ನ್ಯಾನೋ ಸಂಶೋಧನಾ ಕೇಂದ್ರ ಆರಂಭಿಸಿ


Team Udayavani, Jan 28, 2019, 6:35 AM IST

nano.jpg

ಬೆಂಗಳೂರು: ದೇಶದಲ್ಲಿ ಹೆಚ್ಚಾಗುತ್ತಿರುವ ಕ್ಯಾನ್ಸರ್‌ ಮಹಾಮಾರಿ ಕುರಿತು ಹೆಚ್ಚಿನ ಸಂಶೋಧನೆ ಅಗತ್ಯವಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಬೆಂಗಳೂರು ಮಹಾನಗರದಲ್ಲಿ ನ್ಯಾನೋ ಸಂಶೋಧನಾ ಕೇಂದ್ರ ಆರಂಭಿಸಬೇಕು ಎಂದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಸಮಿತಿ ಮುಖ್ಯಸ್ಥರಾದ ಹಿರಿಯ ವಿಜ್ಞಾನಿ ಡಾ.ಸಿ.ಎನ್‌.ಆರ್‌. ರಾವ್‌ ತಿಳಿಸಿದರು.

ನಗರದ ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್‌.ಟಾಟಾ ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ಕ್ಯಾನ್ಸರ್‌ ಸೊಸೈಟಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಚಂದ್ರಯಾನ ಕೈಗೊಂಡು ದಶಕಗಳೇ ಕಳೆದಿದ್ದು, ಈಗ ಮಂಗಳಯಾನಕ್ಕೆ ಸಜ್ಜಾಗುತ್ತಿದ್ದಾನೆ.

ಆದರೆ, ಪ್ರಪಂಚವನ್ನೇ ಕಾಡುತ್ತಿರುವ ಕ್ಯಾನ್ಸರ್‌ ಮಹಾಮಾರಿಗೆ ಕಾರಣ ಹಾಗೂ ಅದರಿಂದ ಸಂಪೂರ್ಣ ಗುಣಮುಖವಾಗಲು ಅಗತ್ಯ ಮದ್ದನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನ್ಯಾನೋ ಸಂಶೋಧನೆ ಅವಶ್ಯಕವಿದ್ದು, ರಾಜ್ಯ ಅಥವಾ ಕೇಂದ್ರ ಸರ್ಕಾರವು ಬೆಂಗಳೂರಿನಲ್ಲಿ ನ್ಯಾನೋ ಸಂಶೋಧನಾ ಕೇಂದ್ರವನ್ನು ತೆರೆಯಲು ಮುಂದಾಗಬೇಕು ಎಂದರು.

ಕ್ಯಾನ್ಸರ್‌ ರೋಗವು ಹೆಚ್ಚಾಗುತ್ತಲೇ ಇದ್ದು, ಅದರ ಚಿಕಿತ್ಸೆಗಾಗಿ ದೇಶ ವಿದೇಶಗಳಲ್ಲಿ ಸಹಸ್ರ ಕೋಟಿ (ಟ್ರಿಲಿಯನ್‌) ಹಣ ಖರ್ಚು ಮಾಡಲಾಗುತ್ತಿದೆ. ಆದರೂ, ಪ್ರತಿವರ್ಷ ಲಕ್ಷಾಂತರ ಜನ ಸಾಯುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ರೋಗವನ್ನು ಬೇಗ ಪತ್ತೆ ಹಚ್ಚುವಲ್ಲಿ ವಿಫ‌ಲವಾಗುತ್ತಿರುವುದು.

