ಬಾರ್,ಕ್ಲಬ್, ಹೊಟೇಲ್ಗಳಲ್ಲಿ ಧೂಮಪಾನ ತಕ್ಷಣದಿಂದ ನಿಷೇಧ
Team Udayavani, Nov 20, 2018, 6:00 AM IST
ಬೆಂಗಳೂರು: ಮಹಾನಗರ, ನಗರ, ಪಟ್ಟಣ ಪ್ರದೇಶಗಳ ಹೊಟೆಲ್, ಬಾರ್, ರೆಸ್ಟೊರೆಂಟ್, ಕ್ಲಬ್ ಹಾಗೂ ಪಬ್ಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣ ಧೂಮಪಾನ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.
ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೊಗ್ಯ ರಕ್ಷಣೆ ಕಾಯ್ದೆ 2001 ರ ಪ್ರಕಾರ ಸೋಮವಾರದಿಂದಲೇ ಈ ನಿಷೇಧ ಹೇರಲಾಗಿದ್ದು, ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಧೂಮಪಾನಕ್ಕೆ ಅವಕಾಶ ನೀಡುವಂತಿಲ್ಲ. ಒಂದು ವೇಳೆ, ಧೂಮಪಾನಕ್ಕೆ ಅವಕಾಶ ನೀಡಿದರೆ ಸಂಬಂಧ ಪಟ್ಟ ಹೊಟೆಲ್, ಬಾರ್, ಕ್ಲಬ್ಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು.
ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಅವರು ಸೋಮವಾರ ಈ ವಿಷಯವನ್ನು ಪ್ರಕಟಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆಯಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಧೂಮಪಾನದಿಂದ ಪರೋಕ್ಷ ಧೂಮಪಾನ (ಪ್ಯಾಸೀವ್ ಸ್ಮೋಕರ್) ಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರೋಗ್ಯ, ಕಾನೂನು, ಗೃಹ ಇಲಾಖೆ, ಸಮಾಜ ಕಲ್ಯಾಣ, ನಗರ ಸ್ಥಳೀಯ ಸಂಸ್ಥೆಗಳ ಸಹಕಾರ ಅಗತ್ಯವಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸೇರಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು,’ ಎಂದರು.
ಕೋಟಾ³ ಕಾಯಿದೆ 2003 ರ ಪ್ರಕಾರ 30 ಕ್ಕೂ ಹೆಚ್ಚು ಆಸನವಿರುವ ಬಾರ್,ರೆಸ್ಟೋರೆಂಟ್, ಹೋಟೆಲ್, ಪಬ್, ಕ್ಲಬ್ಗಳಲ್ಲಿ ಧೂಮಪಾನ ಪ್ರದೇಶ ಸ್ಥಾಪಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈ ಕಾನೂನು ತಿದ್ದುಪಡಿ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?