ಕೈಗೆ ಸಂಕ್ರಾಂತಿ ಆತಂಕ


Team Udayavani, Jan 14, 2019, 12:30 AM IST

congress-700.jpg

ಬೆಂಗಳೂರು: ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗುತ್ತದೆ ಎಂಬ ಸುದ್ದಿ ಕೇಳಿ ಆತಂಕದಲ್ಲೇ ದಿನ ಕಳೆಯುತ್ತಿದ್ದ ರಾಜ್ಯ ಕಾಂಗ್ರೆಸ್‌ ನಾಯಕರು ಪ್ರತಿ ದಿನ ಅತೃಪ್ತ ಶಾಸಕರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳುವ ಮೂಲಕ ವಿಶ್ವಾಸದಲ್ಲಿರಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ಭಾನುವಾರ ಚಿಕ್ಕೋಡಿ ಸದಲಗಾ ಕ್ಷೇತ್ರ ಶಾಸಕ ಗಣೇಶ್‌ ಹುಕ್ಕೇರಿ ಕಾಂಗ್ರೆಸ್‌ ತೊರೆಯಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತಾದರೂ, ಅವರು ತಕ್ಷಣವೇ ತಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ಟ್ವೀಟ್‌ ಮಾಡಿ, ಸ್ಪಷ್ಟನೆ ನೀಡಿದರು. ಇನ್ನು ಚಿಂಚೋಳಿ ಶಾಸಕ ಉಮೇಶ್‌ ಜಾಧವ ಕೂಡ ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಹರಡಿದ್ದು, ಆದರೆ, ಅವರು ಈ ಬಗ್ಗೆ ಯಾರಿಗೂ ಸಂಪರ್ಕಕ್ಕೆ ಸಿಗದೇ ಇರುವುದು ಕೈ ನಾಯಕರಿಗೆ ಆತಂಕವುಂಟು ಮಾಡಿದೆ. ಬಿಜೆಪಿಯವರು ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಭ್ಯರ್ಥಿಯನ್ನಾಗಿ ಮಾಡಲು ಉಮೇಶ್‌ ಜಾಧವ್‌ ಅವರನ್ನು ಪಕ್ಷಕ್ಕೆ ಸೆಳೆಯಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಇನ್ನು ಪಕ್ಷದ ನಾಯಕರೊಂದಿಗೆ ಮುನಿಸಿಕೊಂಡು ಸಚಿವ ಸ್ಥಾನ ಕಳೆದುಕೊಂಡ ಮೇಲೆ ಯಾರ ಸಂಪರ್ಕಕ್ಕೂ ಸಿಗದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಇನ್ನೂ ಸಂಪರ್ಕಕ್ಕೆ ಸಿಗದಿರುವುದು ಕೈ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. 

