ಸ್ಮಾರ್ಟ್‌ ಕ್ಲಿನಿಕ್‌, ಡಿಜಿಟಲ್‌ ಕನ್ಸಲ್‌ಟೇಶನ್‌ ಗೆ ವಿಪುಲ ಅವಕಾಶ: DCM‌ ಅಶ್ವತ್ಥನಾರಾಯಣ


Team Udayavani, Feb 14, 2021, 7:09 PM IST

dcm

ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಸಾಕಷ್ಟು ಕಡೆಗಣಿಸಲಾಗಿತ್ತು. ಆದರೆ, ಕೋವಿಡ್‌ ಮಹಾಮಾರಿ ವಕ್ಕರಿಸಿದ ನಂತರ ಈ ಕ್ಷೇತ್ರದ ಮಹತ್ವದ ಎಲ್ಲರಿಗೂ ಗೊತ್ತಾಯಿತಲ್ಲದೆ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಕ್ಲಿನಿಕ್‌ ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ ಯುಗ ಆರಂಭವಾಗಲಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರದಂದು ಬನ್ನೇರುಘಟ್ಟ ರಸ್ತೆ ಯ ಕೃಷ್ಣ ಕುಟೀರದ ಸಮೀಪ ಸ್ಥಾಪಿಸಲಾಗಿರುವ ಶ್ರೀ ಸಾಯಿರಾಮ್‌ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು; ವೈದ್ಯರೆಲ್ಲರೂ ನಗರ ಪ್ರದೇಶಗಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಆರೋಗ್ಯ ಸೇವೆಯಲ್ಲಿ ನಗರ-ಗ್ರಾಮೀಣ ಪ್ರದೇಶಗಳ ನಡುವೆ ಕಂದಕ ಸೃಷ್ಟಿಯಾಗಿದೆ. ಕೋವಿಡ್‌ ನಂತರ ಈ ಕಂದಕ ಬಹುತೇಕ ನಿವಾರಣೆಯಾಗುತ್ತಿದ್ದು, ಸ್ಮಾರ್ಟ್‌ ಕ್ಲಿನಿಕ್‌ ವ್ಯವಸ್ಥೆ ಹೆಚ್ಚಿದಂತೆಲ್ಲ ಡಿಜಿಟಲ್‌ ಕನ್ಸಲ್‌ಟೇಶನ್‌ ಜನಪ್ರಿಯವಾಗುತ್ತಿದೆ. ರೋಗಿ ಎಲ್ಲೇ ಇದ್ದರೂ ಆನ್‌ಲೈನ್‌ ಮೂಲಕವೇ ಚಿಕಿತ್ಸೆಯನ್ನು ಪಡೆಯಬಹುದು. ಹಿಂದೆ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈಗ ಅವಕಾಶ ಕಲ್ಪಿಸಲಾಗಿದೆ ಎಂದರು.

ಸ್ಮಾರ್ಟ್‌ ಕ್ಲಿನಿಕ್‌ ವ್ಯವಸ್ಥೆ ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ಇಪ್ಪತ್ತು ನಾಲ್ಕು ಗಂಟೆ ವಿದ್ಯುತ್‌ ಹಾಗೂ ಹೈಸ್ಪೀಡ್‌ ಇಂಟರ್‌ನೆಟ್‌ ಕನೆಕ್ಟಿವಿಟಿ ಅಗತ್ಯ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಸರಕಾರ ಮಾಡುತ್ತಿದೆ ಎಂದು ಡಿಸಿಎಂ ನುಡಿದರು.

ಇದನ್ನೂ ಓದಿ:  ‘ಪಠಾಣ್’ ಚಿತ್ರದಲ್ಲಿ ಭಾಯ್ ಜಾನ್…. ಶಾರುಖ್ ಗೆ ಸಾಥ್ ನೀಡಿದ ಸಲ್ಮಾನ್

ಆರೋಗ್ಯ ಕ್ಷೇತ್ರ ಕಡೆಗಣನೆ ಇಲ್ಲ:

“ನಾವು ರಸ್ತೆ, ನೀರು, ವಿದ್ಯುತ್‌  ಮತ್ತಿತರೆ ಮೂಲಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಿ ಮಾತನಾಡುತ್ತೇವೆ. ಸರಕಾರಗಳು ಕೂಡ ಇಂಥ ವಿಷಯಗಳಿಗೇ ಹೆಚ್ಚು ಆದ್ಯತೆ ನೀಡಿವೆ ನಿಜ. ಆದರೆ, ಆರೋಗ್ಯ ಕ್ಷೇತ್ರಕ್ಕೂ ಇಷ್ಟೇ ಮಹತ್ವ ನೀಡಲೇಬೇಕು. ಈ ಅಂಶವನ್ನು ರಾಜ್ಯ ಸರಕಾರ ಮನಗಂಡಿದ್ದು ವೈದ್ಯಕೀಯ ಕ್ಷೇತ್ರದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದರು.

ಕೋವಿಡ್‌ ಬಂದಾಗ ನಮ್ಮಲ್ಲಿದ್ದ ಆರೋಗ್ಯ ವ್ಯವಸ್ಥೆಯ ಶಕ್ತಿ ಏನೆಂಬುದರ ಅರಿವಾಯಿತು. ಸರಕಾರಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ ಗಳ ಮಾತಿರಲಿ ಸಾಮಾನ್ಯ ಬೆಡ್‌ ಗಳೇ ಇಲ್ಲದಂಥ ಪರಿಸ್ಥಿತಿ ಇತ್ತು. ಆಕ್ಸಿಜನ್‌ ಸೌಲಭ್ಯ, ಎಮರ್ಜೆನ್ಸಿ ಸೌಲಭ್ಯ ಹೀಗೆ ಯಾವುದೇ ಸೌಲಭ್ಯ ಬೇಕಾದರೂ ಜನರು ಹುಡುಕಾಡುವ ಸನ್ನಿವೇಶ ಇತ್ತು. ಈಗ ಅಂಥ ಸಮಸ್ಯೆಗಳೇ ಇಲ್ಲ. ಎಲ್ಲ ಆಸ್ಪತ್ರೆಗಳಿಗೂ ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ, ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯವಾದ ಅರೆವೈದ್ಯ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ಡಿಸಿಎಂ ನುಡಿದರು.

