Udayavni Special

ಉತ್ತರ ಕರ್ನಾಟಕದತ್ತ ಸ್ಟಾರ್‌ ನಾಯಕರು


Team Udayavani, Feb 23, 2018, 6:00 AM IST

Narendra-Modi-,Amit-Shah,Ra.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದರೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ ರಾಷ್ಟ್ರಾಧ್ಯಕ್ಷರು ರಾಜ್ಯದಲ್ಲಿ ಪ್ರವಾಸ ಚುರುಕುಗೊಳಿಸಿದ್ದು, ಶನಿವಾರದಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದತ್ತ ಗಮನ ಕೇಂದ್ರೀಕರಿಸಲಿದ್ದಾರೆ.

ರಾಜ್ಯದ ಕರಾವಳಿ ಭಾಗದಲ್ಲಿ ಈಗಾಗಲೇ ಪ್ರವಾಸ ಕೈಗೊಂಡು ದೆಹಲಿಗೆ ವಾಪಸಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು  ಶನಿವಾರದಿಂದ ಮತ್ತೆ ಮೂರು ದಿನಗಳ ಕಾಲ (ಫೆ. 24ರಿಂದ 26) ಉತ್ತರ ಕರ್ನಾಟಕ ಭಾಗದ ಬೀದರ್‌, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನಾವೇನು ಕಡಿಮೆ ಎನ್ನುವಂತೆ ಇದೇ ಅವಧಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರೂ ಮುಂಬೈ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಉಭಯ ನಾಯಕರ ಉತ್ತರ ಕರ್ನಾಟಕ ಪ್ರವಾಸ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ಪಾಲಿಗೆ ಮಹತ್ವದ್ದಾಗಿದೆ. ಅಲ್ಲದೆ, ಚುನಾವಣೆ ವೇಳೆ ಆ ಭಾಗದಲ್ಲಿ ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳಲೂ ಇದು ಅನುಕೂಲವಾಗಲಿದೆ. ಈ ಬೆನ್ನಿಗೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಾ.6ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ದೇಗುಲ ದರ್ಶನ:
ಅಮಿತ್‌ ಶಾ ಅವರು ತಮ್ಮ ಮೂರು ದಿನಗಳ ಪ್ರವಾಸದ ವೇಳೆ ಬಸವ ಕಲ್ಯಾಣ, ಗುರುದ್ವಾರ ಸೇರಿದಂತೆ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.  ಕಲಬುರಗಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳುವರು. ಅಲ್ಲದೆ, ಕೋಲಿ ಸಮಾಜ, ಪರಿಶಿಷ್ಟ ಜಾತಿ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು, ರೈತರು, ಉದ್ಯಮಿಗಳು, ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸುವರು. ಪಕ್ಷದ ವತಿಯಿಂದ ನಡೆಯುವ ವಿವಿಧ ಸಮಾವೇಶಗಳಲ್ಲೂ ಪಾಲ್ಗೊಳ್ಳುವರು. ಫೆ. 24 ಮತ್ತು 25ರಂದು ರಾತ್ರಿ ರಾಜ್ಯದಲ್ಲಿ ತಂಗಲಿರುವ ಅಮಿತ್‌ ಶಾ, ಸರ್ಕಾರಿ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿ ಅಲ್ಲೇ ಊಟ, ತಿಂಡಿ ಸೇವಿಸಲಿದ್ದಾರೆ.