ಆದರೆ, ಅವರೊಂದಿಗೆ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿರುವ ಶಾಸಕರೊಂದಿಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಜಲ  ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ದೂರವಾಣಿ ಮೂಲಕ ಮಾತುಕತೆ ಮಾಡಿ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ನಿರಂತರ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್‌ ಜಾರಕಿಹೊಳಿ, ಪಕ್ಷೇತರ ಶಾಸಕ ಆರ್‌.ಶಂಕರ್‌ ಹಾಗೂ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಈಗಲೂ ಪಕ್ಷದ ನಾಯಕರಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದ್ದು, ಮುಂಬೈನಲ್ಲಿಯೇ ಬೀಡು ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಸಂಪರ್ಕಕ್ಕೆ ಕೈ ನಾಯಕರು ಈಗಲೂ ನಿರಂತರ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿರುವ ಅನೇಕ ಶಾಸಕರನ್ನು ಪಕ್ಷದ ನಾಯಕರು ಮಾತುಕತೆ ಮೂಲಕ ಮನವೊಲಿಸಿ ಸಮಾಧಾನ ಪಡಿಸುವಲ್ಲಿ ಬಹುತೇಕ ಸಫ‌ಲರಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ರಮೇಶ್‌ ಜಾರಕಿಹೊಳಿ ಈಗಲೂ ಅತೃಪ್ತ ಶಾಸಕರನ್ನು ತಮ್ಮೊಂದಿಗೆ ಪಕ್ಷ ತೊರೆಯಲು ನಿರ್ಧರಿಸುವಂತೆ ನಿರಂತರ ಒತ್ತಡ ಹೇರುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆದರೆ, ಬೈಲಹೊಂಗಲ ಶಾಸಕ ಮಹಾಂತೇಶ್‌ ಕೌಜಲಗಿ, ಬಸವ ಕಲ್ಯಾಣ ಶಾಸಕ ಬಿ. ನಾರಾಯಣರಾವ್‌ ಹಾಗೂ ಪ್ರತಾಪ್‌ಗೌಡ ಪಾಟೀಲ್‌ ಪಕ್ಷದಲ್ಲಿ ಆಗಿರುವ ಅನ್ಯಾಯಕ್ಕೆ ಕಾಂಗ್ರೆಸ್‌ನಲ್ಲಿಯೇ ಇದ್ದುಕೊಂಡು ನ್ಯಾಯ ಕೇಳುವುದಾದರೆ ನಾವು ನಿಮ್ಮೊಂದಿಗೆ ಬರುತ್ತೇವೆ ಎಂದು ರಮೇಶ್‌ ಜಾರಕಿಹೊಳಿ ಅವರಿಗೆ ನೇರವಾಗಿಯೇ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಕಂಪ್ಲಿ ಶಾಸಕ ಗಣೇಶ್‌ ಕೂಡ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ತಾವು ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ರಮೇಶ್‌ ಜಾರಕಿಹೊಳಿ ಅವರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದ್ದರೂ ಸಂಖ್ಯಾಬಲ ಇದ್ದರಷ್ಟೇ ತಮ್ಮೊಂದಿಗೆ ಬರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದ್ದು, ಅದಕ್ಕಾಗಿ ರಮೇಶ್‌ ಜಾರಕಿಹೊಳಿ ನಿರೀಕ್ಷಿತ ಸಂಖ್ಯಾ ಬಲ ಸೇರಿಸಲು ಮುಂಬೈನಲ್ಲಿ ಕುಳಿತು ಕಸರತ್ತು ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಥಣಿ ಶಾಸಕ ಮಹೇಶ್‌ ಕಮಠಳ್ಳಿ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಮಾತ್ರ ರಮೇಶ್‌ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿ ಅವರೊಂದಿಗೆ ನಿಂತಿದ್ದಾರೆ ಎನ್ನಲಾಗಿದೆ. ಆದರೆ, ಬಿಜೆಪಿಯವರ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್‌ ಶಾಸಕರು ಪಕ್ಷ ತೊರೆಯುವ ನಿರ್ಧಾರ ತೆಗೆದುಕೊಳ್ಳದಿರುವುದು ಕಾಂಗ್ರೆಸ್‌ ನಾಯಕರು ಸಂಕ್ರಾಂತಿ ನಂತರವೂ ಯಾವುದೇ ಕ್ರಾಂತಿಯಾಗುವುದಿಲ್ಲ ಎಂದು ನಿಟ್ಟುಸಿರುವ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಕುದುರೆ ವ್ಯಾಪಾರಕ್ಕೆ ಷಡ್ಯಂತ್ರ: ಸಚಿವ ಡಿಕೆಶಿ
ಕಾಂಗ್ರೆಸ್‌ ಶಾಸಕರನ್ನು “ಆಪರೇಷನ್‌ ಕಮಲ’ ಮೂಲಕ ಸೆಳೆಯಲು ಬಿಜೆಪಿಯು ಕುದುರೆ ವ್ಯಾಪಾರ ಮಾಡುವ ಷಡ್ಯಂತ್ರವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