ಹೀಗಾಗಿ, ಕ್ಯಾನ್ಸರ್‌ಗೆ ಕಾರಣವೇನು, ಅದನ್ನು ಬೇಗ ಪತ್ತೆಹಚ್ಚಲು ಅಗತ್ಯವಿರುವ ಅಂಶಗಳು ಯಾವುವು ಹಾಗೂ ಪೂರ್ಣ ಗುಣಮುಖರಾಗಲು ನಿಖರ ಚಿಕಿತ್ಸೆ ಏನು ಎಂಬುದನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಅಲ್ಲದೇ, ಇಂತಹ ಸಂಶೋಧನೆಗಳಿಗೆ ನೆರವು ಹಾಗೂ ಪ್ರೋತ್ಸಾಹದ ಅವಶ್ಯಕತೆ ಇದೆ. ಸಂಶೋಧನೆಗೆ ಹೆಚ್ಚಿನ ನೆರವು ನೀಡುವ ನಿಟ್ಟಿನಲ್ಲಿ ಅಮೆರಿಕ ಸೇರಿದಂತೆ ಕೆಲ ದೇಶಗಳು ಅಗತ್ಯ ಕ್ರಮ ಕೈಗೊಂಡು ಯಶಸ್ಸನ್ನು ಕಾಣುತ್ತಿವೆ ಎಂದು ತಿಳಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಯಾವುದೇ ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಆ ರೋಗ ಬಾರದಂತೆ ಎಚ್ಚೆತ್ತುಕೊಳ್ಳುವುದು ಮುಖ್ಯ. ಅದರಲ್ಲೂ ಕ್ಯಾನ್ಸರ್‌ ರೋಗಕ್ಕೆ ಮುನ್ನೆಚ್ಚರಿಕೆ ಹಾಗೂ ಆರಂಭದಲ್ಲೇ ಪತ್ತೆ ಹಚ್ಚುವ ಅಗತ್ಯವಿದೆ. ಕರ್ನಾಟಕದ ಮಟ್ಟಿಗೆ ಕ್ಯಾನ್ಸರ್‌ ರೋಗಿಗಳ ಸೇವೆಯನ್ನು ಕಳೆದ 50 ವರ್ಷಗಳಿಂದ ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೇ ಅರ್ಥ ಪೂರ್ಣವಾಗಿ ಮಾಡಿಕೊಂಡು ಬಂದಿರುವ ಕ್ಯಾನ್ಸರ್‌ ಸೊಸೈಟಿಯ ಸೇವಾಕಾರ್ಯ ಶ್ಲಾಘನೀಯ.

ವೈಯಕ್ತಿಕವಾಗಿ ಕ್ಯಾನ್ಸರ್‌ ಸೊಸೈಟಿಗೆ 5 ಲಕ್ಷ ರೂ. ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿಯೂ ಅಗತ್ಯ ನೆರವನ್ನು ನೀಡುತ್ತೇನೆ ಎಂದರು. ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಮಾತನಾಡಿ, ಮಹಿಳೆಯರಲ್ಲಿ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್‌ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ರೋಗವನ್ನು ತಡೆಗಟ್ಟುಲು ಶೀಘ್ರ ರೋಗ ಪತ್ತೆ ಅವಶ್ಯಕವಾಗಿದೆ.

ಆ ನಿಟ್ಟಿನಲ್ಲಿ ಅನುಕೂಲವಾಗಲು ಅನಂತ್‌ಕುಮಾರ್‌ ಅವರ ಹೆಸರಲ್ಲಿ ಅದಮ್ಯ ಚೇತನ ವತಿಯಿಂದ ಆರಂಭಿಸುತ್ತಿರುವ ಎರಡು ಜನೌಷಧ ಕೇಂದ್ರದಲ್ಲಿ ಮಹಿಳೆಯರ ಕ್ಯಾನ್ಸರ್‌ ಪತ್ತೆ ಪರೀಕ್ಷೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜತೆಗೆ ಇಲ್ಲಿ ಕ್ಯಾನ್ಸರ್‌ ಸಂಬಂಧಿಸಿದ ಔಷಧಗಳ ಲಭ್ಯತೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಕರ್ನಾಟಕ ಕ್ಯಾನ್ಸರ್‌ ಸೊಸೈಟಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಕರ್ನಾಟಕ ಕ್ಯಾನ್ಸರ್‌ ಸೊಸೈಟಿ ಅಧ್ಯಕ್ಷ ಡಾ.ಸಿಕೆಎಎನ್‌ ಶಾಸಿ, ವೈದ್ಯೆ ಡಾ. ವಿಜಯಲಕ್ಷ್ಮೀ ದೇಶಮಾನೆ, ಕಿದ್ವಾಯಿ ಮಾಜಿ ನಿರ್ದೇಶಕ ಡಾ.ಕೆ.ಬಿ.ಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.