ದೇಗುಲ ದರ್ಶನ ಸಾಧ್ಯತೆ:
ರಾಹುಲ್‌ ಗಾಂಧಿ ಅವರು ತಮ್ಮ ಮೂರು ದಿನಗಳ ಪ್ರವಾಸದಲ್ಲಿ ಮಹದಾಯಿ ವಿವಾದ, ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಮಹಿಳಾ ಸಂಘಟನೆಗಳು, ರೈತರೊಂದಿಗೆ ಸಂವಾದ, ಪಕ್ಷದ ಮುಖಂಡರೊಂದಿಗೆ ಸಭೆಗಳನ್ನು ಮಾಡಲಿದ್ದಾರೆ. ಫೆಬ್ರವರಿ 26 ರಂದು ಹುಬ್ಬಳ್ಳಿ ನೆಹರು ಮೈದಾನದಲ್ಲಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಈ ಬಾರಿಯ ಪ್ರವಾಸದ ಸಂದರ್ಭದಲ್ಲಿ ಮಠ ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡುವ ಅಧಿಕೃತ ಕಾರ್ಯಕ್ರಮ ಇಲ್ಲದಿದ್ದರೂ ದಾರಿಯಲ್ಲಿ ಐತಿಹಾಸಿಕ ಮತ್ತು ಪಾರಂಪರಿಕ ದೇವಸ್ಥಾನ ಮಠಗಳು ಕಂಡರೆ ರಾಹುಲ್‌ ಗಾಂಧಿ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರು ತಮ್ಮ ಮುಂಬೈ ಕರ್ನಾಟಕ ಭಾಗದ ಪ್ರವಾಸದಲ್ಲಿ ಪ್ರಮುಖವಾಗಿ ಆ ಭಾಗದ ಜನತೆ ಎದುರಿಸುತ್ತಿರುವ ಮಹದಾಯಿ ಸಮಸ್ಯೆ ಬಗ್ಗೆ ಬೆಳಕು ಚೆಲ್ಲುವ ಸಾಧ್ಯತೆ ಇದೆ. ವಿವಾದದ ಕುರಿತು ಅವರು ಮಾತನಾಡಲಿದ್ದಾರೆ.
– ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ

ಅಮಿತ್‌ ಶಾ ಪ್ರವಾಸದ ಹೈಲೈಟ್ಸ್‌
– ಫೆ.24ರಂದು ರಾತ್ರಿ 8.30ಕ್ಕೆ ಬೀದರ್‌ಗೆ ಆಗಮನ
– ಮೂರು ದಿನ ಸರ್ಕಾರಿ ಅತಿಥಿ ಗೃಹದಲ್ಲೇ ವಾಸ್ತವ್ಯ, ಭೋಜನ
– ಫೆ.25ರಂದು 3 ಜಿಲ್ಲೆಗಳ 3 ದೇಗುಲಗಳಿಗೆ ಭೇಟಿ, ಮೃತ ರೈತನ ಮನೆಗೆ ಭೇಟಿ
– ಕಬ್ಬು ಬೆಳೆಗಾರರು, ಕೋಲಿ ಸಮಾಜ, ಪರಿಶಿಷ್ಟ ಜಾತಿ, ಉದ್ಯಮಿಗಳು, ಪಕ್ಷದ ನಾಯಕರ ಜತೆ ಪ್ರತ್ಯೇಕ ಸಭೆ
– ಫೆ.26ರಂದು ಬಸವಕಲ್ಯಾಣ, ಗುರುದ್ವಾರ ಸಹಿತ 3 ಧಾರ್ಮಿಕ ಕೇಂದ್ರಗಳಿಗೆ ಭೇಟಿ, ಪತ್ರಿಕಾಗೋಷ್ಠಿ
– ಒಬಿಸಿ ನಾಯಕರ ಜತೆ ಸಭೆ, ಪಕ್ಷದ ನಾಯಕರ ಜತೆ 3ಸಭೆಗಳು, ರಾತ್ರಿ ನಿರ್ಗಮನ

ಮಾರ್ಚ್‌ನಲ್ಲಿ ಉತ್ತರಕ್ಕೆ ಪ್ರಧಾನಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಪಕ್ಷದ ರೈತ ಮೋರ್ಚಾ ಫೆ. 27ರಂದು ದಾವಣಗೆರೆಯಲ್ಲಿ ಏರ್ಪಡಿಸಿರುವ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವರು. ಮಾರ್ಚ್‌ ತಿಂಗಳಲ್ಲಿ ಉತ್ತರ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ. 4ರಂದು ವಿಜಯಪುರದಲ್ಲಿ ಮತ್ತು ಮಾ. 11ರಂದು ರಾಯಚೂರು ಜಿಲ್ಲೆಗಳಲ್ಲಿ ಪಕ್ಷದ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ಮಾ. 6ರಂದು ಯೋಗಿ ಆದಿತ್ಯನಾಥ್‌
ಹಿಂದೂ ಮತಗಳನ್ನು ಕ್ರೋಡೀಕರಿಸುವ ಉದ್ದೇಶದಿಂದ ಅಮಿತ್‌ ಶಾ ಅವರು ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದಾರೆ. ಅಲ್ಲದೆ, ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕರಾವಳಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಹಿಂದೂ ಕಾರ್ಯಕರ್ತರ ಹತ್ಯೆ ವಿರೋಧಿಸಿ ಬಿಜೆಪಿ ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುಮಟಾದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದು, ಮಾ. 6ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಪಾದಯಾತ್ರೆ ಸಮಾಪನಗೊಂಡು ಅಲ್ಲಿ ಬೃಹತ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಈ ರ್ಯಾಲಿಯಲ್ಲಿ ಯೋಗಿ ಆದಿತ್ಯನಾಥ್‌ ಪಾಲ್ಗೊಳ್ಳುತ್ತಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸರಕಾರ 2 ತಿಂಗಳ ಸಂಬಳ ನೀಡಿಲ್ಲ: ಖಾದರ್ ಆರೋಪ

ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸರಕಾರ 2 ತಿಂಗಳ ಸಂಬಳ ನೀಡಿಲ್ಲ: ಖಾದರ್ ಆರೋಪ

ಕೋಟ ಹೋಬಳಿಯ ಬಾರಿಕೆರೆ, ವಂಡಾರು ಮಾರ್ವಿಯಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆ; ಸೀಲ್ ಡೌನ್

ಕೋಟ ಹೋಬಳಿಯ ಬಾರಿಕೆರೆ, ವಂಡಾರು ಮಾರ್ವಿಯಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆ; ಸೀಲ್ ಡೌನ್

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಲಾರಿ

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಲಾರಿ

ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ

ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ

ಜೆಪಿ ಡ್ಯುಮಿನಿಯ ಸಾರ್ವಕಾಲಿಕ ಐಪಿಎಲ್ ತಂಡದಲ್ಲಿ ಧೋನಿಗೆ ಜಾಗವಿಲ್ಲ!

ಜೆಪಿ ಡ್ಯುಮಿನಿಯ ಸಾರ್ವಕಾಲಿಕ ಐಪಿಎಲ್ ತಂಡದಲ್ಲಿ ಧೋನಿಗೆ ಜಾಗವಿಲ್ಲ!

ಕೋವಿಡ್ ವಿರುದ್ಧ ಹೋರಾಟಕ್ಕಿಳಿದ ವಾಯುಪಡೆಯ ಚಿನೂಕ್‌ ಹೆಲಿಕಾಪ್ಟರ್‌ಗಳು

ಕೋವಿಡ್ ವಿರುದ್ಧ ಹೋರಾಟಕ್ಕಿಳಿದ ವಾಯುಪಡೆಯ ಚಿನೂಕ್‌ ಹೆಲಿಕಾಪ್ಟರ್‌ಗಳು

ವಿಶ್ವ ಆರೋಗ್ಯ ಸಂಸ್ಥೆ ಜೊತೆಗೆ ಸಂಬಂಧ ಕಡಿದುಕೊಂಡ ಅಮೇರಿಕ

ವಿಶ್ವ ಆರೋಗ್ಯ ಸಂಸ್ಥೆ ಜೊತೆಗೆ ಸಂಬಂಧ ಕಡಿದುಕೊಂಡ ಅಮೇರಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ

ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇಲ್ಲ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ

shouting kovid

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕೋವಿಡ್‌ 19 ಅಬ್ಬರ

lock-kendra

ಲಾಕ್‌ಡೌನ್‌ ಸಡಿಲ : ಕೇಂದ್ರಕ್ಕೆ ವರದಿ ಸಲ್ಲಿಸಲು ಸಿದ್ಧತೆ

vividha malas

“ಬಿಜೆಪಿ ಸಂಪರ್ಕದಲ್ಲಿ ವಿವಿಧ ಪಕ್ಷಗಳ ಶಾಸಕರು’

adi hara

ಅದಿರು ಹರಾಜಿಗೆ ಕ್ರಮ ವಹಿಸಲು ಸಿಎಂ ಸೂಚನೆ

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

30-May-04

ಊರಿಗೆ ಮರಳಿದ 139 ವಲಸೆ ಕಾರ್ಮಿಕರು

ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸರಕಾರ 2 ತಿಂಗಳ ಸಂಬಳ ನೀಡಿಲ್ಲ: ಖಾದರ್ ಆರೋಪ

ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸರಕಾರ 2 ತಿಂಗಳ ಸಂಬಳ ನೀಡಿಲ್ಲ: ಖಾದರ್ ಆರೋಪ

30-May-03

ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ

30-May-02

ಸಾಮಗ್ರಿ ವಿತರಣೆ: ಸಾಮಾಜಿಕ ಅಂತರ ಮಾಯ

30-May-01

ಕ್ವಾರಂಟೈನ್‌ದಿಂದ ಮನೆಗೆ ಹೋದವರಿಗೆ ಸೋಂಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.