ಮೂವರು ಶಾಸಕರು ಈಗಾಗಲೇ ಮುಂಬೈನಲ್ಲಿದ್ದಾರೆ. ಆದರೆ, ಯಾವ ಪಕ್ಷದ ಶಾಸಕರು ಯಾರೊಂದಿಗಿದ್ದಾರೆ ಎಂದು ಹೇಳುವುದಿಲ್ಲ. ಬಿಜೆಪಿಯವರೊಂದಿಗೆ ಕಾಂಗ್ರೆಸ್‌ ಶಾಸಕರಿದ್ದಾರೋ ಅಥವಾ ಕಾಂಗ್ರೆಸ್‌ ಶಾಸಕರ ಜೊತೆ ಬಿಜೆಪಿ ಶಾಸಕರಿದ್ದಾರೋ ಎಲ್ಲವೂ ಬಹಿರಂಗ ವಾಗಲಿದೆ. ಶಾಸಕರ ಹೆಸರುಗಳನ್ನು ಹೇಳಿದರೆ, ಅವರಿಗೆ ತೊಂದರೆಯಾಗುತ್ತದೆ ಎಂದು ಕುತೂಹಲ ಮೂಡಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೂರವಾಣಿ ಮೂಲಕ ಅನೇಕ ಶಾಸಕರಿಗೆ ಆಮಿಷ ಒಡ್ಡಿರುವುದು ಈಗಾಗಲೇ ಬಹಿರಂಗವಾಗಿದೆ. ಕೆಲವು ಶಾಸಕರು ತಮಗೆ ಬಿಜೆಪಿ ಆಹ್ವಾನ ನೀಡಿದೆ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ.

ಜ.15ರ ನಂತರ ಹೊಸ ಸರ್ಕಾರ ಕ್ರಾಂತಿ ಮಾಡುತ್ತದೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯವರು ಆಮಿಷ ಒಡ್ಡುತ್ತಿರುವ ಮಾಹಿತಿಯನ್ನು ಶಾಸಕರು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಸದ್ಯದಲ್ಲಿಯೇ ದಾಖಲೆ ಸಮೇತ ಎಲ್ಲವನ್ನು ಬಹಿರಂಗ ಪಡಿಸುತ್ತೇವೆ ಎಂದು ಹೇಳಿದರು.

ಜಾಧವ್‌ ಬಿಜೆಪಿ ಸೇರ್ಪಡೆ?
ಸಚಿವ ಸ್ಥಾನ ಸಿಗಲಿಲ್ಲವೆಂದು ನಿರಾಶರಾಗಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದಟಛಿ ಮುನಿಸಿಕೊಂಡು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಅಧಿಕಾರ ವಹಿಸಿಕೊಳ್ಳದೇ ದೂರವುಳಿದಿರುವ ಶಾಸಕ ಡಾ| ಉಮೇಶ ಜಾಧವ, ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ ಎನ್ನುವ ಮಾತು ಬಲವಾಗಿ ಕೇಳಿಬರುತ್ತಿದೆ. ಮೀಸಲು ಚಿಂಚೋಳಿ ವಿಧಾನಸಭೆ ಮತಕ್ಷೇತ್ರದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾದರೂ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎನ್ನುವ ಅಸಮಾಧಾನ ಉಮೇಶ ಜಾಧವ ಅವರಲ್ಲಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ವಿಷಯ ಕೇವಲ ಊಹಾಪೋಹ.ನಾನೊಬ್ಬ ಅಪ್ಪಟ ಕಾಂಗ್ರೆಸ್‌ ಕಾರ್ಯಕರ್ತ. ರಾಜಕಾರಣದಲ್ಲಿ ಕಾಂಗ್ರೆಸ್‌ ನನಗೆ ಅನೇಕ ಹುದ್ದೆಗಳನ್ನು ನೀಡಿದೆ. ಹೀಗಾಗಿ ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ.
– ಗಣೇಶ ಹುಕ್ಕೇರಿ, ಸರ್ಕಾರದ ಮುಖ್ಯ ಸಚೇತಕ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.