ಇದನ್ನೂ ಓದಿ: ‘ಪ್ರೇಮಿಗಳ ದಿನ’… ಸಿಂಗಲ್ ಇರೋರಿಗೆ ಚಾರ್ ಮಿನಾರ್ ಚೆಲುವೆಯ ಬಿಗ್ ಗಿಫ್ಟ್…ಏನದು ?

ಯುರೋಪ್‌ ಉದಾಹರಣೆ:

ರಾಜ್ಯದಲ್ಲಿ ಕೋವಿಡ್‌ ಹಾವಳಿ ಹೆಚ್ಚಿದಾಗ ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ಮೂರ್ನಾಲ್ಕು ಲಕ್ಷಕ್ಕೂ ಹೆಚ್ಚು ವಿದೇಶಿ ನಾಗರೀಕರು ತಮ್ಮ ಸ್ವದೇಶಗಳಿಗೆ ವಾಪಸ್‌ ಹೋದರು. ಇಲ್ಲಿ ನಮ್ಮ ಪ್ರಾಣಕ್ಕೆ ರಕ್ಷಣೆ ಇಲ್ಲ ಎಂಬ ಭಾವನೆ ಅವರಲ್ಲಿತ್ತು. ಅದೇ ಯುರೋಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯಾವ ವಿದೇಶಿ ನಾಗರೀಕರೂ ಅಲ್ಲಿಂದ ಕದಲಿಲ್ಲ. ಅಲ್ಲಿನ ಆರೋಗ್ಯ ವ್ಯವಸ್ಥೆಯ ಮೇಲೆ ಅವರಿಗೆ ಗಾಢವಾದ ನಂಬಿಕೆ ಇತ್ತು. ಅಂಥದ್ದೇ ನಂಬಿಕೆ ಮತ್ತು ಭರವಸೆಯನ್ನು ನಾವು ಸೃಷ್ಟಿ ಮಾಡಬೇಕಾಗಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಯಾವುದೇ ಕಾರಣಕ್ಕೂ ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಬಾರದು ಎಂಬುದು ನಮ್ಮ ಸರಕಾರದ ಬದ್ಧತೆ. ಸಮಾಜವನ್ನು ಕಾಪಾಡಿಕೊಳ್ಳಬೇಕಾದರೆ ಆರೋಗ್ಯ ಕ್ಷೇತ್ರವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದೆ ಮಾತ್ರವಲ್ಲದೆ, ಮಾನವ ಸಂಪನ್ಮೂಲ ಕೊರತೆ ಆಗದಂತೆ ನೋಡಿಕೊಂಡಿದೆ. ಜತೆಗೆ; ವೈದ್ಯಕೀಯ ಕೋರ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ದೊಡ್ಡ ಪ್ರಮಾಣದ ಅವಕಾಶ ಮಾಡಿಕೊಡಲಾಗಿದೆ ಎಂದು ಡಿಸಿಎಂ ನುಡಿದರು.

ಇದನ್ನೂ ಓದಿ: ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ವಿವಾದ: ಬೆಂಗಳೂರು ಯುವತಿಯನ್ನು ಬಂಧಿಸಿದ ದಿಲ್ಲಿ ಪೊಲೀಸರು

ಕರ್ನಾಟಕ ಅವಕಾಶಗಳ ಹೆಬ್ಬಾಗಿಲು:

ಕೋವಿಡ್‌ ನಂತರ ಕರ್ನಾಟಕ ವನ್ನು ಇಡೀ ಜಗತ್ತು ಅಮೆರಿಕವನ್ನು ನೋಡುವಂತೆ ನೋಡತ್ತಿದೆ. ಹಿಂದೆ ನಮ್ಮ ದೇಶದ ಜನರು ಅವಕಾಶಗಳಿಗಾಗಿ ಅಮೆರಿಕದತ್ತ ನೋಡುತ್ತಿದ್ದರು. ಈಗ ಕರ್ನಾಟಕದತ್ತ ನೋಡುತ್ತಿದ್ದಾರೆ. ಇಡೀ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಅನೇಕ ಪ್ರತಿಭಾವಂತರು ಬೆಂಗಳೂರಿಗೆ ಧಾವಿಸಿ ಬರುತ್ತಿದ್ದಾರೆ ಎಂದು ಡಿಸಿಎಂ ಹೇಳಿದರು.

ಶಾಸಕ ಸತೀಶ್‌ ರೆಡ್ಡಿ, ಖ್ಯಾತ ಹೃದ್ರೋಗ ತಜ್ಞ ವಿವೇಕ್‌ ಜವಳಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಕೆನರಾ ಬ್ಯಾಂಕ್‌ ಅಧಿಕಾರಿ ನಯನ, ಬಿಬಿಎಂಪಿ ಮಾಜಿ ಸದಸ್ಯರಾದ ಮುರಳಿ, ಪುರುಷೋತ್ತಮ್, ಭಾಗ್ಯಲಕ್ಷ್ಮೀ ಹಾಗೂ ಡಾ.ವಿವೇಕಾನಂದ, ವಿಷ್ಣುಭಟ್‌, ಡಾ. ಬಾಲಕೃಷ್ಣ ಭಟ್‌,  ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.