡಿಡಿ ಮೂಲಕ ಪಡೆದುಕೊಳ್ಳಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.

ಮನ್ಸೂರ್‌ ಖಾನ್‌ಗೆ ಸ್ಟಂಟ್‌ ಅಳವಡಿಕೆ: ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ಗೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್‌ ಅಳವಡಿಸಿ ಮತ್ತೆ ಜೈಲಿಗೆ ಕಳಿಸಲಾಗಿದೆ. ಮನ್ಸೂರ್‌ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದ ಕಾಲವಕಾಶ ಮುಗಿಯುತ್ತಿದ್ದಂತೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮಧ್ಯೆ ಕಾಯಿಲೆ ಹೆಚ್ಚಾದ ಕಾರಣ ವೈದ್ಯರ ಸೂಚನೆ ಮೇರೆಗೆ ಸ್ಟಂಟ್‌ ಅಳವಡಿಸಲಾಗಿದೆ. ಎರಡು ದಿನ ಮನ್ಸೂರ್‌ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದಿದ್ದು, ಭಾನುವಾರ ಆಸ್ಪತ್ರೆಯಿಂದ ಜೈಲಿಗೆ ರವಾನಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಧಿಕಾರಿಗಳು, ಮನ್ಸೂರ್‌ ಚಲನವಲನದ ಮೇಲೆ ನಿಗಾ ವಹಿಸಿದ್ದಾರೆ. ಈ ನಡುವೆ ಸಿಬಿಐ ಅಧಿಕಾರಿಗಳು ಪ್ರಕರಣದ ಕಡತಗಳನ್ನು ಸದ್ಯದಲ್ಲೇ ಪಡೆದುಕೊಳ್ಳಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಕೋವಿಡ್ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು...

  • ಬೆಂಗಳೂರು: ಪಾಲಿಕೆ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೆ ಅವಕಾಶ ನೀಡಿದ್ದರಿಂದ ನ್ಯಾಷನಲ್‌...

  • ಬೆಂಗಳೂರು: ಕೋವಿಡ್ 19 ಲಾಕ್‌ಡೌನ್‌ ವೇಳೆ ಪೊಲೀಸರು ತಮ್ಮ ಕರ್ತವ್ಯಪರತೆ ಮೆರೆದಿದ್ದಾರೆ. ಆದರೆ, ಅವರ ಸಮಸ್ಯೆಯನ್ನು ಕೇಳುವವರಾರು? ಉದಾಹರಣೆ ಇಲ್ಲಿದೆ. ನಗರದ ಆಸ್ಪತ್ರೆಗಳಲ್ಲಿ...

  • ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿ ಕಾಂಗ್ರೆಸ್‌ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌...

  • ಬೆಂಗಳೂರು: ಬೇಸಿಗೆ ಬಂದರೆ ಸಾಕು ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಬೆವರುತ್ತಿದ್ದರು. ಆದರೆ, ಈ ಬಾರಿ ಒಂದಿಷ್ಟು ರಿಲಾಕ್ಸ್‌ ಮೂಡ್‌ನ‌ಲ್ಲಿದ್ದಾರೆ. ಇದಕ್ಕೆ...

ಹೊಸ ಸೇರ್ಪಡೆ