ಶ್ರೀ ನಾರಾಯಣಗುರು ಫಲಕ ಅನಾವರಣ
Team Udayavani, Mar 2, 2019, 6:09 AM IST
ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಜೆ.ಡಿ.ಮರ ಜಂಕ್ಷನ್ಗೆ ಬ್ರಹ್ಮಶ್ರೀ ನಾರಾಯಣಗುರು ಜಂಕ್ಷನ್ ಎಂದು ಶುಕ್ರವಾರ ಮರುನಾಮಕರಣ ಮಾಡಲಾಯಿತು. ಬಿಬಿಎಂಪಿಯಿಂದ ನಿರ್ಮಿಸಿದ್ದ ಹೊಸ ನಾಮಫಲಕ ಅನಾವರಣಗೊಳಿಸಿ, ಬ್ರಹ್ಮಶ್ರೀ ನಾರಾಯಣಗುರು ಭಾವ ಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ ಅವರು ಮರುನಾಮಕರಣ ಪ್ರಕ್ರಿಯೆ ನೆರವೇರಿಸಿದರು.
ನಂತರ ಮಾತನಾಡಿದ ಮೇಯರ್, ಈ ಪ್ರದೇಶದಲ್ಲಿ ವಾಸಿಸುವ ಬಿಲ್ಲವರು, ಈ ಜಂಕ್ಷನ್ಗೆ ನಾರಾಯಣ ಗುರು ಹೆಸರಿಡುವಂತೆ ಕೋರಿ 2017ರಲ್ಲೇ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ನಂತರದ ದಿನಗಳಲ್ಲಿ ಒತ್ತಾಯ ಮಾಡಿಕೊಂಡು ಬಂದಿದ್ದಾರೆ. ಅವರ ಬೇಡಿಕೆಗೆ ಸ್ಪಂದಿಸಿದ್ದೇವೆ. ಎಲ್ಲರೂ ಒಂದೇ ಎಂದು ಸಾರಿದ ಬ್ರಹ್ಮಶ್ರೀ ನಾರಾಯಣಗುರು ನಮಗೆಲ್ಲರಿಗೂ ಆದರ್ಶ ಎಂದು ಹೇಳಿದರು.
ಶಾಸಕಿ ಸೌಮ್ಯಾ ರೆಡ್ಡಿ, ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಎಂ.ವೇದಕುಮಾರ್, ಹಿರಿಯ ಉಪಾಧ್ಯಕ್ಷ ಎಂ.ರಮೇಶ್ ಬಂಗೇರ, ಉಪಾಧ್ಯಕ್ಷ ಕೇಶವ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ರತ್ನಾ ಜಯರಾಮ್, ಪಾಲಿಕೆ ಸದಸ್ಯರಾದ ಲಕ್ಷ್ಮೀ ನಟರಾಜ್, ಭಾಗ್ಯಲಕ್ಷ್ಮೀ ಮುರಳಿ, ಜಂಟಿ ಆಯುಕ್ತರಾದ ಡಾ.ಸೌಜನ್ಯಾ, ಕಾರ್ಯಕಾರಿ ಇಂಜಿನಿಯರ್ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